AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada: ಒಂದೇ ವರ್ಷದಲ್ಲಿ 6,553 ಜನರ ಮೇಲೆ ದಾಳಿ ಮಾಡಿ, ಕಚ್ಚಿದ ಬೀದಿ ನಾಯಿಗಳು

ಅರಣ್ಯಮಯ ಉತ್ತರ ಕನ್ನಡದಲ್ಲಿ ಕಾಡು ಪ್ರಾಣಿಗಳ ಕಾಟಕ್ಕಿಂತ ಬೀದಿ ನಾಯಿಗಳ ಉಪಟಳವೇ ಹೆಚ್ಚು! ಒಂದೇ ವರ್ಷದಲ್ಲಿ 6,500 ಮಂದಿಗೆ ನಾಯಿಗಳು ಕಚ್ಚಿವೆ

Uttara Kannada: ಒಂದೇ ವರ್ಷದಲ್ಲಿ 6,553 ಜನರ ಮೇಲೆ ದಾಳಿ ಮಾಡಿ, ಕಚ್ಚಿದ ಬೀದಿ ನಾಯಿಗಳು
ಒಂದೇ ವರ್ಷದಲ್ಲಿ 6,553 ಜನರ ಮೇಲೆ ದಾಳಿ ಮಾಡಿ, ಕಚ್ಚಿದ ಬೀದಿ ನಾಯಿಗಳು
TV9 Web
| Edited By: |

Updated on:Dec 12, 2022 | 5:23 PM

Share

Dog Menace: ಬಹುತೇಕ ಅರಣ್ಯವನ್ನೇ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಕಾಟಕ್ಕಿಂತ ಬೀದಿ ನಾಯಿಗಳ ಉಪಟಳವೇ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಬರೋಬ್ಬರಿ 6,500 ಕ್ಕೂ ಹೆಚ್ಚು ಜನರಿಗೆ ಬೀದಿ ನಾಯಿಗಳು (Street dog) ಕಚ್ಚಿದ್ದು ಇದೀಗ ಬೀದಿನಾಯಿಗಳಿಗೆ ಜನ ಭಯಪಡುವಂತಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರದಲ್ಲಿ ಬೀದಿನಾಯಿಗಳ ದಾಳಿಯಿಂದ ಜನ ಬೇಸತ್ತು ಹೋಗಿದ್ದಾರೆ. ಆದರೆ ಬಹುತೇಕ ಅರಣ್ಯವನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ (uttara kannada) ಮಾತ್ರ ಕಾಡುಪ್ರಾಣಿಗಳಿಗಿಂತ ನಾಯಿಗಳ ದಾಳಿಗೆ ಒಳಗಾದವರೇ ಹೆಚ್ಚಾಗುತಿದ್ದಾರೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತಿದೆ. ಅವು ರಸ್ತೆಯಲ್ಲಿ ಸಂಚರಿಸುವ ಜನ, ವಾಹನಗಳ ಮೇಲೆ ಮುಗಿಬೀಳುತಿದ್ದು ಈ ವರ್ಷದಲ್ಲೇ 6,533 ಜನರು ನಾಯಿಯ ದಾಳಿಗೆ ಒಳಗಾಗಿದ್ದಾರೆ.

ಅದರೆ ಕಾಡುಪ್ರಾಣಿಗಳಿಂದ ದಾಳಿಗೊಳಗಾಗಿದ್ದು 349 ಪ್ರಕರಣಗಳು ಮಾತ್ರ ದಾಖಲಾಗಿವೆ. ಬೀದಿ ನಾಯಿಗಳು ಮಕ್ಕಳು, ಮಹಿಳೆಯರು ವೃದ್ಧರ ಮೇಲೆ ಹೆಚ್ಚು ದಾಳಿ (dog bite) ನಡೆಸುತಿದೆ. ಹೀಗಾಗಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡುವಂತೆ ಸಾರ್ವಜನಿಕರು ಜಿಲ್ಲಾಡಳಿತವನ್ನು (uttara kannada) ಒತ್ತಾಯಿಸಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ಪಶುಸಂಗೋಪನಾ ಇಲಾಖೆ ಮಾಹಿತಿಯಂತೆ 7 ಸಾವಿರಕ್ಕೂ ಹೆಚ್ಚು ಬೀದಿನಾಯಿಗಳಿವೆ. ಸಂತಾನಹರಣ ಚಿಕಿತ್ಸೆ ಮಾಡದ ಹಿನ್ನೆಲೆಯಲ್ಲಿ ವರ್ಷದಿಂದ ವರ್ಷಕ್ಕೆ ನಾಯಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿವೆ. ಜಿಲ್ಲೆಯಲ್ಲಿ ನಾಯಿಗಳ ಕಡಿತದ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತಿದ್ದಂತೆ ಎಚ್ಚೆತ್ತ ಸ್ಥಳೀಯ ಆಡಳಿತ ನಾಯಿ ಹಿಡಿದು ಸಂತಾನಹರಣ ಚಿಕಿತ್ಸೆಗೆ ಮುಂದಾಗಿದೆ.

Also Read:

ರೇಬೀಸ್ ಇನ್ನು ಅಧಿಸೂಚಿತ ಕಾಯಿಲೆ, ನಾಯಿ ಕಡಿತದ ರೇಬೀಸ್ ಕಾಯಿಲೆ 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ: ಆರೋಗ್ಯ ಸಚಿವ ಸುಧಾಕರ್

ಆದರೆ ಕೆಲ ತಾಲೂಕುಗಳಲ್ಲಿ ನಾಯಿಗಳ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ನೂರಾರು ನಾಯಿಗಳನ್ನು ಹಿಡಿದು ಕಾಡಿನಲ್ಲಿ ಬಿಟ್ಟು ಬರುತಿದ್ದಾರೆ. ಹೀಗಾಗಿ ನಾಯಿಗಳು ಅಲ್ಲಿನ ಪ್ರಾಣಿಗಳಿಗೆ ಆಹಾರವಾಗುತ್ತಿವೆ. ಇದರಿಂದ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಎಡಿಸಿ ರಾಜು ಮೋಗವಿರ ಅವರು ಆದಷ್ಟು ಶೀಘ್ರವೇ ನಾಯಿಗಳನ್ನ ಹಿಡಿದು ಸಂತಾನಹರಣ ಚಿಕಿತ್ಸೆ ಮತ್ತು ಇತರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತೆ ಎನ್ನುವ ಭರವಸೆ ನೀಡಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ನಾಯಿಗಳ ಕಾಟದಿಂದ ಜನ ಬೇಸತ್ತು ಹೋಗಿದ್ದಾರೆ. ಆದರೆ ನಿಯಮದ ಪ್ರಕಾರ ನಡೆದುಕೊಳ್ಳಬೇಕಿದ್ದ ಸ್ಥಳೀಯ ಆಡಳಿತವು ನಾಯಿಗಳನ್ನು ಹಿಡಿದು ಕಾಡಿಗೆ ಬಿಡುತ್ತಿರುವುದಕ್ಕೆ ವ್ಯಾಪಕ ಅಕ್ರೋಶ ವ್ಯಕ್ತವಾಗಿದ್ದು, ಬೀದಿ ನಾಯಿಗಳ ಸಂತಾನಹರಣ ಚಿಕಿತ್ಸೆ ಮಾಡಿ ಅವುಗಳ ಸಂಖ್ಯೆಯನ್ನು ನಿಯಂತ್ರಣ ಮಾಡುವಂತೆ ಜನರು ಆಗ್ರಹಿಸಿದ್ದಾರೆ. (ವರದಿ: ವಿನಾಯಕ ಬಡಿಗೇರ, ಟಿವಿ 9, ಕಾರವಾರ)

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:19 pm, Mon, 12 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್