ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಚ್ಚಿದ ಮುಸ್ಲಿಂ ವರ್ತಕರು, ನಾಳೆ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸುವಂತೆ ಕರೆ

ನಗರದ ಪ್ರಮುಖ ರಸ್ತೆಯಲ್ಲಿರುವ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್ ವರೆಗೆ ಇರುವ ಬಹುತೇಕ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಚ್ಚಿದ ಮುಸ್ಲಿಂ ವರ್ತಕರು, ನಾಳೆ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸುವಂತೆ ಕರೆ
ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟುಗಳ ಬಂದ್
Follow us
| Updated By: ಆಯೇಷಾ ಬಾನು

Updated on:Mar 15, 2022 | 7:49 PM

ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಇವತ್ತು(ಮಾರ್ಚ್ 15) ಮಹತ್ವದ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ವಸ್ತ್ರ ಸಂಹಿತೆ ಕಾನೂನು ಬದ್ಧ. ಸರ್ಕಾರದ ವಸ್ತ್ರ ಸಂಹಿತೆಯನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದ್ರೆ ಈ ತೀರ್ಪು ಕೆಲ ಮುಸ್ಲಿಂ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಮುಖಂಡರಿಗೆ ಅಸಮಾಧಾನ ತಂದಿದೆ. ಸದ್ಯ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೆಲ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ನಗರದ ಪ್ರಮುಖ ರಸ್ತೆಯಲ್ಲಿರುವ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್ ವರೆಗೆ ಇರುವ ಬಹುತೇಕ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಭಟ್ಕಳದ ಮಜ್ಲಿಸ್ಲೆ ಇಸ್ಲಾಹೋ ತಂಜೀಮ್ ಸಂಘಟನೆ ಕಾರ್ಯಕರ್ತರೊಂದಿಗೆ ಸಭೆ ನಡಿಸಿ, ಪ್ರೇಸ್ ಮೀಟ್ ಮಾಡಿದೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್, ಬುರ್ಖಾ ಬಹು ಮುಖ್ಯ. ಹಿಜಾಬ್ ಬಗ್ಗೆ ಅಭಿಮಾನ ಇದ್ದವರು ನಾಳೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಬಹುದು. ಒತ್ತಾಯವಾಗಿ ಬಂದ್ ಮಾಡಿ ಅಂತಾ ನಾವು ಹೇಳುವುದಿಲ್ಲ, ಸ್ವಯಂ ಪ್ರೇರಿತವಾಗಿ ಬಂದ್ ಮಾಡಬಹುದು. ಸಂಘಟನೆಯಲ್ಲಿ 100 ಕ್ಕೂ ಹೆಚ್ಚು ಜನರ ಒತ್ತಾಯ ಇತ್ತು ಬಂದ್ ಮಾಡಿ ಅಂತಾ. ನಾವು ಒತ್ತಾಯವಾಗಿ ಬಂದ್ ಮಾಡಿ ಅಂತ ಹೇಳಲ್ಲ, ಹಿಜಾಬ್ ಬಗ್ಗೆ ಅಭಿಮಾನ ಇದ್ದವರು ಸ್ವಯಂ ಪ್ರೇರಿತವಾಗಿ ನಾಳೆ ಬಂದ್ ಮಾಡುತ್ತಾರೆ ಎಂದ ಸಂಘಟನೆ ಮುಖ್ಯಸ್ಥ ಇಮ್ರಾನ್ ಲಂಕಾ ತಿಳಿಸಿದ್ದಾರೆ. ಹೈಕೋಟ್೯ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋಟ್೯ ಗೆ ಅಪಿಲ್ ಹೋಗುತ್ತೇವೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಈ ತೀರ್ಪಿಗಾಗಿ ಕಾದಿದ್ದ ಹೆಣ್ಮಕ್ಕಳಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಇನ್ನು ಮತ್ತೊಂದೆಡೆ ರಾಜ್ಯ ಹೈ ಕೋರ್ಟ್ ನಿಂದ ಹಿಜಾಬ್ ತೀರ್ಪು ಹಿನ್ನೆಲೆ ಮಂಗಳೂರಿನಲ್ಲಿ ನ್ಯಾಷನಲ್ ವಿಮೆನ್ಸ್ ಫ್ರಂಟ್ ರಾಜ್ಯಾಧ್ಯಕ್ಷೆ ಫರ್ಜಾನಾ ಮುಹಮ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ಕುರಿತ ತೀರ್ಪು‌ ಅಸಮಾಧಾನಕರವಾಗಿದೆ. ಈ ತೀರ್ಪು ಸಂವಿಧಾನ ನಮಗೆ ಕೊಟ್ಟ ಹಕ್ಕನ್ನು ಮೊಟಕುಗೊಳಿಸಿದೆ. ವಿದ್ಯಾರ್ಥಿನಿಯರ ಹಿತ ಕಡೆಗಣಿಸಿ ಸರ್ಕಾರ ಸಂಘಪರಿವಾರದ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈ ತೀರ್ಪು ನಮ್ಮ ಸಂವಿಧಾನದ ಹಕ್ಕನ್ನು ಕಸಿದು ಕೊಂಡಿದೆ. ಸಂಘಪರಿವಾರ ಮಹಿಳಾ ‌ಮತ್ತು ಪ್ರತಿಗಾಮಿ ಕೂಟವಾಗಿದೆ. ನಮ್ಮ ಸಾಕ್ಷರತೆ ಪ್ರಮಾಣ ಇಳಿಸಲು ಸಂಘಪರಿವಾರ ಹಿಜಾವ್ ವಿವಾದ ಎಬ್ಬಿಸಿದೆ. ಈ ತೀರ್ಪು ಮುಸ್ಲಿಂ ಸಮುದಾಯಕ್ಕೆ ತುಂಬಾ ನೋವುಂಟು ಮಾಡಿದೆ. ಆದರೆ ಈ ತೀರ್ಪು ಸಂಘ ಪರಿವಾರಕ್ಕೆ ಮಾತ್ರ ಖುಷಿ ಕೊಟ್ಟಿದೆ. ಈ ತೀರ್ಪಿಗಾಗಿ ಕಾದಿದ್ದ ಹೆಣ್ಮಕ್ಕಳಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ. ಆ ಹೆಣ್ಮಕ್ಕಳ ಪರವಾಗಿ ನಮ್ಮ ಸಂಘಟನೆ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಧಾರ್ಮಿಕ ಸ್ವಾತಂತ್ರ್ಯದ ಜೊತೆ ಶಿಕ್ಷಣ ಪಡೆಯಿರಿ ಅಂತ ನಾವು ಅವರಿಗೆ ಹೇಳ್ತೇವೆ. ಅವರು ಮುಂದೆಯೂ ಕಾನೂನು ಹೋರಾಟ ಮಾಡಲು ನಾವು ಬೆಂಬಲಿಸ್ತೇವೆ. ಧಾರ್ಮಿಕ ಸ್ವಾತಂತ್ರ್ಯದ ಜೊತೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟರೆ ಅವರು ಬರೆಯಲಿ. ಪರೀಕ್ಷೆ ಬರೆಯಲು ಅವಕಾಶ ಸಿಗದೇ ಅವರು ಹೊರಗೆ ಬಂದ್ರೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರು ಪ್ರತಿಭಟಿಸದೇ ಇದ್ರೆ ಮುಂದೆ ಬೇರೆ ಹಕ್ಕನ್ನ ಕಸಿದುಕೊಳ್ಳಬಹುದು‌. ಈ ಮೂವರು ನ್ಯಾಯಮೂರ್ತಿಗಳ ತೀರ್ಪು ಸಂವಿಧಾನಿಕ ಹಕ್ಕಿನ ವಿರುದ್ದವಾಗಿದೆ. ಇವತ್ತಿನ ಈ ತೀರ್ಪು ಫ್ಯಾಶಿಸ್ಟ್ ಪರ ನೀಡಿದ ತೀರ್ಪಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Parliament Budget Session 2022 ಉಕ್ರೇನ್‌ನಿಂದ 22,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಮರಳಿದ್ದಾರೆ: ಜೈಶಂಕರ್

Hijab: ಹಿಜಾಬ್ ಇಲ್ಲದೆ ನಾವು ಕಾಲೇಜಿಗೆ ಹೋಗುವುದಿಲ್ಲ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಉಡುಪಿ ವಿದ್ಯಾರ್ಥಿನಿಯರ ಸುದ್ದಿಗೋಷ್ಠಿ

Published On - 5:42 pm, Tue, 15 March 22