Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ

ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ.

Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: May 06, 2024 | 7:10 AM

ಸಿದ್ದಾಪುರ, ಮೇ 6: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (Siddapur) ತಾಲೂಕಿನ ಅರೆಂದೂರಿನ 5 ವರ್ಷದ ಬಾಲಕಿ ಮಂಗನ ಕಾಯಿಲೆಯಿಂದ (Monkeypox) ಮೃತಪಟ್ಟಿದ್ದಾಳೆ. ಇದರೊಂದಿಗೆ, ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಇತ್ತೀಚೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾದಂತಾಗಿದೆ. ಮಲೆನಾಡು ಪ್ರದೇಶದಲ್ಲಿ ಮಂಗನ ಕಾಯಿಲೆ ಮತ್ತೆ ಉಲ್ಬಣಗೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ.

ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ ರಾಮಚಂದ್ರಗೌಡ ಎಂಬವರು ಮಾರ್ಚ್​​ನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದರು.

ಏನಿದು ಮಂಗನ ಕಾಯಿಲೆ?

ಮಂಗನ ಕಾಯಿಲೆಯನ್ನು ಮಂಕಿಫಾಕ್ಸ್​ ಅಥವಾ ಕೆಎಫ್‌ಡಿ ಎಂದೂ ಕರೆಯಲಾಗುತ್ತದೆ. ಇದೊಂದು ವೈರಲ್ ಹೆಮರಾಜಿಕ್ ಕಾಯಿಲೆಯಾಗಿದ್ದು, ಇದನ್ನು ಮೊದಲು 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಅರಣ್ಯದಲ್ಲಿ ಗುರುತಿಸಲಾಯಿತು. ಅಂದಿನಿಂದ ಇದನ್ನು ಕ್ಯಾಸನೂರ್ ಫಾರೆಸ್ಟ್ ಡಿಸೀಸ್ (ಕೆಎಫ್​ಡಿ) ಎಂದೇ ಕರೆಯಲಾಗುತ್ತಿದೆ.

ಹಠಾತ್ ಜ್ವರ, ತಲೆನೋವು, ವಾಂತಿ, ಹೊಟ್ಟೆ ನೋವು, ಸ್ನಾಯು ನೋವು ಮತ್ತು ಬೆನ್ನುನೋವು, ಚಳಿ, ಸುಸ್ತು ಮತ್ತು ಅತಿಸಾರ ಇವು ಮಂಗನ ಕಾಯಿಲೆಯ ಆರಂಭಿಕ ಲಕ್ಷಣಗಳಾಗಿವೆ. ರಕ್ತಸ್ರಾವದ ರೋಗಲಕ್ಷಣಗಳೊಂದಿಗೆ ತೀವ್ರವಾಗುವ ಈ ರೋಗವು ಜೀವಕ್ಕೆ ಆಪತ್ತು ಉಂಟುಮಾಡಬಹುದು. ಈ ವೈರಸ್‌ನ ಲಕ್ಷಣಗಳು ಸಾಮಾನ್ಯವಾಗಿ ಸೋಂಕು ತಗುಲಿದ 2ರಿಂದ 7 ದಿನಗಳ ನಂತರ ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ ಮೂರಕ್ಕೇರಿಕೆ

ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕಿಗೆ ಒಳಗಾದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಥವಾ ಮಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ