Karwar News: ವಿಷಯುಕ್ತ ಬೀಜ ಸೇವಿಸಿ ಗುಂಡೊಳ್ಳಿ ಸರ್ಕಾರಿ ಶಾಲೆಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

|

Updated on: Jun 20, 2023 | 6:25 PM

ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣವೇ ಕಾಳಗಿನಕೊಪ್ಪ ಗ್ರಾಮದ ಸರಕಾರಿ ಆಸ್ಪತ್ರೆ ಹಾಗೂ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಹಳಿಯಾಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karwar News: ವಿಷಯುಕ್ತ ಬೀಜ ಸೇವಿಸಿ ಗುಂಡೊಳ್ಳಿ ಸರ್ಕಾರಿ ಶಾಲೆಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು
Follow us on

ಕಾರವಾರ: ವಿಷಯುಕ್ತ ಬೀಜ ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (Haliyal) ತಾಲೂಕಿನ ಗುಂಡೊಳ್ಳಿಯ (Gundolli Village) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ. 1, 2 ಮತ್ತು 3ನೇ ತರಗತಿಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಬೆಳೆದಿದ್ದ ವಿಷಕಾರಿ ಬೀವನ್ನು ಮಕ್ಕಳು ಶೇಂಗಾ ಬೀಜ ಎಂದು ಭಾವಿಸಿ ತಿಂದಿದ್ದರು. ಇದಾದ ಕೆಲವೇ ಸಮಯದಲ್ಲಿ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತು.

ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣವೇ ಕಾಳಗಿನಕೊಪ್ಪ ಗ್ರಾಮದ ಸರಕಾರಿ ಆಸ್ಪತ್ರೆ ಹಾಗೂ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಹಳಿಯಾಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೀದರ್: ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಮಕ್ಕಳು ಹಾಗೂ ಜನರು ಅಸ್ವಸ್ಥಗೊಂಡ ಘಟನೆಗಳು ರಾಜ್ಯದ ಇತರೆಡೆಗಳಲ್ಲಿ ವರದಿಯಾಗಿರುವ ಸಂದರ್ಭದಲ್ಲೇ ಹಳಿಯಾಳ ಸರ್ಕಾರಿ ಶಾಲೆ ಮಕ್ಕಳೂ ಅಸ್ವಸ್ಥಗೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಇತ್ತೀಚೆಗಷ್ಟೇ 30ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳವಾರ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ