ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ

ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ.

ಕಾರವಾರ: ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವೃದ್ಧ
Follow us
ಆಯೇಷಾ ಬಾನು
|

Updated on: Oct 05, 2023 | 2:36 PM

ಕಾರವಾರ, ಅಕ್ಟೋಬರ್ 5: ರಸ್ತೆಯಲ್ಲಿ ಗುಂಡಿಗಳು (Pathole) ಎದುರಾದ್ರೆ ಸಾಕು, ಸರ್ಕಾರಕ್ಕೆ ಶಾಪ ಹಾಕಿ ಬೈ ಕೊಂಡು ಮುಂದೆ ಹೋಗುವವರ ನಡುವೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೆ ರಸ್ತೆ ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವೃದ್ಧ ಕಾರವಾರದ (Karwar) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುತ್ತಿರುವ ಫೋಟೋ ಹಾಘೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕಾರವಾರದ ಹಬ್ಬುವಾಡ ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಇದಿರಿಂದಾಗಿ ಪ್ರತಿ ನಿತ್ಯ ವಾಹನ ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವು- ನೋವುಗಳಿಗೆ ತುತ್ತಾಗುತ್ತಲೇ ಇದ್ದಾರೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕಣ್ಣು ಮುಚ್ಚಿ ಕೂತಿದೆ. ಇದನ್ನು ಗಮನಿಸಿದ ಕಾರವಾರದ ಬಂಡಿಶಿಟ್ಟಾ ನಿವಾಸಿ ಜಾನ್ ಎಂಬ ವೃದ್ಧ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಬೇಸತ್ತ ಜನ: “ಆಸ್ತಿ ತೆರಿಗೆ ಬಹಿಷ್ಕಾರ ಅಭಿಯಾನ” ಆರಂಭಿಸಿದ ಬೆಂಗಳೂರಿಗರು

ಜಾನ್ ಅವರು ಮುಂಜಾನೆಯೇ ತಮ್ಮ ಸೈಕಲ್‌ ಏರಿ ಗುಂಡಿ ಬಿದ್ದಿರುವ ರಸ್ತೆಗೆ ಬಂದು ಆ ಸೈಕಲ್‍ನನ್ನು ರಸ್ತೆಯಲ್ಲಿ ಅಡ್ಡ ನಿಲ್ಲಿಸಿ, ಗುಂಡಿಗಳನ್ನ ಮುಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆ. ಜಾನ್ ಅವರು ಮನೆಯಿಂದಲೇ ಬುಟ್ಟಿ, ಗುದ್ದಲಿಗಳ ಸಮೇತ ಬಂದು ರಸ್ತೆ ಪಕ್ಕ ಸಿಗುವ ಕಲ್ಲು- ಮಣ್ಣನ್ನ ಗುಂಡಿಗೆ ತುಂಬಿ ತಾತ್ಕಾಲಿಕವಾಗಿ ರಸ್ತೆಗಳನ್ನ ದುರಸ್ತಿ ಪಡಿಸುವ ಕಾರ್ಯ ಮಾಡುತ್ತಿದ್ದಾರೆ.

ವೃದ್ಧನ ಈ ನಿಸ್ವಾರ್ಥ ಸಮಾಜ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯಾವುದೇ ಸ್ವಾರ್ಥವಿಲ್ಲದೇ, ನಿಸ್ವಾರ್ಥವಾಗಿ ವಾಹನ ಸವಾರರಿಗಾಗಿ ಅನುಕೂಲ ಮಾಡಿಕೊಡುತ್ತಿರುವ ಈ ವೃದ್ಧನ ಶ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಕಾರವಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ