ಕಾರವಾರ: ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಜನರಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರ ಆರಂಭ

ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ನೂರಾರು ಜನರು ಸುರಿಯುವ ಮಳೆಯನ್ನು ಲೆಕ್ಕಿಸದೇ ಟನಲ್ ಎದುರು ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಾರವಾರ: ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಜನರಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರ ಆರಂಭ
ಕಾರವಾರ ಟನಲ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು

Updated on: Oct 02, 2023 | 2:49 PM

ಕಾರವಾರ, ಅ.02: ಕಳೆದ ಎರಡು-ಮೂರು ತಿಂಗಳಿಂದ ಬಂದ್ ಮಾಡಲಾಗಿರುವ ಕಾರವಾರದ ಸುರಂಗ ಮಾರ್ಗವನ್ನು (Karwar Tunnel) ತೆರವುಗೊಳಿಸಬೇಕೆಂದು ಹೋರಾಟಗಳು ನಡೆಯುತ್ತಿದ್ದವು. ಸದ್ಯ ಈಗ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ. ಕಾರವಾರದ ಟನಲ್ ರಾಜಕೀಯಕ್ಕೆ ಜನರೇ ತಾರ್ಕಿಕ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾಡಳಿತ ಸಂಚಾರಕ್ಕೆ ಅನುಮತಿ ನೀಡದಿದ್ದರೂ ಜನರೇ ಟನಲ್ ಮಾರ್ಗದಲ್ಲಿ ಸಂಚಾರ ಪ್ರಾರಂಭಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಾಳೆಯಿಂದ ಟನಲ್ ಸಂಚಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ನೂರಾರು ಜನರು ಸುರಿಯುವ ಮಳೆಯನ್ನು ಲೆಕ್ಕಿಸದೇ ಟನಲ್ ಎದುರು ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸದ್ಯಕ್ಕೆ ದ್ವಿಚಕ್ರ ವಾಹನಗಳು ಮಾತ್ರ ಟನಲ್ ಮಾರ್ಗದಲ್ಲಿ ಸಂಚಾರ  ನಡೆಸುತ್ತಿವೆ.  ದ್ವಿಚಕ್ರ ವಾಹನಗಳ ಜೊತೆ ರಿಕ್ಷಾಗಳು ಕೂಡಾ ಟನಲ್‌ ಮಾರ್ಗದಿಂದಲೇ ಸಂಚಾರ ಮಾಡುತ್ತಿವೆ.

ಇದನ್ನೂ ಓದಿ: ಶಿವಮೊಗ್ಗ ಗಲಾಟೆ; ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ಕಳೆದ ಶನಿವಾರ ಎಂಎಲ್‌ಸಿ ಗಣಪತಿ ಉಳ್ವೇಕರ್ ಉಳ್ವೇಕರ್ ನೇತೃತ್ವದಲ್ಲಿ ಜನಸಾಮಾನ್ಯರು ಭಾರೀ ಪ್ರತಿಭಟನೆ ನಡೆಸಿದ್ದರು. ರಾತ್ರಿ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸೋಮವಾರ ಟನಲ್ ತೆರೆಯುವುದಾಗಿ ಹೇಳಿಕೆ ನೀಡಿದ್ದರು. ಜಿಲ್ಲಾಡಳಿತ ಟನಲ್ ತೆರೆಯದಿದ್ರೂ ಟನಲ್‌ ಮಾರ್ಗದಲ್ಲಿ ಪ್ರಯಾಣ ಬೆಳೆಸಲು ಜನರು ಪ್ರಾರಂಭಿಸಿದ್ದಾರೆ. ಈ ಹಿಂದೆ ಒಂದು ಬದಿಯ ಸುರಂಗವನ್ನು ಜ. 6ರಂದು, ಇನ್ನೊಂದು ಬದಿಯ ಸುರಂಗ ಮಾರ್ಗವನ್ನು ಜೂ. 5 ರಂದು ಲೋಕಾರ್ಪಣೆಗೊಳಿಸಲಾಗಿತ್ತು. ಮಳೆಗಾಲದಲ್ಲಿ ಸುರಂಗ ಮಾರ್ಗ ಸೋರುತ್ತಿದ್ದ ಕಾರಣ ಫಿಟ್ನೆಸ್ ಸರ್ಟಿಫಿಕೇಟ್ ಕೇಳಿ ಮಾರ್ಗ ಬಂದ್ ಮಾಡಲಾಗಿತ್ತು. ಕಳೆದ ಎರಡು ತಿಂಗಳಿಂದ ಸುರಂಗ‌ ಮಾರ್ಗ ಮುಚ್ಚಿದ್ದರಿಂದ ಬಿಜೆಪಿ ಜನಸಾಮಾನ್ಯರ ಜೊತೆ ಪ್ರತಿಭಟನೆಗಿಳಿದಿತ್ತು. ಇಂದು ಜನಸಾಮಾನ್ಯರಿಂದಲೇ ಟನಲ್ ಮಾರ್ಗ ಓಪನ್ ಮಾಡಲಾಗಿದೆ.

ಇನ್ನು ಈ ಹಿಂದೆ ಸಾರ್ವಜನಿಕರು ಟನಲ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದರು. ಬಲವಂತವಾಗಿ ಬ್ಯಾರಿಕೆಡ್ ತೆರವುಗೊಳಿಸಲು ಪ್ರತಿಭಟನಾಕಾರರು ಮುನ್ನುಗ್ಗಿದ್ದರು. ಆ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಆಗ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ಎಳೆದೊಯ್ದು ಪೊಲೀಸ್ ವಾಹನದಲ್ಲಿ ಬಂಧಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ