ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ವಿದೇಶದಲ್ಲಿ ಅಪಾಘಾತ ಸಂಭವಿಸಿದ ಪರಿಣಾಮ ಮುಂಡಗೋಡದ ಮೂವರು ದುರ್ಮರಣ ಹೊಂದಿದ್ದಾರೆ.

ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು
ಮೃತರು
Edited By:

Updated on: Apr 07, 2024 | 4:56 PM

ಕಾರವಾರ, ಏಪ್ರಿಲ್​ 07: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ (died) ಘಟನೆ ನಡೆದಿದೆ. ಮಾ.26ರಂದು ರಾತ್ರಿ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ವಿದೇಶದಲ್ಲಿ ಅಪಾಘಾತ ಸಂಭವಿಸಿದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಮೂವರು ದುರ್ಮರಣ ಹೊಂದಿದ್ದಾರೆ. ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ಖಾಸಗಿ ಬಸ್​​​ ಪಲ್ಟಿಯಾಗಿ ಮೂವರು ಪ್ರಯಾಣಿಕರು ಸಾವು

ಚಿತ್ರದುರ್ಗ: ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್​​​ ​​ಪಲ್ಟಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೂವರು ಮೃತರ ಪೈಕಿ ಇಬ್ಬರ ಗುರುತು ಪತ್ತೆ ಹಚ್ಚಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಗಣಪತಿ(40) ಹಾಗೂ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಜಗದೀಶ್ ಮೃತರು. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: ದಂಪತಿ ಮಧ್ಯೆ ಗಲಾಟೆ: ಸೀರೆಯಿಂದ ಕತ್ತು ಬಿಗಿದು ಪತ್ನಿ ಹತ್ಯೆಗೈದ ಪತಿ

ಮುಂಜಾನೆ 3 ಗಂಟೆಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ದುರಂತ ಸಂಭವಿಸಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೂಡ್ಸ್​​ ವಾಹನ ಡಿಕ್ಕಿಯಾಗಿ ಟ್ರ್ಯಾಕ್ಟರ್​​ನಲ್ಲಿದ್ದ ರೈತ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಅಪಘಾತ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ರೈತ ಮೃತಪಟ್ಟಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗೂಡ್ಸ್ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್(41) ಮೃತ ವ್ಯಕ್ತಿ.

ಇದನ್ನೂ ಓದಿ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ

ಬೆಳಗಾವಿ ನಗರಕ್ಕೆ ಕೊತ್ತಂಬರಿ ಸೊಪ್ಪು ತರುವಾಗ ಘಟನೆ ನಡೆದಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Sun, 7 April 24

ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us