ಉಗ್ರರಿಂದ ತರಬೇತಿ ಪಡೆದಿದ್ದ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಅರೆಸ್ಟ್

2020ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿ-ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದರು. ಇದೀಗ, ಪಕ್ರರಣದ ಮೋಸ್ಟ್ ವಾಂಟೆಡ್ ಆರೋಪಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಅನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆರೋಪಿ 302 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಉಗ್ರರಿಂದ ತರಬೇತಿ ಪಡೆದಿದ್ದ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಅರೆಸ್ಟ್
ಆರೋಪಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್
Updated By: ವಿವೇಕ ಬಿರಾದಾರ

Updated on: Apr 26, 2025 | 11:08 PM

ಉತ್ತರಕನ್ನಡ, ಏಪ್ರಿಲ್​ 26: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ (Uttar Kannada) ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ (Sirasi) ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದಲ್ಲದೇ ಉಗ್ರರಿಂದ ತರಬೇತಿ ಪಡೆದಿದ್ದನು. ಕೆಜಿ ಹಳ್ಳಿ-ಡಿಜಿ ಹಳ್ಳಿ ಗಲಭೆ ನಂತರ ಆರೋಪಿ ಮೌಸೀನ್​ ತಲೆಮರೆಸಿಕೊಂಡಿದ್ದನು. ಮೌಸೀನ್​ ಹೈದರಾಬಾದ್‌ಗೆ ತೆರಳಿ, ನಂತರ ಬಿಜಾಪುರ ಜಿಲ್ಲೆಯ ಸಿಂಧಗಿಯಲ್ಲಿ ನೆಲೆಸಿದ್ದನು.

ಈತನನ್ನು ಸೆರೆಹಿಡಿಯಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.‌ನಾರಾಯಣ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಆರೋಪಿ ಮೌಸೀನ್​ ಸಿಂಧಗಿಯಲ್ಲಿರುವ ಮಾಹಿತಿ ತಿಳಿದ ಪೊಲೀಸರು, ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್​ಐಎಯಿಂದ ಬಂಧಿತನಾಗಿದ್ದ ಸಾದಿಕ್​, ಆರೋಪಿ ಮೌಸೀನ್​ನನ್ನು ಟ್ರೇನ್​ ಮಾಡಿದ್ದನು. ಈ ಮೌಸಿಕ್​ ಶಿರಸಿಯಲ್ಲಿ ಈ ಹಿಂದಿನ ಸೆಕ್ಷನ್​ 302 ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಕೊನೆಗೂ, ಮೋಸ್ಟ್ ವಾಂಟೆಡ್ ಮೌಸೀನ್ ಶುಕುರ್ ಪೊಲೀಸರ ಅತಿಥಿಯಾಗಿದ್ದಾನೆ.

ಏನಿದು ಕೆಜಿ ಹಳ್ಳಿ, ಡಿಜೆ ಪ್ರಕರಣ

ಪ್ರವಾದಿ ಮೊಹಮ್ಮದ್​ ಪೈಗಂಬರ್ ಅವರನ್ನು ನಿಂದನೆ ಮಾಡಲಾಗಿದೆ ಎಂದು ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಗಲಭೆ ಸಂದರ್ಭದಲ್ಲಿ ಅಂದಿನ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಸಾರ್ವಜನಿಕರ ಮನೆಗೆ ಬೆಂಕಿ ಹಾಕಲಾಗಿತ್ತು. ಅಲ್ಲದೆ ಕಿಡಿಗೇಡಿಗಳು ಡಿಜೆ ಹಳ್ಳಿ ಪೊಲೀಸ್​ ಠಾಣೆಗೂ ಬೆಂಕಿ ಹಾಕಿದ್ದರು. ಈ ಸಂದರ್ಭದಲ್ಲಿ ಗಲಭೆ ನಿಯಂತ್ರಣ ಮಾಡಲು ಪೊಲೀಸರು ಗೋಲಿಬಾರ್ ಮಾಡಿದ್ದರು. ಮೂವರು ಮೃತಪಟ್ಟಿದ್ದರು.

ಇದನ್ನೂ ಓದಿ
ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್​ಬುಕ್​ನಲ್ಲಿ ಪೋಸ್
ಪೀರ್ ಪಂಜಾಲ್ ಪರ್ವತದಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿರುವುದಕ್ಕೆ ಸ್ಪಷ್ಟ ಕಾರಣ ಕೊಟ್ಟ ಸಿಎಂ

ಬೆಲೆ ಬಾಳುವ ವಸ್ತುಗಳನ್ನು ಕಳುವು ಮಾಡಲಾಗಿತ್ತು. ಬೆಂಗಳೂರಿನ ಸಿಸಿಬಿ ಪೊಲೀಸರ ತನಿಖೆ ವೇಳೆ ಎಸ್​ಡಿಪಿಐ ಮತ್ತು ಪಿಎಫ್​ಐ ಕಾರ್ಯಕರ್ತರ ಕೈವಾಡ ಇರುವುದು ಬೆಳಕಿಗೆ ಬಂದಿತ್ತು. ಅಲ್ಲದೆ, 360 ಅಧಿಕ ಗಲಭೆಕೋರರನ್ನು ಬಂಧಿಸಲಾಗಿತ್ತು. ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Sat, 26 April 25