AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್

ವೀಕೆಂಡ್ ಪ್ರವಾಸಕ್ಕೆ ಸುವರ್ಣಾವಕಾಶ! KSTDC ಜೋಗ ಜಲಪಾತ ಮತ್ತು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆಕರ್ಷಕ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಭಾರತದ ಎರಡನೇ ಅತಿ ಎತ್ತರದ ಜಲಪಾತ, ಶರಾವತಿ ಹಿನ್ನೀರಿನ ಸೌಂದರ್ಯ, ಮತ್ತು ಪೂಜ್ಯ ದೇವಾಲಯಕ್ಕೆ ಭೇಟಿ ನೀಡಿ. AC ಕೋಚ್, ಉತ್ತಮ ವಸತಿ, ವೃತ್ತಿಪರ ಗೈಡ್, ಹಾಗೂ LTC ಸೌಲಭ್ಯಗಳೊಂದಿಗೆ ಸುಖಕರ ಯಾತ್ರೆ ಕೈಗೊಳ್ಳಿ. ಪ್ರಕೃತಿ ಹಾಗೂ ಭಕ್ತಿಯ ಸಮ್ಮಿಲನ ಈ ಪ್ಯಾಕೇಜ್.

ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 18, 2026 | 12:27 PM

Share

ಬೆಂಗಳೂರು, ಜು.18: ವೀಕೆಂಡ್‌ನಲ್ಲಿ ಎಲ್ಲಾದರೂ ಸುಂದರ ಪ್ರಕೃತಿಯ ಮಡಿಲಿಗೆ ಸಾಗಬೇಕು, ಜೊತೆಗೆ ದೇವರ ದರ್ಶನ ಪಡೆಯಬೇಕು ಎಂದು ಯೋಜಿಸುತ್ತಿರುವ ಪ್ರವಾಸಿಗರಿಗೆ ಸುವರ್ಣಾವಕಾಶವೊಂದು ಇಲ್ಲಿದೆ ನೋಡಿ. ಭಾರತದ ಎರಡನೇ ಅತಿ ಎತ್ತರದ ಜಲಪಾತವಾದ ವಿಶ್ವಪ್ರಸಿದ್ಧ ಜೋಗ ಜಲಪಾತ (Jog Falls) ಹಾಗೂ ಶರಾವತಿಯ ಹಿನ್ನೀರಿನ ನಡುವೆ ಕಂಗೊಳಿಸುವ ಸಿಗಂದೂರು (Siganduru) ಕ್ಷೇತ್ರಕ್ಕೆ ಅತ್ಯಾಕರ್ಷಕ ಪ್ರವಾಸ ಪ್ಯಾಕೇಜ್​​ನ್ನು kstdc ಘೋಷಣೆ ಮಾಡಿದೆ.

ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳು:

ಜೋಗ ಜಲಪಾತ: ಶರಾವತಿ ನದಿಯು ಬರೋಬ್ಬರಿ 830 ಅಡಿ ಎತ್ತರದಿಂದ ಧುಮುಕುವ ಮೂಲಕ ಸೃಷ್ಟಿಯಾಗಿರುವ ಜೋಗ ಜಲಪಾತವು ದೇಶದ ಪ್ರಮುಖ ಆಕರ್ಷಣೆಯಾಗಿದೆ. ಇದನ್ನು ‘ಗೇರುಸೊಪ್ಪೆ ಜಲಪಾತ’ ಹಾಗೂ ‘ಜೋಗದ ಗುಂಡಿ’ ಎಂದೂ ಕರೆಯಲಾಗುತ್ತದೆ.

ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ, ಸಿಗಂದೂರು: ಶರಾವತಿ ನದಿಗೆ ನಿರ್ಮಿಸಲಾದ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರಿನಿಂದ ಮೂರು ಕಡೆ ಆವೃತವಾಗಿರುವ ಸಿಗಂದೂರು ಗ್ರಾಮವು ಅತ್ಯಂತ ಸುಂದರ ಪ್ರಕೃತಿಯನ್ನು ಹೊಂದಿದೆ. ಇಲ್ಲಿನ ಪ್ರಸಿದ್ಧ ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ನಿತ್ಯ ಸಹಸ್ರಾರು ಭಕ್ತರು ಆಗಮಿಸುತ್ತಾರೆ.

ಪ್ಯಾಕೇಜ್‌ನ ಪ್ರಮುಖ ಸೌಲಭ್ಯಗಳು:

ಸಾರಿಗೆ ವ್ಯವಸ್ಥೆ: ಸುಖಕರ ಪ್ರಯಾಣಕ್ಕಾಗಿ ಅತ್ಯಾಧುನಿಕ ಎಸಿ ಐಷಾರಾಮಿ ಕೋಚ್ (A/c Deluxe Coach) ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ವಸತಿ ಸೌಲಭ್ಯ: ಪ್ರವಾಸಿಗರು ಫ್ರೆಶ್ ಅಪ್ ಆಗಲು ಪ್ರಸಿದ್ಧ ‘ಜೀವನ್ ಲಾಡ್ಜ್’ ನಲ್ಲಿ ವಾಸ್ತವ್ಯದ ವ್ಯವಸ್ಥೆ ಇರಲಿದೆ.

ವೃತ್ತಿಪರ ಗೈಡ್: ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಹಾಗೂ ಇತಿಹಾಸವನ್ನು ತಿಳಿಸಿಕೊಡಲು ಪರಿಣಿತ ಗೈಡ್ ಸೌಲಭ್ಯ ಲಭ್ಯವಿರಲಿದೆ.

LTC ಸೌಲಭ್ಯ: ರಾಜ್ಯ, ಕೇಂದ್ರ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ವಲಯದ ಉದ್ಯಮಗಳ ನೌಕರರಿಗೆ ಇಲಾಖಾ ನಿಯಮಾವಳಿಗಳ ಅನ್ವಯ ಎಲ್‌ಟಿಸಿ (LTC) ಸೌಲಭ್ಯ ಒದಗಿಸಲಾಗುವುದು.

ಇದನ್ನೂ ಓದಿ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ KSTDC 2 ದಿನಗಳ ಪ್ರೀಮಿಯಂ ಪ್ಯಾಕೇಜ್; ಕಡಿಮೆ ದರದಲ್ಲಿ ವಿಐಪಿ ದರ್ಶನ, ರೂಮ್ ಸೌಲಭ್ಯದ ಕಂಪ್ಲೀಟ್ ವಿವರ ಇಲ್ಲಿದೆ

ಪ್ರವಾಸ ಪ್ಯಾಕೇಜ್ ದರ ಪಟ್ಟಿ:

ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ರೂಮ್ ಹಂಚಿಕೆಯ ಆಧಾರದ ಮೇಲೆ ದರವನ್ನು ನಿಗದಿಪಡಿಸಲಾಗಿದೆ. ಕಡಿಮೆ ವೆಚ್ಚದಲ್ಲಿ ಜೋಗದ ಸಿರಿ ಹಾಗೂ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನ ಪಡೆಯಲು ಇಚ್ಛಿಸುವ ಸಾರ್ವಜನಿಕರು ಈ ಪ್ರವಾಸ ಪ್ಯಾಕೇಜ್‌ನ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್