ಮಂಗನ ಸಾವು: ಅಂಕೋಲಾ ಗ್ರಾಮಸ್ಥರಲ್ಲಿ ಮಡುವುಗಟ್ಟಿದ ಆತಂಕ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಕೋತಿ ಮೃತಪಟ್ಟಿದೆ. ಈಗಾಗಲೇ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಮಂಗನ ಕಾಯಿಲೆಯಿಂದ ಈಗ ಕೋತಿ ಮೃತಪಟ್ಟಿದೆ ಎಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಅವರ್ಸಾ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಆರು ಮಂಗಗಳು ಸತ್ತಿದ್ದವು. ಅಲ್ಲದೆ ಅಂಕೋಲಾ […]
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಕೋತಿ ಮೃತಪಟ್ಟಿದೆ. ಈಗಾಗಲೇ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಮಂಗನ ಕಾಯಿಲೆಯಿಂದ ಈಗ ಕೋತಿ ಮೃತಪಟ್ಟಿದೆ ಎಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಅವರ್ಸಾ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಆರು ಮಂಗಗಳು ಸತ್ತಿದ್ದವು. ಅಲ್ಲದೆ ಅಂಕೋಲಾ ತಾಲೂಕಿನಲ್ಲಿ ಕಳೆದ ವರ್ಷ ಮಂಗನ ಕಾಯಿಲೆ ಪ್ರಕರಣ ಬೆಳಕಿಗೆ ಬಂದಿತ್ತು. ಹೀಗಾಗಿ ಗ್ರಾಮಸ್ಥರಲ್ಲಿ ಮಂಗನ ಕಾಯಿಲೆಯ ಆತಂಕ ಹೆಚ್ಚಾಗಿದೆ.
Published On - 11:07 am, Sat, 18 January 20