AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸೋದ್ಯಮ ಕಚೇರಿಯಲ್ಲೇ ಅಧಿಕಾರಿಯ ಬೆಡ್​ರೂಂ! ಮಂಚ, ಹಾಸಿಗೆ ನೋಡಿ ಬೆಚ್ಚಿಬಿದ್ದ ಎಸಿ

ಇದು ಸರ್ಕಾರಿ ಕಚೇರಿಯೋ ಅಲ್ಲಾ ಅಧಿಕಾರಿಯ ಬೆಡ್​ ರೂಮೋ? ಪ್ರವಾಸೋದ್ಯಮ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿ ನೋಡಿದ ಎಸಿಯೇ ಶಾಕ್​ಗೆ ಒಳಗಾಗಿದ್ದರು. ಅಲ್ಲಿ ಕೆಲಸ ಮಾಡಲು ಸರಿಯಾಗಿ ಜಾಗ ಇತ್ತೋ ಇಲ್ಲವೋ, ಆದರೆ, ಮಂಚ, ಹಾಸಿಗೆ ಎಲ್ಲವೂ ಇತ್ತು! ಇದೇನಿದರು ಪ್ರಕರಣ? ವಿವರಗಳಿಗೆ ಮುಂದೆ ಓದಿ.

ಪ್ರವಾಸೋದ್ಯಮ ಕಚೇರಿಯಲ್ಲೇ ಅಧಿಕಾರಿಯ ಬೆಡ್​ರೂಂ! ಮಂಚ, ಹಾಸಿಗೆ ನೋಡಿ ಬೆಚ್ಚಿಬಿದ್ದ ಎಸಿ
ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಮಂಚ, ಹಾಸಿಗೆ!
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Feb 20, 2025 | 9:15 AM

Share

ಕಾರವಾರ, ಫೆಬ್ರವರಿ 20: ಅದು ಪ್ರವಾಸೋದ್ಯಮ ಇಲಾಖೆಯ ಕಚೇರಿ. ಸರಿಯಾಗಿ ಆಡಳಿತ ನಡೆಸುವುದಕ್ಕೇ ಅದರಲ್ಲಿ ಜಾಗವಿಲ್ಲ. ಆದಾಗ್ಯೂ ಮಂಚ, ಹಾಸಿಗೆ ಎಲ್ಲ ಇದೆ! ಮೇಲ್ನೋಟಕ್ಕೆ ಅದು ಸರ್ಕಾರಿ ಕಚೇರಿಯೋ ಅಥವಾ ಅಧಿಕಾರಿಯ ಬೆಡ್​ರೂಮಾ ಎಂಬ ಅನುಮಾನ ಬರುವಂತಿದೆ. ಪ್ರವಾಸೋದ್ಯಮ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಕಂಡುಬಂದ ಅವಸ್ಥೆ ಇದು. ಈ ರೀತಿಯ ವ್ಯವಸ್ಥೆಯನ್ನು ನೋಡಿ ಖುದ್ದು ಎಸಿ ಕನಿಷ್ಕ ಅವರೇ ಆಘಾತಗೊಂಡಿದ್ದಾರೆ.

ಯಾರಿಗೂ ಗೊತ್ತಿಲ್ಲದ ಹಾಗೆ ಅಧಿಕಾರಿ ಕಚೇರಿಯನ್ನೇ ಬೆಡ್​ರೂಂ ಮಾಡಿಕೊಂಡಿದ್ದರೇ? ಅದರ ಬಗ್ಗೆ ಮಾಹಿತಿ ಹೊರಬಾರದಂತೆ ನೋಡಿಕೊಂಡಿದ್ದರೇ ಎಂಬ ಅನುಮಾನ ಈಗ ವ್ಯಕ್ತವಾಗಿದೆ.

ಬಯಲಿಗೆ ಬಂದಿದ್ದು ಹೇಗೆ?

ಬೆಡ್ ರೂಂ ಬಾಗಿಲು ಕಾಣಿಸದಂತೆ ಟ್ರೆಶರಿ ಇಡಲಾಗಿತ್ತು. ಹೀಗಾಗಿ ಅದು ಮೇಲ್ನೋಟಕ್ಕೆ ಗಮನಕ್ಕೆ ಬರುತ್ತಿರಲಿಲ್ಲ. ಇಂಥ ಸಂದರ್ಭದಲ್ಲಿ ಪ್ರವಾಸೋದ್ಯಮ ಕಚೇರಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರ ಮಾಡಬೇಕಾಗಿ ಬಂದಿತ್ತು. ಹೀಗೆ ಸ್ಥಳಾಂತರ ಮಾಡುವಾಗ ಬೆಡ್ ರೂಂ ಪ್ರಕರಣ ಬೆಳಕಿಗೆ ಬಂದಿದೆ.

Uttara Kannada Tourism Office

ಪ್ರವಾಸೋದ್ಯಮ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿ

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬೃಹತ್ ಕೈಗಾರಿಕಾ ಇಲಾಖೆ ಅಧಿಕಾರಿ ಆಗಿರುವ ಜಯಂತ ಕಳೆದ ಕೆಲವು ತಿಂಗಳಿನಿಂದ ಹೆಚ್ಚುವರಿಯಾಗಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಬೃಹತ್ ಕೈಗಾರಿಕೆ ಇಲಾಖೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಜಯಂತ ಹೋಗಿದ್ದ ಹಿನ್ನೆಲೆ, ಪ್ರವಾಸೊದ್ಯಮ ಇಲಾಖೆಯ ಚಾರ್ಜ್ ಕಾರವಾರ ಎಸಿ ಕನಿಷ್ಕಗೆ ಕೊಟ್ಟಿದ್ದರು. ಕಾರವಾರ ಸಾರ್ವಜನಿಕ ಆಸ್ಪತ್ರೆಗೆ ನೇರ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಡಿಸಿ ಆದೇಶದ ಮೇರೆಗೆ ಕಚೇರಿ ಸ್ಥಳಾಂತರ ಮಾಡಲು ಎಸಿ ಕನಿಷ್ಕ ಮುಂದಾಗಿದ್ದಾರೆ. ಈ ವೇಳೆ ಮಂಚ, ಹಾಸಿಗೆ ಎಲ್ಲ ಕಾಣಿಸಿದೆ. ಈ ಬಗ್ಗೆ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದ್ದಿಗೆ ಕೇಳಿದರೆ ಯಾರೂ ಕೂಡ ಉತ್ತರ ಕೊಟ್ಟಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾರವಾರ ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್​​ಗೆ ನೀಡುತ್ತಿದ್ದ ಮತ್ತೋರ್ವ ಅರೆಸ್ಟ್: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಸರ್ಕಾರಿ ಕಚೇರಿಯನ್ನು ಮನೆ ರೀತಿಯಲ್ಲಿ ಬಳಿಸಿಕೊಂಡ ಬಗ್ಗೆ ಇದೀಗ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಮಾಹಿತಿ ಕೇಳಿದ್ದಾರೆ. ಪ್ರವಾಸೋದ್ಯಮ ಉಪನಿರ್ದೇಶಕ ಜಯಂತ್​ಗೆ ನೋಟಿಸ್ ಕೊಟ್ಟಿದ್ದಾರೆ. ಮೂರು ದಿನದಲ್ಲಿ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ. ಆದರೆ, ಆ ಗಡುವು ಮುಗಿದಿದ್ದು, ಇನ್ನೂ ಜಯಂತ್ ಉತ್ತರ ಕೊಟ್ಟಿಲ್ಲ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​