ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು! ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲು

| Updated By: sandhya thejappa

Updated on: May 08, 2022 | 11:24 AM

ತಲೆ ಸುತ್ತುವಿಕೆ, ಉಸಿರಾಟ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು! ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲು
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ
Follow us on

ಕಾರವಾರ: ಹಾಲಕ್ಕಿ ಒಕ್ಕಲಿಗ ಸುಪ್ರಸಿದ್ಧ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (Sukri Bommu Gouda) ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಸಂಬಂಧಿಕರು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ (KMC Hospital) ದಾಖಲಿಸಿದ್ದಾರೆ. ನಿನ್ನೆ (ಮೇ 07) ರಾತ್ರಿ ಕಾರವಾರ ಆಸ್ಪತ್ರೆಯಿಂದ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ತಲೆ ಸುತ್ತುವಿಕೆ, ಉಸಿರಾಟ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕಳೆದ ನವೆಂಬರ್ ಹೊತ್ತಿಗೆ ಸುಕ್ರಿ ಬೊಮ್ಮಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ದೀಪಾವಳಿ ಹಬ್ಬಕ್ಕೆ ಮನೆಗೆ ಕಳಿಸಬೇಕು ಎಂದು ಉಪವಾಸ ಕುಳಿತಿದ್ದರು. ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿತ್ತು. ಸುಕ್ರಿ ಬೊಮ್ಮಗೌಡ ಹಠದಿಂದ ವೈದ್ಯರು ಕಕ್ಕಾಬಿಕ್ಕಿಯಾಗಿದ್ದರು. ಅವರ ಹಠಕ್ಕೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿನ ಜಿಲ್ಲಾಸ್ಪತ್ರೆಯಿಂದ ಮನೆಗೆ ಶಿಫ್ಟ್‌ ಮಾಡಲಾಗಿತ್ತು. ಆಕ್ಸಿಜನ್ ಸಮೇತ ಅಂಕೋಲದ ಬಡಿಗೇರಿ ನಿವಾಸಕ್ಕೆ ಶಿಫ್ಟ್‌ ಮಾಡಲಾಗಿತ್ತು.

ಸುಕ್ರಿ ಬೊಮ್ಮಗೌಡ ಯಾರು?
ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗೆ ಪಂಗಡಕ್ಕೆ ಸೇರಿದವರು. ಸಾಂಪ್ರಾದಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ, ಪುರಸ್ಕಾರಗಳು ಅವರಿಗೆ ಲಭಿಸಿವೆ. ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನ ಕಲಿಸಿ ಕೊಡುತ್ತಾರೆ. ಆ ಮೂಲಕ ಅದರ ಉಳಿವಿಗೆ ಶ್ರಮಿಸಿದ್ದಾರೆ. ಸಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದು ಮತ್ತು ಹಾಲಕ್ಕಿ ಕೋಗಿಲೆ/ ಜನಪದ ಕೋಗಿಲೆ ಎಂದೂ ಕರೆಯಲ್ಪಟ್ಟಿದ್ದಾರೆ.

ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದರು. ಹಾಗೂ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು.

ಇದನ್ನೂ ಓದಿ

Mother’s Day Gifts: ತಾಯಂದಿರ ದಿನ ಪ್ರಯುಕ್ತ ಇಂದು ನಿಮ್ಮ ಅಮ್ಮನಿಗೆ ಈ ಉಡುಗೊರೆ ನೀಡಿ

ಶೀತ, ಗಂಟಲು ಕೆರೆತದಿಂದ ಕಿರಿಕಿರಿ ಉಂಟಾಗಿದೆಯೇ ಇಲ್ಲಿವೆ ಬೆಸ್ಟ್​ ಮನೆಮದ್ದುಗಳು

Published On - 10:50 am, Sun, 8 May 22