AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?

Chakravarti Sulibele Derogatory Remarks Against Siddaramaiah: ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ಯಾಕೆ? ಏನಿದು ಪ್ರಕರ?

ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?
ವಿನಾಯಕ ಬಡಿಗೇರ್​
| Edited By: |

Updated on: Oct 13, 2023 | 3:24 PM

Share

ಕಾರವಾರ, (ಅಕ್ಟೋಬರ್ 13): ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲೆಬೆಲೆ (Chakravarti Sulibele) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕಾರವಾರ (Karwar) ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ (sumoto case) ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲೆಬೆಲೆ ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡಕ್ಕೆ ಬಂದಿದ್ದರು. ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಲೆಬೆಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲೆಬೆಲೆ , ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದಾರೆಂಬ ಆರೋಪ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಇತ್ತೀಚೆಗಷ್ಟೇ ಕೆಪಿಸಿಸಿ (KPCC) ಸಾಮಾಜಿಕ ಜಾಲತಾಣ (Social Media) ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ (Fecbook) ​ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ  ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಫೇಸ್​​ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಮೇಲೆ ಸೌಂಗಧಿಕಾ ಅವರು ವಿನೋಬನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ