ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನ ಬಂಧನ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನೀಸ್ ಹುಲ್ಗರ್ ಎಂಬಾತನನ್ನು ಬಂಧಿಸಲಾಗಿದ್ದು, ಅವನು ಪ್ರಮುಖ ರಾಜಕೀಯ ನಾಯಕರ ಚಿತ್ರಗಳನ್ನು ಅವಹೇಳನಕಾರಿ ರೀತಿಯಲ್ಲಿ ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕೃತ್ಯವು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವಂತಿದೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಕನ್ನಡ, ಏಪ್ರಿಲ್ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಸಚಿವ ಅಮಿತ್ ಶಾ (Amith Sha) ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ದಾಂಡೇಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾಂಡೇಲಿಯ ಸಂಡೆ ಮಾರ್ಕೆಟ್ ನಿವಾಸಿ ಅನೀಸ್ ಹುಲ್ಗರ್ ಬಂಧಿತ ಆರೋಪಿ. ಆರೋಪಿ ಅನೀಸ್ ಹುಲ್ಗರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮೀತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಆಸ್ಸಾಂ ರಾಜ್ಯದ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಅವರ ಮುಖಗಳ ಭಾವಚಿತ್ರಗಳನ್ನು ನಾಯಿಯ ದೇಹದ ಭಾವಚಿತ್ರಗಳಿಗೆ ಅಂಟಿಸಿದ್ದಾನೆ.
ಎಐಎಮ್ಐಎಮ್ ಪಕ್ಷದ ಸಂಸದ ಅಸಾವುದ್ದಿನ ಓವೈಸಿ ಡಾಗ್ ಚೈನ ಹಿಡಡಿಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಫೇಸ್ಬುಕ್ ಖಾತೆ ಅಕೌಂಟ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ಎರಡು ವರ್ಗಗಳ ಜನರ ದ್ವೇಷ-ವೈಶ್ಯಮ್ಯ ಬೆಳೆಯುವಂತೆ ಮಾಡಲು ಪ್ರಚೋದಿಸುತ್ತಿದ್ದಾನೆ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ ಎಂದು ಆರೋಪಿ ವಿರುದ್ಧ ದೂರು ದಾಖಲಾಗಿದೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಹಿಂದೂಗಳ ಶಿರಚ್ಛೇದ ಮಾಡುತ್ತೇವೆ
ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದರು.
ಪಾಕಿಸ್ಥಾನ ಸಮರ್ಥನೆ: ಆಸ್ಸಾಂ ಶಾಸಕ ಅರೆಸ್ಟ್
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಎಐಯುಡಿಎಫ್ ಶಾಸಕ ಅಮಿನಲ್ ಇಸ್ಲಾಂ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಉಗ್ರರಿಂದ ತರಬೇತಿ ಪಡೆದಿದ್ದ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಅರೆಸ್ಟ್
ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ದಾಳಿಗೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಇದು ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕ್ಷಮೆಯಾವಿಸಿದ್ದಾರೆ.







