ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ
ಗೋಕರ್ಣದ ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣ ಮಾಡಿದ್ದಾರೆ.
ಗೋಕರ್ಣ(ಉತ್ತರ ಕನ್ನಡ), ಸೆಪ್ಟೆಂಬರ್ 18): ಗೋಕರ್ಣದ (gokarna) ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು(tourist )ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ (Bengaluru) ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇದನ್ನು ನೋಡಿದ ಲೈಫ್‌ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣ ಮಾಡಿದ್ದು, ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ಮಾಹಿತ ಪಡೆದುಕೊಂಡರು.
ಕೆರೆಯಲ್ಲಿ ಕಾಲುಜಾರಿ ಬಿದ್ದು ರೈತ ಸಾವು
ಶಿವಮೊಗ್ಗ: ಎಮ್ಮೆಯನ್ನು ಹುಡುಕಿಕೊಂಡು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೇಡಿಸರ ಗ್ರಾಮದಲ್ಲಿ ನಡೆದಿದೆ. ಸತೀಶ್ ಗೌಡ(51) ಮೃತ ದುರ್ವೈವಿ. ಎಮ್ಮೆಯನ್ನು ಹುಡುಕಿಕೊಂಡು ಕರೆ ದಂಡೆ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಪರಿಣಾಮ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ