AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹಂದಿ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ ಇದ್ದಕ್ಕಿದ್ದಂತೆ ಹೃದಯಾಘಾತದಿಂದ(Heart Attack) ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿದ್ದು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಮೆಹಂದಿ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವು
ಗಣಪತಿ ಆಚಾರ್ಯ
TV9 Web
| Edited By: |

Updated on:Jun 22, 2022 | 6:47 PM

Share

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ(Mehndi Program) ಕುಣಿಯುತ್ತಲೇ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಅಂಬಾಗಿಲು ಪುತ್ತೂರು ಬಳಿ ನಡೆದಿದೆ. ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ(56) ಇದ್ದಕ್ಕಿದ್ದಂತೆ ಹೃದಯಾಘಾತದಿಂದ(Heart Attack) ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿದ್ದು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಚಿನ್ನದ ವ್ಯಾಪಾರಿಯಾಗಿದ್ದ ಗಣಪತಿ ಆಚಾರ್ಯ ನಿನ್ನೆ ಅಂದರೆ ಜೂನ್ 21ರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರೊಂದಿಗೆ ಟೈಗರ್ ಡ್ಯಾನ್ಸ್ ಮಾಡುವಾಗ ಇದ್ದಕ್ಕಿದಂತೆ ಆಯಾಸವಾಗಿ ಕುರ್ಚಿಯ ಮೇಲೆ ಬಂದು ಕುಳಿತಿದ್ದಾರೆ. ಕುರ್ಚಿಯಲ್ಲಿ ಕುಳಿತ ಕೆಲವೇ ಕ್ಷಣದಲ್ಲಿ ಹೃದಯಾಘಾತವಾಗಿ ಕೆಲಕ್ಕೆ ಕುಸಿದಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಮಾರ್ಗ ಮಧ್ಯೆಗೆ ಪ್ರಾಣಬಿಟ್ಟಿದ್ದಾರೆ. ಓರ್ವ ಮಗ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಮಡದಿಯನ್ನು ಗಣಪತಿ ಅಗಲಿದ್ದಾರೆ. ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಗೆ ಭೂಕುಸಿತ; ರಸ್ತೆಗಳು ಜಲಾವೃತ, ಹೆದ್ದಾರಿ ಬಂದ್

ಚರಂಡಿಯಲ್ಲಿ ಯುವಕನ ಶವ ಪತ್ತೆ ಧಾರವಾಡ: ಚರಂಡಿಯಲ್ಲಿ ಯುವಕನ ಶವ ಪತ್ತೆಯಾಗಿರುವಂತಹ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲಿಕಾರ್ಜುನ ಗೂಳದಕೊಪ್ಪ(25) ಮೃತ ಯುವಕ. ಗ್ರಾಮದ ದ್ಯಾಮವ್ವ ದೇವಸ್ಥಾನದ ಬಳಿಯ ಚರಂಡಿಯಲ್ಲಿ ಕೊಲೆ ಮಾಡಿ ಎಸದಿರೋ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮೀಣ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮನೆಗಳ್ಳತನ ಮಾಡುತ್ತಿದ್ದ ಕಳ್ಳ ಅಂದರ್ ಬಾಗಲಕೋಟೆ: ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಅಸ್ಲಮ್ ಮೆಹಬೂಬ್​ನನ್ನು ಜಮಖಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಗವಿಸಿದ್ದನಮಡ್ಡಿ ಗ್ರಾಮದ ನಿವಾಸಿಯಾಗಿದ್ದು, ಬಂಧಿತನಿಂದ 90 ಗ್ರಾಂ ಚಿನ್ನಾಭರಣ, 85 ಗ್ರಾಂ ಬೆಳ್ಳಿ ಆಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲ್ ಕ್ಲಿಕ್ ಮಾಡಿ

Published On - 5:26 pm, Wed, 22 June 22

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?