ಉತ್ತರ ಕನ್ನಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಲಾರಿ! ಮನೆ ಮುಂಭಾಗ ಸಂಪೂರ್ಣ ಜಖಂ

ಲಾರಿ ನುಗ್ಗುತ್ತಿದ್ದಂತೆ ಕುಟುಂಬಸ್ಥರು ತಕ್ಷಣ ಮನೆಯಿಂದ ಹೊರ ಬಂದಿದ್ದಾರೆ. ಲಾರಿ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಲಾರಿ! ಮನೆ ಮುಂಭಾಗ ಸಂಪೂರ್ಣ ಜಖಂ
ಮನೆಗೆ ನುಗ್ಗಿದ ಲಾರಿ
Follow us
TV9 Web
| Updated By: sandhya thejappa

Updated on:Feb 06, 2022 | 11:35 AM

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿ (Lorry) ಮನೆಗೆ ನುಗ್ಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿ ಗ್ರಾಮದಲ್ಲಿ ನಡೆದಿದೆ. ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ರಸ್ತೆ ಬದಿಗಿದ್ದ ಮನೆಗೆ ನುಗ್ಗಿದೆ. ಮನೆ ಪಕ್ಕೀರಮ್ಮ ಭೀಮಣ್ಣ ನಾಯಕ ಎಂಬುವರಿಗೆ ಸೇರಿದ್ದಾಗಿದೆ. ಲಾರಿ ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.

ಲಾರಿ ನುಗ್ಗುತ್ತಿದ್ದಂತೆ ಕುಟುಂಬಸ್ಥರು ತಕ್ಷಣ ಮನೆಯಿಂದ ಹೊರ ಬಂದಿದ್ದಾರೆ. ಲಾರಿ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಈ ಪ್ರಕರಣ ಯಲ್ಲಾಪುರ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ.

ಟಾಟಾ ಏಸ್ ವಾಹನಕ್ಕೆ ಹಿಂಬದಿಯಿಂದ ಗುದ್ದಿದ ಅಪರಿಚಿತ ವಾಹನ: ಬಾಗಲಕೋಟೆ: ಟಾಟಾ ಏಸ್ ವಾಹನಕ್ಕೆ ಅಪರಿಚಿತ ವಾಹನ ಹಿಂಬದಿಯಿಂದ ಗುದ್ದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಬಳಿ ತಡರಾತ್ರಿ ಗಟನೆ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ತು ಜನರಿಗೆ ಗಾಯಗಳಾಗಿವೆ. 4 ವರ್ಷದ ಬಾಲಕ ಶಿವು ಕಿಸನ್ ಗೋಸಾವಿ ಮತ್ತು ಗೋಪಾಲ ಗೋಸಾವಿ(35) ಮೃತ ದುರ್ದೈವಿಗಳು. ಮೃತರು ಹಾಗೂ ಗಾಯಾಳುಗಳು ಬೆಳಗಾವಿ ಜಿಲ್ಲೆಯ ರಾಮದುರ್ಗದವರು. ವಿಜಯಪುರಕ್ಕೆ ಹೋಗಿದ್ದ ಅವರು ವಾಪಸ್ ರಾಮದುರ್ಗಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ನಡೆದಿದ್ದು, ಹಿಂಬದಿಯಿಂದ ಲಾರಿ ಗುದ್ದಿದೆ ಎಂದು ಹೇಳಲಾಗುತ್ತಿದೆ. ಅಪಘಾತ ಬಳಿಕ ವಾಹನ ನಿಲ್ಲಿಸದೇ ಪರಾರಿಯಾಗಿದೆ.

ಆಟೋ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು: ರಾಯಚೂರು: ಆಂಧ್ರದ ಕರ್ನೂಲು ಜಿಲ್ಲೆಯ ಮಾಧವರಂ ಬಳಿ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿವೆ. ರಾಘವೇಂದ್ರ (37) ಹಾಗೂ ಅಭಿಷೇಕ್(27) ಮೃತರು. ಮೃತ ರಾಘವೇಂದ್ರ ಹುಬ್ಬಳ್ಳಿ ಮೂಲದವರು. ಮೃತ ಅಭಿಷೇಕ ದೊಡ್ಡಬಳ್ಳಾಪುರ ಮೂಲದ ಯುವಕ. ಬೆಂಗಳೂರಿನಿಂದ ರೈಲ್ವೆ ಮೂಲಕ ಮಂತ್ರಾಯಲಕ್ಕೆ ಬಂದಿದ್ದರು. ಮಂತ್ರಾಲಯ ಬಳಿಯ ತುಂಗಭದ್ರಾ ರೆಲ್ವೆ ನಿಲ್ದಾಣದಲ್ಲಿ ಇಳಿದಿದ್ದರು. ಅಲ್ಲಿಂದ ಆಟೋ ಮೂಲಕ ಮಂತ್ರಾಲಯಕ್ಕೆ ಹೋಗುವ ದಾರಿ ಮಧ್ಯೆ ಘಟನೆ ನಡೆದಿದೆ. ಗಾಯಗೊಂಡಿದ್ದ ನಾಲ್ವರನ್ನು ಕರ್ನೂಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಾಧವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

Published On - 11:12 am, Sun, 6 February 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ