ಕಾರವಾರ: ಅವೈಜ್ಞಾನಿಕ ಮೀನುಗಾರಿಕೆಯಿಂದ ನಾಡದೋಣಿ ಮೀನುಗಾರರಿಗೆ ಸಂಕಷ್ಟ; ಅಸಾಂಪ್ರದಾಯಿಕ ಮೀನುಗಾರಿಕೆ ಬಂದ್​ ಮಾಡುವಂತೆ ಒತ್ತಾಯ

ಜಿಲ್ಲೆಯಲ್ಲಿ ಅವೈಜ್ಞಾನಿಕವಾಗಿ ಯಾಂತ್ರಿಕ ದೋಣಿಗಳಿಂದ ಮೀನುಗಾರಿಕೆ ಮಾಡಲಾಗುತ್ತಿದ್ದು, ಸಾಂಪ್ರದಾಯಿಕ ದೋಣಿಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಮೀನುಗಾರರಿಗೆ ಸಂಕಷ್ಟವಾಗಿದೆ.

ಕಾರವಾರ: ಅವೈಜ್ಞಾನಿಕ ಮೀನುಗಾರಿಕೆಯಿಂದ ನಾಡದೋಣಿ ಮೀನುಗಾರರಿಗೆ ಸಂಕಷ್ಟ; ಅಸಾಂಪ್ರದಾಯಿಕ ಮೀನುಗಾರಿಕೆ ಬಂದ್​ ಮಾಡುವಂತೆ ಒತ್ತಾಯ
ಕಾರವಾರ ಮೀನುಗಾರರ ಹೋರಾಟ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 15, 2023 | 2:45 PM

ಉತ್ತರಕನ್ನಡ: ರಾಜ್ಯದ ಕರಾವಳಿಯಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಹೆಚ್ಚಾಗಿ ನಡೆಯುತ್ತಿದೆಯೆಂಬ ಆರೋಪ ಹೆಚ್ಚಾಗಿದೆ. ಅರಬ್ಬಿ ಸಮುದ್ರದಲ್ಲಿ ದೊಡ್ಡದೊಡ್ಡ ಯಾಂತ್ರಿಕ ದೋಣಿಗಳಿಂದ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಫಿಶಿಂಗ್ ನಡೆಸಲಾಗುತ್ತಿದೆ ಎಂದು ಸಾಂಪ್ರದಾಯಿಕ ಮೀನುಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡದೋಣಿ ಮೀನುಗಾರರ ಭವಿಷ್ಯದ ಸುರಕ್ಷತೆಗಾಗಿ ಬೆಳಕು ಆಧಾರಿತ ಮೀನುಗಾರಿಕೆ ಸಂಪೂರ್ಣ ನಿಷೇಧಿಸಬೇಕೆಂದು ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಆಗ್ರಹಿಸಿದ್ದಾರೆ.

ಕರ್ನಾಟಕದ ಕರಾವಳಿಯಲ್ಲಿ ಸುಮಾರು 4500 ಕ್ಕೂ ಹೆಚ್ಚು ಮೇಲ್ಪಟ್ಟು ಆಳ ಸಮುದ್ರದ ಪರ್ಸಿನ್ ಬೋಟುಗಳು ಯಾಂತ್ರೀಕೃತ ಮೀನುಗಾರಿಕೆಯನ್ನು ಮಾಡುತ್ತವೆ. ಸುಮಾರು 9500 ಕ್ಕೂ ಹೆಚ್ಚು ನಾಡದೋಣಿಗಳಿಂದ ತಲೆತಲಾಂತರದಿಂದ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ನಾಡದೋಣಿ ಮೀನುಗಾರರ ಹಕ್ಕನ್ನ ಅವೈಜ್ಞಾನಿಕ ಮೀನುಗಾರಿಕೆ ನಡೆಸುವ ಮೀನುಗಾರರು ಕಸಿದುಕೊಳ್ಳುವ ಯತ್ನ ನಡೆಸುತ್ತಿದ್ದಾರೆ. ಕಾನೂನು ಬಾಹಿರವಾಗಿ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಡೆಸಿ ಮತ್ಸ್ಯ ಸಂತತಿಗೆ ಸಂಚಕಾರ ತರುತ್ತಿದ್ದಾರೆ. ಅಲ್ಲದೇ ಸಾಂಪ್ರದಾಯಿಕ ಮೀನುಗಾರರು ಮೀನು ಸಿಗದೆ ಕಂಗಾಲಾಗುವಂತಾಗಿದೆ ಎಂದು ಬಡ ಕುಟುಂಬಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಅವರಿಗೆ ತಮ್ಮ ಅಹವಾಲು ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಅವೈಜ್ಞಾನಿಕ ಮೀನುಗಾರಿಕೆಯನ್ನ ನಿಷೇಧಿಸಲಾಗಿದೆ. ಸುಪ್ರಿಂಕೋರ್ಟ್ ಆದೇಶದಂತೆ ಅವೈಜ್ಞಾನಿಕವಾಗಿ ಮೀನುಗಾರಿಕೆ ನಡೆಸುವ ಯಾಂತ್ರಿಕ ದೋಣಿಯನ್ನ ಜಪ್ತಿ ಮಾಡಬೇಕು. ಅವರ ಲೈಸೆನ್ಸ್ ಕ್ಯಾನ್ಸಲ್ ಮಾಡಬೇಕು. ಇಲ್ಲದಿದ್ದಲ್ಲಿ ಇನ್ನು ಕೆಲ ದಿನಗಳಲ್ಲಿ ಮೀನುಗಾರಿಕೆ ನಾಶವಾಗಲಿದೆ ಎಂದು ದೂರಿದ್ದಾರೆ. ಈ ಬಗ್ಗೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳನ್ನ ಪ್ರಶ್ನಿಸಿದರೇ ಮೀನುಗಾರರ ದೂರಿನಂತೆ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಸಭೆ ನಡೆಸಿ ಸೂಚನೆ ನೀಡಲಾಗುವುದು ಅವೈಜ್ಞಾನಿಕ ಮೀನುಗಾರಿಕೆ ನಡೆಸುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರಂತೆ.

ಇದನ್ನೂ ಓದಿ:ಜಾತ್ರೆ ಅಂದರೆ ತೇರು, ಮೆರವಣಿಗೆ ಅಷ್ಟೇ ಅಲ್ಲ! ಕಾರವಾರದಲ್ಲಿ ನಡೆಯಿತು ರಂಗುರಂಗಿನ ರಂಗೋಲಿ ಜಾತ್ರೆ! ಒಮ್ಮೆ ನೀವೂ ಕಣ್ಣಾಡಿಸಿ

ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಕರಾವಳಿ ಭಾಗದಲ್ಲಿ ಯಾಂತ್ರಿಕ ದೋಣಿ ಮತ್ತು ನಾಡದೋಣಿ ಮೀನುಗಾರರ ನಡುವೆ ಕದನವೇ ನಡೆಯುತ್ತಿದೆ. ಮೀನುಗಾರಿಕೆ ನಡೆಸುವ ಸಮುದ್ರದ ನಡುವೆಯೇ ಆಗಾಗ ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳು ಕೂಡ ನಡೆದಿದೆ. ಆದರೆ ಸಂಬಂಧಪಟ್ಟ ಮೀನುಗಾರಿಕೆ ಇಲಾಖೆ ಮೌನವಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಮುಂದೊಂದು ದಿನ ಮೀನುಗಾರಿಕಾ ವಲಯದಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ.

ವರದಿ: ವಿನಾಯಕ ಬಡಿಗೇರ ಟಿವಿ 9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ