ಕಾರವಾರ: ಲಾರಿಯಲ್ಲೇ ಗುಪ್ತ ಕಂಪಾರ್ಟ್ಮೆಂಟ್ ನಿರ್ಮಿಸಿ ಗೋವಾದಿಂದ ಆಂಧ್ರಕ್ಕೆ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ವಶ

ಗೋವಾದಿಂದ ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 4,28,740 ರೂಪಾಯಿ ಮೌಲ್ಯದ 320.760 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದು ಆಂಧ್ರಪ್ರದೇಶ ಮೂಲದ ಜಂಗಿಲಿ ರಾಮು ಎಂಬಾತನನ್ನು ಬಂಧಿಸಿದ್ದಾರೆ. ಅನಮೋಡ್ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಲಾರಿಯಲ್ಲೇ ಗುಪ್ತ ಕಂಪಾರ್ಟ್ಮೆಂಟ್ ನಿರ್ಮಿಸಿ ಗೋವಾದಿಂದ ಆಂಧ್ರಕ್ಕೆ ಸಾಗಿಸುತ್ತಿದ್ದ 4 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯ ವಶ
ಗೋವಾದಿಂದ ಆಂಧ್ರಪ್ರದೇಶಕ್ಕೆ ಸಾಗಿಸುತ್ತಿದ್ದ ಮದ್ಯ ವಶ
Follow us
| Updated By: ಆಯೇಷಾ ಬಾನು

Updated on: Dec 03, 2023 | 12:11 PM

ಕಾರವಾರ, ಡಿ.03: ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ (Liquor Size). ಗೋವಾದಿಂದ ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 4,28,740 ರೂಪಾಯಿ ಮೌಲ್ಯದ 320.760 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದು ಆಂಧ್ರಪ್ರದೇಶ ಮೂಲದ ಜಂಗಿಲಿ ರಾಮು ಎಂಬಾತನನ್ನು ಬಂಧಿಸಿದ್ದಾರೆ (Arrest). ಅನಮೋಡ್ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಯಲ್ಲಿ ಪ್ರತ್ಯೇಕ ಗುಪ್ತ ಕಂಪಾರ್ಟ್ಮೆಂಟ್ ನಿರ್ಮಿಸಿ ಗೋವಾ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಸದ್ಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 320.760 ಲೀಟರ್ ವಿವಿಧ ಬ್ರಾಂಡ್​ನ 4,28,740ರೂ. ಬೆಲೆಯ ಮದ್ಯ ವಶಕ್ಕೆ ಪಡೆಯಲಾಗಿದೆ.

ಮನೆ ಬೀಗ ಮುರಿದು ಆಭರಣ, ನಗದು ಕಳ್ಳತನ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಂ.ಸೂಗುರು ಗ್ರಾಮದ ಚಾಗಿ ವೀರೇಶ್ ಎಂಬುವರ ಮನೆ ಬೀಗ ಮುರಿದು ಲಾಕರ್​ನಲ್ಲಿದ್ದ 190 ಗ್ರಾಂ ಚಿನ್ನಾಭರಣ, ಕೆಜಿಗಟ್ಟಲೆ ಬೆಳ್ಳಿ, 4.80 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿರಿಗೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಕಂದಕಕ್ಕೆ ಉರುಳಿಬಿದ್ದ ಬಸ್, ಓರ್ವ ಸಾವು, 20 ಮಂದಿಗೆ ಗಂಭೀರ ಗಾಯ

ದಾಖಲೆ ಇಲ್ಲದೆ 11.500 ಕೆಜಿ ಅಡಿಕೆ ಸಾಗಾಟ

ದಾಖಲೆ ಇಲ್ಲದೆ 11.500 ಕೆಜಿ ಅಡಿಕೆ ಸಾಗಾಟ ಮಾಡ್ತಿದ್ದು, ಕೆಐಎಎಲ್ ಏರ್ಪೋರ್ಟ್ ನಲ್ಲಿ 460 ಬ್ಯಾಗ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಸ್ಸಾಂ ಹಾಗೂ ಮಣಿಪುರದಿಂದ ಅಡಿಕೆ ಸಾಗಾಟವಾಗುತ್ತಿತ್ತು. ಮಯನ್ಮಾರ್ ನಿಂದ ಅಡಿಕೆಯನ್ನ ಕಳ್ಳಸಾಗಣೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಸ್ಸಾಂ, ಮಣಿಪುರ ಹಾಗೂ ಮಧ್ಯಪ್ರದೇಶ ಜಿಎಸ್ ಟಿ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದಾರೆ.

ಮಗುವನ್ನು ಕೊಂದು ತಾಯಿ ಆತ್ಮಹತ್ಯೆ

ತನ್ನ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಗುಜ್ಜರಕೆರೆ ಬಳಿಯ ಅಪಾರ್ಟ್ಮೆಂಟ್ ನಲ್ಲಿ ಫಾತಿಮಾ ರುಕಿಯಾ, ಮಗ ಅಬ್ದುಲ್ಲಾ ಹೂದ್​ನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ನಾಲ್ಕೂವರೆ ತಿಂಗಳಿನ ಗಂಡು ಮಗುವನ್ನ ನೀರು ತುಂಬಿದ್ದ ಬಾತ್ ಟಬ್ ಗೆ ಮುಳುಗಿಸಿ ಕೊಲೆ ಮಾಡಿ. ಬಳಿಕ ರೂಮಿನ ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ