ಉತ್ತರ ಕನ್ನಡ, ಡಿ.23: ಆಟವಾಡುತ್ತಾ ಇಟ್ಟಿಗೆ ತಯಾರಿಕೆಗೆ ಶೇಖರಿಸಿಟ್ಟಿದ್ದ ನೀರಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ(Mundgod) ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದೂರಿನ ಮಾನ್ವಿತ ಮಲ್ಲಿಕಾರ್ಜುನ ಹೊಸೂರ(3) ಮೃತ ಮಗು, ಇನ್ನು ಮಗುವಿನ ತಾಯಿ ಮಾನ್ವಿತಳನ್ನು ತನ್ನ ಜೊತೆಗೆ ಇಟ್ಟಿಗೆ ಕೆಲಸಕ್ಕೆ ಕರೆತಂದಿದ್ದಳು. ತಾಯಿ ತನ್ನ ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಮಾನ್ವಿತ ನೀರಿಗೆ ಬಿದ್ದು ಕೊನೆಯುಸಿರೆಳೆದಿದೆ.
ಇನ್ನು ಮಗು ಬಿದ್ದಿದ್ದನ್ನು ನೋಡಿದ ತಾಯಿ ಕೂಡಲೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ತಾಲೂಕು ಆಸ್ಪತ್ರೆ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಈ ಹಿನ್ನಲೆ ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಮಗುವನ್ನು ಹುಬ್ಬಳ್ಳಿ ಕಿಮ್ಸ್ಗೆ ಕಳುಹಿಸಿ ಕೊಟ್ಟಿದ್ದಾರೆ. ಆದರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಅಂಗನವಾಡಿ ಸಿಬ್ಬಂದಿ ಎಡವಟ್ಟು: ಲಸಿಕೆ ಓವರ್ ಡೋಸ್‌ನಿಂದ ಮಗು ಸಾವು, ಪೋಷಕರ ಆರೋಪ
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಬಳಿ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಹಾಸನದ ಹೆರಗು ಗ್ರಾಮ ಪಂಚಾಯತಿ ಅಧ್ಯಕ್ಷ ಕುಮಾರ್(48) ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇತ್ತೀಚೆಗಷ್ಟೇ ಕುಮಾರ್ ಹೆರಗು ಗ್ರಾಮ ಪಂಚಾಯತಿ ಅಧ್ಯಕ್ಷನಾಗಿದ್ದ. ಈ ಘಟನೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:49 pm, Sat, 23 December 23