Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಲೋಕ ಅಖಾಡದಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು; ಕಾಗೇರಿ ಆರೋಪಕ್ಕೆ ‘ಕೈ’ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು

ಲೋಕಸಭಾ ಕಣ ರಂಗೇರಿದ್ದು, ನಿನ್ನೆ(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಇನ್ನುಳಿದ 14 ಕಡೆಗಳಲ್ಲಿ ಮಾ.7 ರಂದು ನಡೆಯಲಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇದೀಗ ಉತ್ತರ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು ಮಾಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಅಂಜಲಿ ನಿಂಬಾಳ್ಕರ್​​ ತಿರುಗೇಟು ಕೊಟ್ಟಿದ್ದಾರೆ.

ಉತ್ತರ ಕನ್ನಡ ಲೋಕ ಅಖಾಡದಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು; ಕಾಗೇರಿ ಆರೋಪಕ್ಕೆ ‘ಕೈ' ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು
ಅಂಜಲಿ ನಿಂಬಾಳ್ಕರ್​, ವಿಶೇಶ್ವರ ಹೆಗಡೆ ಕಾಗೇರಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 27, 2024 | 4:41 PM

ಉತ್ತರ ಕನ್ನಡ, ಏ.27: ಪರೇಶ್ ಮೇಸ್ತಾ ಪ್ರಕರಣದಲ್ಲಿ ಅಂದಿನ ಐಜಿ ಹೆಮಂತ್​ ನಿಂಬಾಳ್ಕರ್​​ ಅವರು ಕಾಂಗ್ರೆಸ್​ ನಾಯಕರ ಸೂಚನೆಯ ಮೇರೆಗೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ ಎಂಬ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಆರೋಪಕ್ಕೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್(Anjali Nimbalkar)​ ತಿರುಗೇಟು ಕೊಟ್ಟಿದ್ದಾರೆ. ‘ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು?, ಹೋರಾಟದ ನೇತೃತ್ವ ವಹಿಸಿದ್ದ ನಿಮ್ಮ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ಪ್ರಕರಣದ ಕುರಿತು ಕೇಸ್ ದಾಖಲಾಗದಂತೆ ಯಾರೊಂದಿಗೆ ನೀವು ಹೊಂದಾಣಿಕೆ ಮಾಡಿಕೊಂಡಿದ್ರಿ?, ನಾನೊಬ್ಬಳು ಹೆಣ್ಣೆಂದು ನನ್ನ ಮತ್ತು ನನ್ನ ಕುಟುಂಬವನ್ನ ಗುರಿಯಾಗಿಸಿ ಟೀಕಿಸುತ್ತಿದ್ದಾರೆ. ಮೇಸ್ತಾ ಪ್ರಕರಣದಲ್ಲಿ ನನ್ನ ಗಂಡನ ಮೇಲೆ ಈಗ ಕಾಗೇರಿಯವರು ಆರೋಪ ಹೊರಿಸಿದ್ದಾರೆ. ಕಾಗೇರಿಯವರು ಅಂದು ಈ ಭಾಗದ ಶಾಸಕರಾಗಿದ್ದರು. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದೆವು ಎನ್ನುತ್ತಾರೆ. ಹಾಗಿದ್ದರೆ, ಆ ಪ್ರಕರಣದಲ್ಲಿ ಹಿಂದುಳಿದ ವರ್ಗದ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ಆಗಿದೆ, ಹೋರಾಟ ನಡೆಸಿದ ನಿಮ್ಮಂಥ ನಾಯಕರ ಮೇಲೆ ಯಾಕೆ ಕೇಸ್ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಉತ್ತರ ಕನ್ನಡ: ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಮುನ್ನೆಲೆಗೆ ಬಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೂಗು

ಆರು ಬಾರಿ ಶಾಸಕ, ಮಂತ್ರಿ, ಸ್ಪೀಕರ್ ಆದವರಿಗೆ ಇಂಥ ಹೇಳಿಕೆಗಳು ಶೋಭೆ ತರಲ್ಲ

‘ನನ್ನ ಗಂಡ ಹೊಂದಾಣಿಕೆ ಮಾಡಿಕೊಂಡಿದ್ದರೆನ್ನುವ ಕಾಗೇರಿಯವರೇ, ನಿಮ್ಮ ಮೇಲೆ ಕೇಸಾಗದಂತೆ ಪೊಲೀಸರ ಜೊತೆ ಯಾವ ಹೊಂದಾಣಿಕೆ ಇತ್ತು. ನಮ್ಮನ್ನ ಬಿಡಿ, ನಮ್ಮ ಹಿಂದು ಹುಡುಗರನ್ನ ಎಳೆದೊಯ್ಯಿರಿ ಎಂಬ ಮನಸ್ಥಿತಿ ನಿಮ್ಮದು. ಸಿಬಿಐನಿಂದ ಈ ಪ್ರಕರಣದ ತನಿಖೆಯಲ್ಲಿ ಇದು ಸಹಜ ಸಾವೆಂದು ವರದಿ ಬಂತು. ವರದಿ ಬಂದ ಬಳಿಕ ಯಾರಾದರೂ ಆ ತಾಯಿಯ ಬಗ್ಗೆ ಕೇಳಲು ಹೋದರಾ? ಆದರೆ, ಗ್ಯಾರಂಟಿ ನೀಡಿ ಆ ಬಡ ಕುಟುಂಬಕ್ಕೆ ಜೀವನ ನಡೆಸುವಂತೆ ಮಾಡಿದವರು ನಾವು. ಅವರು ಬೆಂಕಿ ಹಚ್ಚಲಿ, ಅದಕ್ಕೆ ನಾವು ನೀರು ಹಾಕುವ ಕೆಲಸ ಮಾಡುತ್ತಿರುತ್ತೇವೆ ಎಂದು ತಿರುಗೇಟು ನೀಡಿದರು. ಆರು ಬಾರಿ ಶಾಸಕರಾದವರಿಗೆ, ಮಂತ್ರಿ, ಸ್ಪೀಕರ್ ಆದವರಿಗೆ ಇಂಥ ಹೇಳಿಕೆಗಳು ಶೋಭೆ ತರಲ್ಲ. ಒಬ್ಬ ಯುವಕನ ಸಾವನ್ನ ರಾಜಕೀಯಕ್ಕೆ ಬಳಸುತ್ತಿರುವುದು ಖಂಡನೀಯ. ಬಿಜೆಪಿಗರ ಇಂಥ ಭಾವನಾತ್ಮಕ ವಿಚಾರಗಳಿಗೆ ಯಾರೂ ಕಿವಿಗೊಡಬಾರದು ಎಂದು ಕಿವಿಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು