Uttar Kannada News: ಪೊಲೀಸ್‌ ಠಾಣೆಯಲ್ಲೇ ವಿಷ ಕುಡಿದು ಆರೋಪಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

|

Updated on: Jun 26, 2023 | 7:39 AM

ಪೊಲೀಸ್‌ ಠಾಣೆಯಲ್ಲೇ ವಿಷ ಕುಡಿದು ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದ ತನಿಖೆಯನ್ನು ಇಂದು (ಜೂ.26) ಸಿಐಡಿ ತನಿಖಾಧಿಕಾರಿಗೆ ಹಸ್ತಾಂತರಿಸಲು ಉತ್ತರ ಕನ್ನಡ ಜಿಲ್ಲಾ ಪೊಲೀಸರು ತೀರ್ಮಾನಿಸಿದ್ದಾರೆ.

Uttar Kannada News: ಪೊಲೀಸ್‌ ಠಾಣೆಯಲ್ಲೇ ವಿಷ ಕುಡಿದು ಆರೋಪಿ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ
ಹೊನ್ನಾವರ ಪೊಲೀಸ್​ ಠಾಣೆ
Follow us on

ಕಾರವಾರ: ಪೊಲೀಸ್‌ ಠಾಣೆಯಲ್ಲೇ (Police Station) ವಿಷ ಕುಡಿದು ಆರೋಪಿ (Accused) ಆತ್ಮಹತ್ಯೆ (Sucide) ಮಾಡಿಕೊಂಡಿದ್ದ ಪ್ರಕರಣದ ತನಿಖೆಯನ್ನು ಇಂದು (ಜೂ.26) ಸಿಐಡಿ (CID) ತನಿಖಾಧಿಕಾರಿಗೆ ಹಸ್ತಾಂತರಿಸಲು ಜಿಲ್ಲಾ ಪೊಲೀಸರು ತೀರ್ಮಾನಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗೆ ಮನವಿ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ವರದಿ ಹಿನ್ನೆಲೆ ಸಿಐಡಿ ಅಧಿಕಾರಿಗಳಿಗೆ ವಹಿಸಲು ನಿರ್ಧರಿಸಲಾಗಿದೆ.

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಈ ವೇಳೆ ಓರ್ವ ಆರೋಪಿ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದನು.

ಇದನ್ನೂ ಓದಿ: ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ

ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಠಾಣೆ ಇನ್ಸ್‌ಪೆಕ್ಟರ್‌ ಮಂಜುನಾಥ್, ಪಿಎಸ್​ಐ ಮಂಜೇಶ್ವರ್ ಚಂದಾವರ ಹಾಗೂ ಕಾನ್ಸ್​ಟೇಬಲ್​ಗಳಾದ ಮಹಾವೀರ, ರಮೇಶ್, ಸಂತೋಷ್ ಅವರನ್ನು ಅಮಾನತುಗೊಳಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 am, Mon, 26 June 23