AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran Israel War: ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ!

ಮಧ್ಯಪ್ರಾಚ್ಯ ಯುದ್ಧ ಸಂಘರ್ಷದಿಂದ ಕಾರವಾರದ ವಾಣಿಜ್ಯ ಬಂದರಿಗೆ ಭಾರಿ ಹೊಡೆತ ಬಿದ್ದಿದೆ. ಇರಾನ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣ ನಿಂತಿದ್ದು, ಪ್ರತಿ ತಿಂಗಳು ಸುಮಾರು 80 ಲಕ್ಷ ರೂ. ಆದಾಯ ನಷ್ಟವಾಗುತ್ತಿದೆ. ಗಲ್ಫ್ ರಾಷ್ಟ್ರಗಳಿಂದ ಡೀಸೆಲ್ ಪೂರೈಕೆಯೂ ಕಷ್ಟವಾಗಿದೆ. ಇದರಿಂದ ಬಂದರು ಅವಲಂಬಿತ ಲಾರಿ ಮಾಲೀಕರು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುದ್ಧದ ಪರಿಣಾಮ ವಾಣಿಜ್ಯ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.

Iran Israel War: ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ!
ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ! Image Credit source: nilpala.com
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Apr 04, 2026 | 6:45 AM

Share

ಕಾರವಾರ, ಮಾರ್ಚ್​ 09: ಉತ್ತರ ಕನ್ನಡ ಜಿಲ್ಲೆಯ (Uttara Kannada) ಕಾರವಾರದಲ್ಲಿ ಮಧ್ಯಪ್ರಾಚ್ಯ ಯುದ್ಧ ಸಂಘರ್ಷದ ಪರಿಣಾಮ ವಾಣಿಜ್ಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಇರಾನ್‌ನಿಂದ ಕಾರವಾರದ ವಾಣಿಜ್ಯ ಬಂದರಿಗೆ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ತಿಂಗಳಿಗೆ 80 ಲಕ್ಷ ರೂ.ಗಳವರೆಗೂ ನಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ.

ಡೀಸೆಲ್ ಸರಬರಾಜಿಗೂ ಸಂಕಷ್ಟ

ಸಾಮಾನ್ಯವಾಗಿ ಪ್ರತಿ ತಿಂಗಳು ಇರಾನ್‌ನಿಂದ ಕಚ್ಚಾ ಡಾಂಬರ್ ಸಾಗಣೆ ಹಡಗುಗಳು ಕಾರವಾರ ಬಂದರಿಗೆ ಆಗಮಿಸುತ್ತಿದ್ದವು. ಆದರೆ ಯುದ್ಧ ಪರಿಸ್ಥಿತಿಯಿಂದ ಈಗ ಹಡಗುಗಳು ಬಾರದ ಕಾರಣ ಬಂದರು ಬಿಕೋ ಎನ್ನುತ್ತಿದೆ. ಇದರಿಂದ ಗಲ್ಪ್ ರಾಷ್ಟ್ರಗಳಿಂದ ಬರುತ್ತಿದ್ದ ಡೀಸೆಲ್ ಸರಬರಾಜಿಗೂ ಸಂಕಷ್ಟ ಉಂಟಾಗಿದೆ. ಕಾರವಾರದ ಕದಂಬ ನೌಕಾ ನೆಲೆಗೆ ಅಗತ್ಯವಿರುವ ಡೀಸೆಲ್ ಅನ್ನು ಈಗ ಮುಂಬೈಯಿಂದ ತರಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಬಂದರು ವಾಣಿಜ್ಯ ಚಟುವಟಿಕೆಗಳ ಮೇಲೆ ಅವಲಂಬಿತವಾಗಿದ್ದ ಲಾರಿ ಮಾಲೀಕರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ ಜಗತ್ತಿಗೇ ಕಂಟಕವಾಗಲಿದೆ ಇರಾನ್ ಯುದ್ಧ: ಮಾರಕ ಕಾಯಿಲೆ ಹರಡುವ ಭೀತಿ, ಭಾರತಕ್ಕೂ ಇದೆ ಆತಂಕ!

ಕಚ್ಚಾ ಡಾಂಬರ್ ಸಾಗಣೆಗಾಗಿ ಬಂದಿದ್ದ ಲಾರಿಗಳು ಕಾರವಾರ ವಾಣಿಜ್ಯ ಬಂದರು ಬಳಿ ಸಾಲುಗಟ್ಟಿ ನಿಂತಿದ್ದು, ಕಳೆದ ಹತ್ತು ದಿನಗಳಿಂದ ಕೆಲಸವಿಲ್ಲದೇ ನಿಂತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಡಗು ಸಂಚಾರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬಂದರಿಗೆ ಪ್ರತಿ ತಿಂಗಳು ಸುಮಾರು 70 ರಿಂದ 80 ಲಕ್ಷ ರೂಪಾಯಿ ನಷ್ಟ ಉಂಟಾಗುತ್ತಿದೆ ಎಂದು ತಿಳಿದುಬಂದಿದೆ. ಇದರಿಂದ ಬಂದರು ಆಧಾರಿತ ವ್ಯಾಪಾರಿಗಳು ಹಾಗೂ ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:43 pm, Mon, 9 March 26

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ