ಗೋಕರ್ಣ ಕ್ಷೇತ್ರದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬಸ್ಥರು, ತಡವಾಗಿ ಬೆಳಕಿಗೆ ಬಂದ ಪ್ರಸಂಗ
ಧಾರವಾಡದ ಶಂಸಾದ್ ಕುಟುಂಬವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರಾಗಿದ್ದಾರೆ. ಹಿಂದೂ ಸಂಪ್ರದಾಯಗಳನ್ನು ಚಾಚೂ ತಪ್ಪದೆ ಪಾಲನೆ ಮಾಡುತ್ತಾ ಬಂದಿದ್ದಾರೆ. ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಈ ಕುಟುಂಬ ಹೆಚ್ಚು ಒಡನಾಟ ಹೊಂದಿದೆ.
ಗೋಕರ್ಣ: ಮುಸಲ್ಮಾನರ ಕುಟುಂಬವೊಂದು (Muslim family) ಮೊನ್ನೆ ಬುಧವಾರ (ಅಕ್ಟೋವರ್ 4) ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ (Gokarna) ಕೋಟಿ ತೀರ್ಥದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ (Pitru Karma a patriarchy ceremony as per Hindu Tradition) ನೆರವೇರಿಸಿದ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ಕಟ್ಟಿಗೆ ಕೆಲಸ ಮಾಡುವ ಕುಟುಂಬಸ್ಥರು ಧಾರವಾಡದ (Dharwad) ಜ್ಯೋತಿಷಿ ಒಬ್ಬರ ಸಲಹೆಯ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಕಾರ್ಯವನ್ನು ಇಲ್ಲಿಯ ಪಿತೃಶಾಲೆಯಲ್ಲಿ ಪೂರೈಸಿದ್ದಾರೆ.
ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ಕುಟುಂಬವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರಾಗಿದ್ದಾರೆ. ಹೀಗಾಗಿ ಮೊದಲಿಂದಲೂ ಹಿಂದೂ ಸಂಪ್ರದಾಯಗಳನ್ನು ಚಾಚೂ ತಪ್ಪದೆ ಪಾಲನೆ ಮಾಡುತ್ತಾ ಬಂದಿದ್ದಾರೆ. ಇನ್ನು ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಈ ಕುಟುಂಬ ಹೆಚ್ಚು ಒಡನಾಟ ಇಟ್ಟುಕೊಂಡು ಬೆಳೆದುಬಂದಿದೆಯಂತೆ.
ಶಂಸಾದ್‌ರ ತಮ್ಮನಿಗೆ ಮದುವೆ ಸಂಬಂಧವು ಸರಿಯಾಗಿ ಕೂಡಿ ಬರುತ್ತಿರಲಿಲ್ಲ, ಹೆಣ್ಣು ಸಿಕ್ಕಿಲ್ಲ ಅಂತಾ ಜ್ಯೋತಿಷಿಯ ಮೊರೆ ಹೋಗಿದ್ದರಂತೆ. ಆಗ ಅವರು ಶಂಸಾದ್‌ರ ಅಜ್ಜ ಹುಸೇನ್ ಸಾಬ್ ಸತ್ತು ಹಲವು ವರ್ಷಗಳಾದರೂ ಅವರ ಆತ್ಮಕ್ಕೆ ಇನ್ನೂ ಶಾಂತಿ ಸಿಕ್ಕಿಲ್ಲ. ಹೀಗಾಗಿ ನಿಮ್ಮ ಕುಟುಂಬಕ್ಕೆ ಅದರ ಕಾಟ ಶುರುವಾಗಿದೆ. ನೀವು ಪಿತೃಪಿಂಡ ಕಾರ್ಯ ಮಾಡಿ ಅಂತಾ ತಿಳಿಸಿದ್ದರಂತೆ.
ಅವರ ಸಲಹೆಯಂತೆ ನಡೆದು ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದು ಶಂಸಾದ್ ಹೇಳಿದ್ದಾರೆ.
Also Read: ಕಳಸ – ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ
ಜ್ಯೋತಿಷಿ ತೋರಿದ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು, ಕ್ಷೇತ್ರ ಪುರೋಹಿತರಾದ ವೇದಬ್ರಹ್ಮ ನಾಗರಾಜ ಭಟ್ ಗ ರ್ಲಿಂಗ್ ಹಾಗೂ ವೇ. ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ್ದಾರೆ.
ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು (ಗೋವಾ ಮತ್ತು ವಿದೇಶಿಗರು) ಇಂತಹ ಪಿತೃಕಾರ್ಯ ನೆರವೇರಿಸುವ ಅನೇಕ ಉದಾಹರಣೆಗಳಿವೆ. ಆದರೆ ಮುಸಲ್ಮಾನರ ಕುಟುಂಬ ಇದೇ ಮೊದಲ ಬಾರಿಗೆ ಪಿತೃಕಾರ್ಯ ಮಾಡಿರುವುದು ಎಂದು ತಿಳಿದುಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:23 pm, Sat, 7 October 23