ಸಚಿವರಿಂದಲೇ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಸಚಿವ ಮಂಕಾಳು ವೈದ್ಯ ವಿರುದ್ಧ ಭಟ್ಕಳದ ಆರ್‌ಟಿಐ ಕಾರ್ಯಕರ್ತರು ಅರಣ್ಯ ಭೂಮಿ ಒತ್ತುವರಿ ಆರೋಪ ಮಾಡಿದ್ದಾರೆ. ಬೈಲೂರಿನ ಸರ್ಕಾರಿ ಅರಣ್ಯ ಜಾಗವನ್ನು ತಮ್ಮ ಶಿಕ್ಷಣ ಸಂಸ್ಥೆಗಾಗಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತಾಗಿ ರಾಜ್ಯಪಾಲರು ಮತ್ತು ಮುಖ್ಯ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಸಚಿವರಿಂದಲೇ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು
ಸಚಿವರಿಂದಲೇ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು
Edited By:

Updated on: Mar 01, 2025 | 2:54 PM

ಕಾರವಾರ, ಮಾರ್ಚ್​​ 01: ಸಚಿವರಿಂದಲೇ ಅರಣ್ಯ ಒತ್ತುವರಿ ಅಧಿಕಾರ ದುರುಪಯೋಗ ಆರೋಪ ಕೇಳಿಬಂದಿದೆ. ಸಚಿವ ಮಂಕಾಳು ವೈದ್ಯ (Mankala Vaidya) ವಿರುದ್ಧ ರಾಜ್ಯಪಾಲರು ಹಾಗೂ ಮುಖ್ಯ ಅರಣ್ಯಾಧಿಕಾರಿಗೆ ಭಟ್ಕಳದ ಆರ್‌ಟಿಐ ಕಾರ್ಯಕರ್ತರಾದ ಶಂಕರ್ ನಾಯ್ಕ, ನಾಗೇಂದ್ರ ನಾಯ್ಕ ಮತ್ತು ನಾಗೇಶ್ ನಾಯ್ಕ ಎಂಬುವವರಿಂದ ದೂರು ನೀಡಲಾಗಿದೆ.

ಸಚಿವ ಮಂಕಾಳು ವೈದ್ಯ ವಿರುದ್ಧ ಭಟ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಅರಣ್ಯ ಜಾಗದ ಸರ್ವೆ ನಂ- 600ರಲ್ಲಿ ಅಕ್ರಮವಾಗಿ ತಮ್ಮ ಬೀನಾ ವೈದ್ಯ ಶಿಕ್ಷಣ ಸಂಸ್ಥೆಗಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಗೋ ಕಳ್ಳತನ, ಹತ್ಯೆ ಮಾಡೋರನ್ನು ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ

ಇದನ್ನೂ ಓದಿ
ರಾಜಕೀಯದಲ್ಲಿ ನಂಬಿಕೆ ಬಹಳ ಮುಖ್ಯ, ಅದನ್ನು ಕಳೆದುಕೊಳ್ಳಬಾರದು: ಸುರೇಶ್
ಹೈಕಮಾಂಡ್ ಹೇಳಿದ್ದು ರಾಜಣ್ಣ ಮೇಲೆ ಯಾವುದೇ ಪ್ರಭಾವ ಬೀರಿಲ್ಲ
ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ: ಬೆಂಬಲಿಗರಿಗೆ ಕರೆ ನೀಡಿದ ವಿಜಯೇಂದ್ರ
PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಆಲ್​ ದಿ ಬೆಸ್ಟ್​

2024 ಮೇ 18ರಲ್ಲಿ ಅರಣ್ಯ ಇಲಾಖೆಯ ಜಾಗ ಒತ್ತುವರಿ ಮಾಡಿ ಮಣ್ಣು ತೆಗೆಯಲಾಗಿದೆ. ಈ ಕುರಿತು ಪ್ರಕರಣ ದಾಖಲಾದರೂ ಮಂಕಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸಚಿವ ಮಂಕಾಳು ವೈದ್ಯ ಹೆಸರು ಕೈಬಿಟ್ಟು ಬೇರೆಯವರ ಹೆಸರಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಚಿವರು ತಮ್ಮ ಪ್ರಭಾವ ಬಳಸಿರುವುದಾಗಿ ಆರ್​​ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಮಂಕಾಳು ವೈದ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಜ್ಯ ಅರಣ್ಯ ಮುಖ್ಯಾಧಿಕಾರಿ, ರಾಜ್ಯಪಾಲರಿಗೆ ದೂರು ನೀಡುವ ಜೊತೆ ನ್ಯಾಯಾಲಯದಲ್ಲೂ ಪ್ರತ್ಯೇಕ ದೂರು ದಾಖಲಾಗಿದೆ.

ಇದನ್ನೂ ಓದಿ: ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಬೇಕು: ಸಚಿವ ಮಂಕಾಳು ವೈದ್ಯ ಹೇಳಿಕೆಗೆ ಪರಮೇಶ್ವರ ಹೇಳಿದ್ದಿಷ್ಟು

ಇನ್ನು ಇತ್ತೀಚೆಗೆ ಗೋವು ಮತ್ತು ಜಾನುವಾರುಗಳ ಕಳವು, ಹತ್ಯೆ, ಕ್ರೌರ್ಯಗಳ ಬಗ್ಗೆ ಮಾತನಾಡಿದ್ದ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಗೋ ಕಳವು, ಹತ್ಯೆ ಮಾಡುವವರನ್ನು ರಸ್ತೆಯಲ್ಲಿ ಸರ್ಕಲ್​​ನಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದು ಹೇಳಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕೂಡ ಗ್ರಾಸವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us