ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ

ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ
13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ
Follow us
TV9 Web
| Updated By: preethi shettigar

Updated on:Nov 03, 2021 | 10:52 AM

ಉತ್ತರ ಕನ್ನಡ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪೊಲೀಸರ ತಪಾಸಣೆ ವೇಳೆ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ ದೀಪಾವಳಿ ಹಬ್ಬದ ಹಿನ್ನಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ. ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ ನಕಲಿ ಪೊಲೀಸ್ ಬಂಧನ ನಾನು ಪೊಲೀಸ್ ನನಗೆ ಮಾಮೂಲು ಕೊಡಬೇಕು ಎಂದು ಹೇಳಿ ಸಾವಿರಾರು ರೂಪಾಯಿ ದೋಚಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಲಕ್ಷ್ಮೀನಾರಾಯಣ(60)ನನ್ನು ಬಂಧಿಸಿದ್ದಾರೆ. ಬೈಲಕೋನೆನಾಹಳ್ಳಿ ಗ್ರಾಮದ ನಿಖಿಲ್ ಹಾಗೂ ಇತರೆ ಅಂಗಡಿಯವರಿಂದ ವೃದ್ಧ ಹಣ ಪಡೆದಿದ್ದ, ಅನುಮಾನಗೊಂಡು ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ಕೊಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಸದ್ಯ ಲಕ್ಷ್ಮೀನಾರಾಯಣನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಮೈಸೂರು: ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮೈಸೂರಿನಲ್ಲಿ ಲಸಿಕೆ ನೀಡಲು ಪರದಾಟ ಮುಂದುವರಿದೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಮಾತಿನ ಸಮರ ಹೋಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೆಪುರ ಹಾಡಿಯಲ್ಲಿ ಈ ಘಟನೆ ನಡೆದಿದೆ. ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಹಾಡಿಗೆ ತೆರಳಿದ್ದರು. ಈ ವೇಳೆ ಕೃಷಿ ಕೆಲಸಕ್ಕೆ ಜನರನ್ನು ವ್ಯಕ್ತಿ ಕರೆದೊಯ್ತಿದ್ದರು. ಜನರನ್ನು ಕರೆದೊಯ್ಯುತ್ತಿದ್ದಾಗ ವಾಹನ ನಿಲ್ಲಿಸಿದ ಹಿನ್ನೆಲೆ, ಆರೋಗ್ಯ ಸಿಬ್ಬಂದಿಯ ಜೊತೆ ಚಾಲಕ ವಾಗ್ವಾದಕ್ಕಿಳಿದಿದ್ದಾರೆ.

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

Published On - 10:34 am, Wed, 3 November 21

ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್