ಸಂಕಷ್ಟದಲ್ಲಿ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿ: ಸಂಪರ್ಕಕ್ಕೇ ಸಿಗದ ಬಿಜೆಪಿ ಶಾಸಕ, ಸಂಸದರು!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಾಲಿ ಸಂಸದರು, ಶಾಸಕರಿಂದ ಬೆಂಬಲ ದೊರೆಯದಿರುವುದು ಬಹಿರಂಗವಾಗಿದೆ. ಒಂದೆಡೆ ಕಾಗೇರಿಯನ್ನು ಆಯ್ಕೆ ಮಾಡಿರುಬ ಬಗ್ಗೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅಸಮಾಧಾನ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ಸಂಸದ ಅನಂತಕುಮಾರ್ ಹೆಗಡೆ ಮನೆ ಗೇಟ್ ಬಳಿ ಬಂದರೂ ಸೌಜನ್ಯಕ್ಕೂ ಮಾತನಾಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಸಂಕಷ್ಟದಲ್ಲಿ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿ: ಸಂಪರ್ಕಕ್ಕೇ ಸಿಗದ ಬಿಜೆಪಿ ಶಾಸಕ, ಸಂಸದರು!
ವಿಶ್ವೇಶ್ವರ ಹೆಗಡೆ ಕಾಗೇರಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma

Updated on:Mar 28, 2024 | 12:31 PM

ಕಾರವಾರ, ಮಾರ್ಚ್​ 28: ಲೋಕಸಭೆ ಚುನಾವಣೆಗೆ (Lok Sabha Election) ಉತ್ತರ ಕನ್ನಡ (Uttara Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ ಕಾಗೇರಿಗೆ ಸಂಪರ್ಕಕ್ಕೇ ಸಿಗುತ್ತಿಲ್ಲ ಎನ್ನಲಾಗಿದೆ. ಶಾಸಕ, ಸಂಸದರ ಮನವೋಲಿಸುವುದೇ ಬಿಜೆಪಿ ಅಭ್ಯರ್ಥಿ ಕಾಗೇರಿಗೆ ದೊಡ್ಡ ಸವಾಲಾಗಿದೆ. ಯಾರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಹಾಗೆಂದು ಮನೆಗೆ ಹೋದರೆ ಗೇಟನ್ನೇ ತೆರೆಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಕಾಗೇರಿಯವರ ಸದ್ಯದ ಪರಿಸ್ಥಿತಿ ನೋಡಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಡಿಕೊಳ್ಳುತ್ತಿದ್ದಾರೆ.

ಹಾಲಿ ಸಂಸದ ಸಂಸದ ಅನಂತಕುಮಾರ್ ಹೆಗಡೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರಿಗೂ ಸಿಗದಂತೆ ಇದ್ದಾರೆ. ಟಿಕೆಟ್ ತಪ್ಪುವ ಸುಳಿವು ಸಿಕ್ಕಿದ ಕೂಡಲೇ ಅವರು ಮೌನಕ್ಕೆ ಶರಣಾಗಿದ್ದರು. ಟಿಕೆಟ್ ಘೋಷಣೆಯಾಗುವುದಕ್ಕೂ ಮೂರ್ನಾಲ್ಕು ದಿನಗಳ ಮೊದಲಿನಿಂದಲೇ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಇಷ್ಟೇ ಅಲ್ಲದೆ, ಕಾರ್ಯಕರ್ತರ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಮನೆಗೆ ಯಾರೆ ಬಂದರೂ ಒಳಕ್ಕೆ ಬಿಡದಂತೆ ಸಂಸದ ಹೆಗಡೆ ಸೆಕ್ಯೂರಿಟಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದೀಗ ಸಂಸದರ ಮೌನ ಹಾಗೂ ಸಂಪರ್ಕಕ್ಕೆ ಸಿಗದಿರುವುದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಲೆ ನೋವಾಗಿ ಪರಿಣಮಿಸಿದೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ್ದ ಕಾಗೇರಿ, ನಾನು ಮತ್ತು ಅನಂತಕುಮಾರ್ ಹೆಗಡೆ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದೇವೆ. ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದಿದ್ದರು. ಆದರೆ, ಕಾಗೇರಿ ಭೇಟಿಗೂ ಅವಕಾಶ ನೀಡದೇ, ಕರೆಯೂ ಸ್ವೀಕರಿಸದೇ ಹೆಗಡೆ ಸಂಪೂರ್ಣ ಮೌನವಾಗಿದ್ದಾರೆ.

ಹೆಗಡೆ ಮನೆ ಗೇಟ್ ಬಳಿ ಅರ್ಧ ಗಂಟೆ ಕಾದ ಕಾಗೇರಿ

ಈ ಮಧ್ಯೆ, ಸಂಸದ ಅನಂತಕುಮಾರ್ ಹೆಗಡೆ ಮನೆ ಬಳಿ ಹೋಗಿ ಕಾಗೇರಿ ಅರ್ಧ ಗಂಟೆ ಕಾದರೂ ಸೌಜನ್ಯಕ್ಕೂ ಗೇಟ್ ತೆರೆಸಿ ಅವರ ಬಳಿ ಮಾತನಾಡಿಲ್ಲ ಎಂಬುದು ಗೊತ್ತಾಗಿದೆ. ಅನಂತಕುಮಾರ್ ಹೆಗಡೆ ಸಹಕಾರ ಇಲ್ಲದೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಭಾರಿ ಕಷ್ಟ ಎಂದೂ ಹೇಳಲಾಗುತ್ತಿದೆ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೂಡ ಹೆಗಡೆ ಇದೇ ರೀತಿ ಮೌನವಾಗಿದ್ದಕ್ಕೆ ಕಾಗೇರಿ ಸೋಲನುಭವಿಸಬೇಕಾಗಿ ಬಂದಿತ್ತು. ಇದೀಗ ಮತ್ತೆ ಹೆಗಡೆ ಮೌನವಾಗಿರುವುದು ಕಾಗೇರಿ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಸಮಾಧಾನವಾಗಿಲ್ಲ ಅಂದರೆ ಉತ್ತರ ಕನ್ನಡ ಅಭ್ಯರ್ಥಿ ಬದಲಿಸ್ತಾರಾ?: ಬಿಜೆಪಿ ನಾಯಕರಿಗೆ ಶಿವರಾಮ್ ಹೆಬ್ಬಾರ್ ಪ್ರಶ್ನೆ

ಅತ್ತ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಕೂಡ ಕಾಗೇರಿ ಕೈಗೆ ಸಿಗದೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಬುಧವಾರ ಯಲ್ಲಾಪುರದಲ್ಲೇ ಬಿಜೆಪಿ ಅಭ್ಯರ್ಥಿ ಪರ ಸಭೆ ನಡೆದರೂ ಶಿವರಾಂ ಹೆಬ್ಬಾರ್ ಗೈರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Thu, 28 March 24

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ