ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ

ಕಾರವಾರದ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ನಡೆದ ಹಲ್ಲೆಯಿಂದಾಗಿ ನೇವಲ್ ಹೌಸಿಂಗ್ ಕಾಲೋನಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಹಲ್ಲೆಗಾರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟಿಸುತ್ತಿದ್ದಾರೆ. ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಪೊಲೀಸರು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ
ಅಯ್ಯಪ್ಪ ಮಾಲಾಧಾರಿಗಳ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ: ಕಾರವಾರದಲ್ಲಿ ಉದ್ವಿಗ್ನ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 13, 2025 | 4:15 PM

ಕಾರವಾರ, ಜನವರಿ 13: ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ (Ayyappa Devotees) ಮೇಲೆ ಹಲ್ಲೆ ಮಾಡಲಾಗಿದ್ದು, ಇದೀಗ ಹಲ್ಲೆ ಮಾಡಿರುವ ನೌಕಾನೆಲೆ ಸಿಬ್ಬಂದಿ ಬಂಧಿಸುವಂತೆ ಒತ್ತಾಯಿಸಿ ಕಾರವಾರ ಬಳಿಯ ನೇವಲ್ ಹೌಸಿಂಗ್ ಕಾಲೋನಿ ಬಳಿ ಪ್ರತಿಭಟನೆ ಮಾಡಲಾಗಿದೆ. ನಿನ್ನೆ ರಾತ್ರಿ 25ಕ್ಕೂ ಹೆಚ್ಚು ನೌಕಾನೆಲೆ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ನಿನ್ನೆ ರಾತ್ರಿ ವೇಳೆ ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ವಾಹನವನ್ನು ನೌಕಾನೆಲೆ ಸಿಬ್ಬಂದಿಗಳು ಅಡ್ಡಗಟ್ಟಿದ್ದಾರೆ ಎನ್ನಲಾಗಿದೆ. ಬಳಿಕ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಈ ವೇಳೆ ನೌಕಾನೆಲೆ ಸಿಬ್ಬಂದಿಯಿಂದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾರವಾರ: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ, 18 ಕಾರ್ಮಿಕರು ಅಸ್ವಸ್ಥ

ಸದ್ಯ ಈ ವಿಚಾರವಾಗಿ ನೌಕರರು ಕೆಲಸಕ್ಕೆ ತೆರಳದಂತೆ ಗೇಟ್ ಬಳಿ ತಡೆದು ಪ್ರತಿಭಟನೆ ಮಾಡಲಾಗಿದೆ. ಕಾಲೋನಿಯ ಗೇಟ್ ಮುಂದೆ ಸಾರ್ವಜನಿಕರು ಜಮಾಯಿಸಿದ್ದಾರೆ. ಹಲ್ಲೆಕೋರರನ್ನು ಬಂಧಿಸುವವರೆಗೂ ನಾವು ಪ್ರತಿಭಟನೆ ಹಿಂಪಡೆಯಲ್ಲ ಎನ್ನುತ್ತಿದ್ದಾರೆ.

ಪ್ರತಿಭಟನಾಕಾರರಿಗೆ ಮಾಜಿ‌ ಶಾಸಕಿ ರೂಪಾಲಿ ನಾಯ್ಕ್ ಬೆಂಬಲ ನೀಡಿದ್ದು, ಕಾಂಗ್ರೆಸ್ ಮುಖಂಡ ಶಂಭು‌ ಶೆಟ್ಟಿ, ಮುಖಂಡರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಸದ್ಯ ಈ ಘಟನೆಯಿಂದ ಕಾರವಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 4 ಡಿಎಆರ್ ತುಕಡಿ ಸೇರಿದಂತೆ ನೂರಾರು ಪೊಲೀಸರ ನಿಯೋಜನೆ ಮಾಡಲಾಗಿದೆ. ಸ್ಥಳದಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಗದಗದಲ್ಲಿ ಹಾಡಹಗಲೇ ಝಳಪಿಸಿದ ತಲ್ವಾರ್​: ಬೆಚ್ಚಿಬಿದ್ದ ಜನ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಇತ್ತಿಚೀನ ದಿನಗಳಲ್ಲಿ ಚಾಕು, ಚೂರಿ ಇರಿತದ ಪ್ರಕರಣಗಳು ವಿಪರೀತವಾಗಿದೆ. ವಾರದ ಹಿಂದೆಯೇ ಹಾಡಗಹಲೇ ಸ್ಕ್ರೂಡ್ರೈವ್​ನಿಂದ ಯುವಕನ ಮೇಲೆ ದಾಳಿ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಗದಗ ನಗರದಲ್ಲಿ ಹಾಡಹಗಲೇ ತಲವಾರಗಳು ಝಳಪಿಸಿವೆ.

ತಲವಾರಗಳಿಂದ ಇಬ್ಬರು ಯುವಕರ ಮೇಲೆ ದಾಳಿ ಮಾಡಿದ್ದು, ಇಬ್ಬರು ಯುವಕರು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸುದ್ದಿ ಹಬ್ಬುತ್ತಿದ್ದಂತೆ ಅವಳಿ ನಗರದ ಜನರು ಬೆಚ್ಚಿಬಿದಿದ್ದಾರೆ.

ಇದನ್ನೂ ಓದಿ: ಮಾರಿಕಾಂಬೆ ದೇವಿಯ ಗೊಂಬೆ ನಾಪತ್ತೆ: ಮುರಿನಕಟ್ಟೆಯಲ್ಲಿ ಸ್ಥಳೀಯರು, ಪೊಲೀಸರ ನಡುವೆ ಮಾತಿನ ಚಕಮಕಿ

ಮಂಜುನಾಥ ಹಿರೇಮಠ ಮತ್ತು ಶಹನವಾಜ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ದೇಹವೆಲ್ಲಾ ರಕ್ತಸಿಕ್ತವಾಗಿತ್ತು. ಇಬ್ಬರು ಕತ್ತಿಗೆ ಗಂಭೀರವಾಗಿ ಗಾಯವಾಗಿದ್ದು, ವೈದ್ಯರು ಚಿಕಿತ್ಸೆ ನೀಡಲಾಗಿದೆ. ಗದಗ ನಗರದ ಭೀಷ್ಮ ಕೆರೆ ಬಳಿ 8 ಜನರಿಂದ ದಾಳಿ ಮಾಡಿದ್ದಾರೆ. ಅಟ್ಟಾಡಿಸಿಕೊಂಡು ಬಂದು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಅಂತ ಗಾಯಾಳುಗಳು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೊಂದಿಗೂ ನನ್ನ ತಿಕ್ಕಾಟವಿಲ್ಲ: ಜಾರಕಿಹೊಳಿ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್