ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ

ಲಂಚ ಸ್ವೀಕರಿಸುವಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ (ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಲಂಚ ಪಡೆದ ಆರೋಪದ ಮೇಲೆ ಇಬ್ಬರು ಪೊಲೀಸರು ಅನಾನತುಗೊಂಡಿದ್ದಾರೆ. ಐಪಿಎಸ್ ಅಧಿಕಾರಿ ಕಡೆಯವರು ಲಂಚದ ಪಡೆದ ಆರೋಪದ ಮೇಲೆ ಸಸ್ಪೆಂಡ್ ಆಗಿದ್ದಾರೆ. ಈ ಎರಡು ಪ್ರತ್ಯೇಕ ಪ್ರಕರಣ ಸಂಪೂರ್ಣ ವಿವರ ಇಲ್ಲಿದೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ
App Prakash Lamani
Edited By:

Updated on: Feb 28, 2025 | 9:14 PM

ಶಿರಸಿ: (ಫೆಬ್ರವರಿ 28): ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ (ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌) ಪ್ರಕಾಶ್ ಲಮಾಣಿ ಅವರು ಲೋಕಾಯುಕ್ತ ಬಲೆ ಬದ್ದಿದ್ದಾರೆ. ಪ್ರಕರಣವೊಂದರ ಆರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಹಿಡಿದಿದ್ದಾರೆ. ಸೀಜ್ ಆಗಿದ್ದ ಮುದ್ದೆ ಮಾಲನ್ನು ರಿಲೀಸ್ ಮಾಡಿಸಲು ಪವನ್ ಕುಮಾರ್ ಅವರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು (ಫೆಬ್ರವರಿ 28) ಪವನ್ ಕುಮಾರ್ ಅವರಿಂದ 6 ಸಾವಿರ ರೂ. ಲಂಚದ ಹಣ ಪಡೆಯುತ್ತಿರುವಾಗ ಲೋಕಾಯುಕ್ತ ಇನ್ಸ್​ಪೆಕ್ಟರ್ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ದಾಳಿ ಮಾಡಿ ಹಿಡಿದಿದ್ದಾರೆ. ಸದ್ಯ ಎಪಿಪಿ ಪ್ರಕಾಶ್ ಲಾಮಾಣಿ ಅವರನ್ಜು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಲಂಚ ಆರೋಪದ ಮೇಲೆ ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಐಪಿಎಸ್ ಅಧಿಕಾರಿ ಸುಧೀರ್ ರೆಡ್ಡಿ ಕಡೆಯವರಿಂದ ಇಬ್ಬರು ಪೊಲೀಸ್ ಅಧಿಕಾರಿಗಳು ಲಂಚ ಪಡೆದಿದ್ದರು. 70 ಲಕ್ಷ ಮೌಲ್ಯದ ಮೊಬೈಲ್ ಟ್ಯಾಬ್ ಕಳ್ಳತನದ ಬಗ್ಗೆ ಸ್ವೀಸ್ ಕ್ಲಬ್ ಎಂಬ ಕಂಪನಿ ಕೋ ಫೌಂಡರ್ HSR ಲೇಔಟ್ ಠಾಣೆಗೆ ದೂರು ನೀಡಿದ್ರು. ಈ ಪ್ರಕರಣ ಸಂಬಂಧ FIR ದಾಖಲಿಸಿಕೊಂಡ ಪೊಲೀಸರು ಯಾವುದೇ ಲ್ಯಾಪ್​ಟಾಪ್ ರಿಕವರಿ ಮಾಡಲಿಲ್ಲ. ಪೊಲೀಸರು ದೂರುದಾರರು ಹಾಗೂ ಆರೋಪಿಗಳು ಇಬ್ಬರ ಕಡೆಯಿಂದಲೂ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ನಿವೃತ್ತ ಐಪಿಎಸ್ ಅಧಿಕಾರಿ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.

ಕಮಿಷನರ್ ದಯಾನಂದ ‌ಅವರು ತನಿಖೆ ನಡೆಸಿ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿಗೆ ಸೂಚನೆ ನೀಡಿದ್ದರು. ವರದಿ ಆಧಾರಿಸಿ ಆಗ್ನೇಯ ವಿಭಾಗ ಡಿಸಿಪಿ ಸಾರ‌ ಫಾತಿಮಾ ಅವರು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ.

ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us