Monkeypox Virus: ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ

Kyasanur Forest Disease: ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ (KFD) ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರ (Siddapura)ದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Monkeypox Virus: ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ
ಸಿದ್ದಾಪುರದಲ್ಲಿ ಮಂಗನ ಕಾಯಿಲೆ
Follow us
| Updated By: Digi Tech Desk

Updated on:Feb 02, 2024 | 11:25 AM

ಉತ್ತರ ಕನ್ನಡ, ಜ.31: ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ (KFD) ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರ (Siddapura)ದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಮೂಲಕ 10 ದಿನದಲ್ಲಿ ಇದರ ಸಂಖ್ಯೆ 16 ಕ್ಕೇರಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಹೆಚ್ಚಾದ ಮಂಗನ ಕಾಯಿಲೆಗೆ ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಜಿಲ್ಲೆಯಲ್ಲಿ‌ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದ್ದು, ಇದು ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ ಮಂಗನ ಕಾಯಿಲೆ ಆತಂಕ ಕಾಡುತ್ತಿದೆ.

ಇದನ್ನೂ ಓದಿ:ಮಲೆನಾಡಿನಲ್ಲಿ ಹೆಚ್ಚಾದ ಮಂಗನ ಕಾಯಿಲೆ; ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಕಳೆದ ಐದು ವರ್ಷದಲ್ಲಿ ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನ ಸೋಂಕಿತರಾಗಿದ್ದು,  8 ಜನ ಈ ಕಾಯಿಲೆಯಿಂದ ಮೃತರಾಗಿದ್ದರು. ಇದೀಗ ಶಿವಮೊಗ್ಗ ಜಿಲ್ಲೆಯ ಗಡಿಯನ್ನು ಹೊಂದುಕೊಂಡಿರುವ ಸಿದ್ದಾಪುರದ ಕೊರ್ಲಕೈ, ಬಿಳಗಿ ಗ್ರಾಮದ ಒಟ್ಟು 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡರೇ ಹಲವು ಜನರಲ್ಲಿ ಈ ಸೊಂಕಿನ ಲಕ್ಷಣ ಕಂಡುಬಂದಿದೆ. ಇನ್ನು ಈ ಭಾಗದ ಜನರ ರಕ್ತ ಮಾದರಿ ಸಹ ಪಡೆಯಲಾಗುತ್ತಿದ್ದು, ಈ ಭಾಗದಲ್ಲಿ ಎರಡು ಮಂಗಳು ಸಾವನ್ನಪ್ಪಿದೆ.

ಸಧ್ಯ ಮಾರಣಾಂತಿಕ ಮಂಗನ ಕಾಯಿಲೆ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರನ್ನು ಬೆಂಬಿಡದೇ ಕಾಡುತಿದ್ದು, ಎರಡು ವರ್ಷದಿಂದ ಲಸಿಕೆ ಇಲ್ಲದೇ “ತೈಲವೇ ಗತಿ” ಎನ್ನುವಂತಾಗಿದೆ. ದೊಡ್ಡ ಮಟ್ಟದ ಸಾವು-ನೋವುಗಳು ಆಗುವುದರೊಳಗೆ ಸರ್ಕಾರ ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 31 January 24

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ