ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ

ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ.

ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ- ಜಿಲ್ಲೆಯ ಜನರಲ್ಲಿ ಹೆಚ್ಚಿದ ಆತಂಕ
ಅಂಕೋಲಾದಲ್ಲಿ ಮಂಗನ ಕಾಯಿಲೆ ಹೆಚ್ಚಳ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 29, 2024 | 4:17 PM

ಉತ್ತರ ಕನ್ನಡ,ಫೆ.29: ಜಿಲ್ಲೆಯಲ್ಲಿ ಮಂಗನ ಕಾಯಿಲೆ(Monkey Disease) ಹಾವಳಿ ಹೆಚ್ಚಾಗಿದೆ. ಅದು ಅಲ್ಲದೆ ಇಷ್ಟು ದಿನ ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಮಂಗನ ಕಾಯಿಲೆ, ಇದೀಗ ಅಂಕೋಲಾ(Ankola) ತಾಲೂಕಿಗೆ ವ್ಯಾಪಿಸಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ. ಕಾಡಿನಂಚಿನಲ್ಲಿರುವ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಗೆ ಎಲ್ಲೋ ಕಾಡಿನಲ್ಲಿ ಮಂಗ ಸಾವನಪ್ಪಿರುವ ಹಿನ್ನೆಲೆ ಈ ಕಾಯಿಲೆ ಕಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ 2 ಸಾವು, 46 ಪ್ರಕರಣ ಪತ್ತೆ

ಇನ್ನು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಂಗನ ಕಾಯಿಲೆಯಿಂದ ಇಬ್ಬರು ಸಾವನ್ನಪ್ಪಿದ್ದರೆ, 46 ಪ್ರಕರಣಗಳು ಪತ್ತೆಯಾಗಿದೆ. ಅದರಲ್ಲಿ ಸಿದ್ದಾಪುರ ತಾಲೂಕಿನಲ್ಲಿಯೇ 45 ಹಾಗೂ ಅಂಕೊಲಾ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆರೋಗ್ಯ ಇಲಾಖೆ ಸಿಬ್ಬಂದಿ, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆಸಿದ್ದಾರೆ. ಆದರೆ, ಸಾರ್ವಜನಿಕರು ಮಾತ್ರ, ‘ನಿಮ್ಮ ಮುಂಜಾಗೃತೆ ಬೇಡ ನಮಗೆ, ಲಸಿಕೆ ಕೊಡಿ ಎನ್ನುತ್ತಿದ್ದಾರೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇದೇ ಫೆ.26 ರಂದು ಮಂಗನ ಕಾಯಿಲೆಗೆ 2ನೇ ಬಲಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದರು. 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಎರಡನೇ ಸಾವು ಸಂಭವಿಸಿತ್ತು.

ಅರಣ್ಯಕ್ಕೆ ಹೋದವರಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಯಿಲೆ

ಅರಣ್ಯಕ್ಕೆ ಹೋದ ಜನರಿಗೆ ಉಣ್ಣೆಗಳು ಕಚ್ಚಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಕೊಪ್ಪ ತಾಲ್ಲೂಕಿನಲ್ಲಿ ಹರಡಿರುವ ಮಂಗನ ಕಾಯಿಲೆಗೆ ಮರ ಕಡಿತವೇ ಕಾರಣ ಎಂಬುದನ್ನು ಸ್ಥಳೀಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ