ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ: ತಜ್ಞರ ತಂಡ ಹೇಳಿದ್ದೇನು? ಯಾವ ಪ್ರದೇಶಗಳ ಜನ ಎಚ್ಚರ ವಹಿಸಬೇಕು? ಇಲ್ಲಿದೆ ವಿವರ

ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸುತ್ತಿರುವ ಕಾರಣ, ಸೂಕ್ಷ್ಮ ಪ್ರದೇಶಗಳಿಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡ ನೀಡಿರುವ ಎಚ್ಚರಿಕೆ ಏನು? ಉತ್ತರ ಕನ್ನಡ ಜಿಲ್ಲೆಯ ಯಾವ ಪ್ರದೇಶಗಳ ಜನ ಎಚ್ಚರಿಕೆ ವಹಿಸಬೇಕು? ಮಾಹಿತಿ ಇಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ: ತಜ್ಞರ ತಂಡ ಹೇಳಿದ್ದೇನು? ಯಾವ ಪ್ರದೇಶಗಳ ಜನ ಎಚ್ಚರ ವಹಿಸಬೇಕು? ಇಲ್ಲಿದೆ ವಿವರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಆತಂಕ
Edited By:

Updated on: Jun 16, 2025 | 12:54 PM

ಕಾರವಾರ, ಜೂನ್ 16: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ತುಸು ಕಡಿಮೆಯಾಗಿದ್ದರೂ, ಅನೇಕ ಕಡೆಗಳಲ್ಲಿ ಭೂಕುಸಿತದ (Landslide) ಆತಂಕ ಮಾತ್ರ ಕಡಿಮೆಯಾಗಿಲ್ಲ. ಕಳೆದ ವರ್ಷ ಶಿರೂರಿನಲ್ಲಿ ಸಂಭವಿಸಿದ್ದ ಭೂಕುಸಿತದ ಕಹಿನೆನಪಿನಿಂದಲೇ ಜಿಲ್ಲೆಯ ಜನ ಇನ್ನೂ ಹೊರಬಂದಿಲ್ಲ. ಅಂಥದ್ದರಲ್ಲಿ ಈ ವರ್ಷ ಕೂಡ ಅನೇಕ ಕಡೆಗಳಲ್ಲಿ ಭೂಕುಸಿತ, ಗುಡ್ಡಕುಸಿತ ಸಂಭವಿಸಿವೆ. ಹೀಗಾಗಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ (GSI) ತಜ್ಞರ ತಂಡ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ತಜ್ಞರ ತಂಡ ಬಿಡು ಬಿಟ್ಟಿದೆ. ಕಾರವಾರ ತಾಲೂಕಿನಲ್ಲಿ ನಾಲ್ಕು ಕಡೆ ಗುಡ್ಡ ಕುಸಿತ ಆಗಿತ್ತು. ಹೀಗಾಗಿ ಕೆಲವೆಡೆ ಜನರನ್ನು ಸ್ಥಳಾಂತರಿಸಿದ್ದರೆ, ಇನ್ನು ಕೆಲವೆಡೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು.

ಕಾರವಾರ ಜನರಿಗೆ ಭೀತಿ ಬೇಡ: ತಜ್ಞರು

ಕಾರವಾರ ತಾಲೂಕಿನ ಬಹುತೇಕ ಕಡೆ ಜನರು ಗುಡ್ಡ ಕುಸಿತದ ಆತಂಕ ಪಡುವ ಅಗತ್ಯ ಇಲ್ಲ ಎಂದು ಇದೀಗ ತಜ್ಞರು ಹೇಳಿದ್ದಾರೆ. ಕಾರವಾರ ನಗರದ ಹಬುವಾಡ ಪ್ರದೇಶದ ಮನೆಗಳಲ್ಲಿ ಜನ ನೆಲೆಸಬಹುದು. ಅಲ್ಲಿ ಗುಡ್ಡ ಜಾಸ್ತಿ ಕುಸಿದರೂ ಮನೆಗಳಿಗೆ ಹೆಚ್ಚಿನ ಹಾನಿ ಆಗಲ್ಲ ಎಂದು ತಜ್ಞರು ವರದಿಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಸುರಂಗ ಬಳಿ ಗುಡ್ಡ ಕುಸಿಯುವ ಸಾಧ್ಯತೆ ಕಡಿಮೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
ಮಹಿಳೆಯ ಬೆತ್ತಲೆ ವಿಡಿಯೋ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಅರ್ಚಕ ಬಂಧನ
NMMS ವಿದ್ಯಾರ್ಥಿವೇತನಕ್ಕೆ ಸಿದ್ದಗಂಗಾ ಮಠದ 6 ವಿದ್ಯಾರ್ಥಿಗಳು ಆಯ್ಕೆ
ನಕಲಿ ಕ್ಲಿನಿಕ್​ಗಳ ಹಾವಳಿ: ನಕಲಿ ವೈದ್ಯನ ಚಿಕಿತ್ಸೆಯಿಂದ 6 ತಿಂಗಳ ಮಗು ಸಾವು
ಲಾಲ್ ಬಾಗ್ ಸುತ್ತೋದು ಇನ್ನಷ್ಟು ಸುಲಭ! ಸಿಗಲಿದೆ ಇ ಸ್ಕೂಟರ್ ಸೌಲಭ್ಯ

ದೇವಿಮನೆ ಘಟ್ಟ ಪ್ರದೇಶದಲ್ಲಿ ಎಚ್ಚರ ಅಗತ್ಯ ಎಂದ ತಜ್ಞರು

ಶಿರಸಿ ತಾಲೂಕಿನ ದೇವಿಮನೆ ಘಟ್ಟದಲ್ಲಿ ಮಾತ್ರ ಮುನ್ನೆಚ್ಚರಿಕೆ ವಹಿಸಲು ತಜ್ಞರು ಸೂಚನೆ ನೀಡಿದ್ದಾರೆ. ದೇವಿಮನೆ ಘಟ್ಟಭಾಗದ ಎಳು ಕಿ.ಮೀ ಅಂತರದಲ್ಲಿ ಐದು ಬಾರಿ ಗುಡ್ಡ ಕುಸಿತ ಆಗಿದೆ. ಗುಡ್ಡ ಕುಸಿತ ಆಗುತ್ತಿರುವ ಸ್ಥಳದಲ್ಲಿನ ಹೆಚ್ಚಿನ ಮಣ್ಣನ್ನು ತೆಗೆಯದಂತೆ ತಜ್ಞರು ಸಲಹೆ ನೀಡಿದ್ದಾರೆ.

ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ ರಾತ್ರಿ ಬಂದ್

ದೇವಿಮನೆ ಘಟ್ಟದ ಮೂಲಕ ಹಾದುಹೋಗುವ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯನ್ನು ರಾತ್ರಿ ಹೊತ್ತು ಬಂದ್ ಮಾಡುವಂತೆ ತಜ್ಞರು ಶಿಫಾರಸು ಮಾಡಿದ್ದಾರೆ. ಈ ರಸ್ತೆಯಲ್ಲಿ ಕಳೆದ 2 ವಾರದ ಅವಧಿಯಲ್ಲಿ ಕೆಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ