AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಪ್ ಕದ್ದ ಶಿರಸಿ ನಗರಸಭೆ ಸದಸ್ಯನನ್ನು ಲಾಕ್ ಮಾಡಿದ ಲೋಕಾಯುಕ್ತ

ಶಿರಸಿ ನಗರಸಭೆಯ ಹಾಲಿ ಬಿಜೆಪಿ ಸದಸ್ಯ ಗಣಪತಿ ನಾಯ್ಕ್​ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಗಣಪತಿ ನಾಯ್ಕ್​ ಮತ್ತು ನಗರಸಭೆಯ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಇಬ್ಬರನ್ನೂ ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಇನ್ನು, ಗಣಪತಿ ನಾಯ್ಕ್​ ವಿರುದ್ಧ ನಗರಸಭೆಯ ಪೈಪ್​ ಕಳ್ಳತನ ಆರೋಪವೂ ಇದೆ.

ಪೈಪ್ ಕದ್ದ ಶಿರಸಿ ನಗರಸಭೆ ಸದಸ್ಯನನ್ನು ಲಾಕ್ ಮಾಡಿದ ಲೋಕಾಯುಕ್ತ
ಆರೋಪಿ ಗಣಪತಿ ನಾಯ್ಕ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 16, 2025 | 7:25 PM

Share

ಕಾರವಾರ, ಜುಲೈ 16: ಶಿರಸಿ ನಗರಸಭೆಯ (Sirsi City Municipal Council) ಪೈಪ್​ ಕದ್ದ ಆರೋಪ ಹೊತ್ತಿರುವ  ಹಾಲಿ ಬಿಜೆಪಿ ಸದಸ್ಯನನ್ನು ಲೋಕಾಯುಕ್ತ (Lokayukta) ಪೊಲೀಸರು ಲಂಚ ಸ್ವೀಕಾರ ಆರೋಪದ ಮೇಲೆ ಬಂಧಿಸಿದ್ದಾರೆ. ಲೀಸ್‌ಗೆ ಪಡೆದ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಶಿರಸಿ ನಗರಸಭೆ ಬಿಜೆಪಿ ಸದಸ್ಯ ಗಣಪತಿ ನಾಯ್ಕ ಹಾಗೂ ನಗರಸಭೆ ಅಧಿಕಾರಿ ಆರ್.ಎಂ.ವರ್ಣೇಕರ್, ರಮೇಶ ಹೆಗಡೆ ಎಂಬುವರಿಂದ ಶಿರಸಿ ನಗರದ ರಿಲಾಯನ್ಸ್ ಕಚೇರಿ ಮುಂದೆ ಕಾರಿನಲ್ಲಿ 3 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ಲೋಕಾಯುಕ್ತ ಅಧಿಕಾರಿಗಳು ದಿಢೀರ್​ ದಾಳಿ ನಡೆಸಿ, ಗಣಪತಿ ನಾಯ್ಕ ಮತ್ತು ಆರ್​.ಎಂ.ವರ್ಣೇಕರ್  ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಗಣಪತಿ ನಾಯ್ಕ ನಗರಸಭೆ ಪೈಪ್ ಕಳ್ಳತನ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ.

ಏನಿದು ಪೈಪ್​ ಲೈನ್​ ಕಳ್ಳತನ

ಶಿರಸಿ ನಗರಕ್ಕೆ ಕುಡಿಯುವ ನೀರು ಪೂರೈಸಲು 60 ವರ್ಷಗಳ ಹಿಂದೆ ಕೆಂಗ್ರೆ ಹೊಳೆಯಿಂದ ಶಿರಸಿ ನಗರಕ್ಕೆ, ಸುಮಾರು 8 ಕಿ.ಮೀ ಉದ್ದದ ಕಾಸ್ಟ್ ಐರನ್ (ಗಟ್ಟಿ ಕಬ್ಬಿಣ) ಪೈಪ್ ಲೈನ್ ಮಾಡಲಾಗಿತ್ತು. ಪೈಪ್ ಲೈನ್ ಬಹಳ ಹಳೆಯದಾಗಿದ್ದರಿಂದ ಕೆಲ ವರ್ಷಗಳಿಂದ, ಪೈಪ್​​ಗಳಲ್ಲಿ ಲಿಕೇಜ್ ಜಾಸ್ತಿ ಆಗಿ ನೀರು ಪೋಲಾಗುವುದು ಹಾಗೂ ನೀರು ಪೂರೈಕೆಯಲ್ಲೂ ವ್ಯತ್ಯಯ ಆಗುತಿತ್ತು.

ಇದನ್ನೂ ಓದಿ
Image
ಲೋಕಾಯುಕ್ತ ದಾಳಿ: ಕೇಜಿಗಟ್ಟಲೇ ಚಿನ್ನ-ಬೆಳ್ಳಿ, ಕಂತೆ-ಕಂತೆ ಹಣ ಪತ್ತೆ
Image
ವಸತಿ ಯೋಜನೆಯಲ್ಲಿ ಲಂಚಾವತಾರದ ಬಿ.ಆರ್ ಪಾಟೀಲ್ ಆಡಿಯೋ ಲೋಕಾಯುಕ್ತ ಅಂಗಳಕ್ಕೆ
Image
ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
Image
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್:ಹಲವಡೆ ಲೋಕಾಯುಕ್ತ ದಾಳಿ

ಹೀಗಾಗಿ, ಎರಡು ವರ್ಷಗಳ ಹಿಂದೆ ಅಂದರೆ 2023 ರಲ್ಲಿ ಕೆಂಗ್ರೆ ಹೊಳೆಯಿಂದಲೇ ಹೊಸ ಪೈಪ್ ಲೈನ್ ಮಾಡಲಾಗಿತ್ತು. ಹಳೆಯ ಪೈಪ್​ಗಳು ಉಪಯೋಗವಾಗದೆ ಹಾಗೇ ಇದ್ದವು. ಕೆಲ ತಿಂಗಳ ಹಿಂದೆ ನಗರದ ಕೆಲವಡೆ ಅಭಿವೃದ್ಧಿ ಕಾಮಗಾರಿ ಸಂಬಂಧ ನೆಲದಲ್ಲಿ ಹೂತಿದ್ದ ಪೈಪ್​ಗಳನ್ನು ತೆಗೆಯಬೇಕಾದಾಗ, ನಗರಸಭೆಯವರು ಶಿವಮೊಗ್ಗ ಮೂಲದ ಝಕ್ರಿಯಾ ಎಂಬ ಗುತ್ತಿಗೆದಾರನಿಗೆ, ಪೈಪ್ ತೆಗೆದು ಮಾರಾಟ ಮಾಡಲು ಗುತ್ತಿಗೆ ನೀಡಿದ್ದರು.

ಈ ಸಂದರ್ಭದಲ್ಲಿ ಝಕ್ರಿಯಾ ಸುಮಾರು 6 ಲಕ್ಷ ರೂಪಾಯಿ ನಗರಸಭೆಗೆ ಕೊಟ್ಟು ಪೈಪ್​ಗಳನ್ನು ನೆಲದಿಂದ ತೆಗೆದು, ಮಾರಾಟ ಮಾಡಿದ್ದನು. ಬಳಿಕ ನಗರಸಭೆಯಿಂದ ಯಾವುದೇ ಪರವಾನಗಿ ಹಾಗೂ ಗುತ್ತಿಗೆ ಪಡೆಯದೆ, ಶಿರಸಿ ನಗರದ ಹೊರವಲಯದಲ್ಲಿರುವ 900 ಮೀಟರ್ ಉದ್ದದ ಸುಮಾರು 116ಕ್ಕೂ ಹೆಚ್ಚು ಪೈಪ್​ಗಳನ್ನೂ ಕೂಡ ಅಕ್ರಮವಾಗಿ ಮಾರಾಟ ಮಾಡಿದ್ದನು ಎಂದು ದೂರು ದಾಖಲಾಗಿತ್ತು.

ಇದನ್ನೂ ಓದಿ: ಶಿರಸಿ ಪೈಪ್ ಕಳ್ಳತನ ಕೇಸ್​: ನಗರಸಭೆ ಸದಸ್ಯರು-ಅಧಿಕಾರಿಗಳೇ ಕಳ್ಳರು, ತನಿಖೆಯಲ್ಲಿ ದೃಢ

ಲಕ್ಷಾಂತರ ಮೌಲ್ಯದ ಐರನ್​ ಪೈಪ್​ಗಳನ್ನು ಹಾಡಹಗಲೇ ಕಳ್ಳತನ ಮಾಡಿಕೊಂಡು ಹೋಗಿರುವ ಪ್ರಕರಣದ ತನಿಖೆಯನ್ನು ಗ್ರಾಮೀಣ ಠಾಣೆ ಪೊಲೀಸರು ನಡೆಸಿದರು. ಆಗ, ಈ ಕಳ್ಳತನ ಪ್ರಕರಣದಲ್ಲಿ ಶಿರಸಿ ನಗರಸಭೆಯ ಹಾಲಿ ಬಿಜೆಪಿ ಸದಸ್ಯ ಗಣಪತಿ ನಾಯ್ಕ ಕೂಡ ಭಾಗಿಯಾಗಿರುವುದು ಪೊಲೀಸರಿಗೆ ಗೊತ್ತಾಗಿದೆ. ಈ ಪ್ರಕರಣದಲ್ಲಿ ಒಟ್ಟು 7 ಜನ ಆರೋಪಿಗಳು ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ