AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದರು ವಿಸ್ತರಣೆಗೆ ಮಿನುಗಾರರಿಂದ ವಿರೋಧ; ಸ್ಥಳೀಯವಾಗಿ ಮತ್ತೊಮ್ಮೆ ಪರಿಶೀಲನೆಗೆ ಮುಂದಾದ ಪರಿಸರ ಇಲಾಖೆ

ಬಂದರು ವಿಸ್ತರಣೆ ಕಾಮಗಾರಿ ಪರಿಸರಕ್ಕೆ ಮಾರಕವಾಗಿ ನಡೆಯುತ್ತಿದೆಯೇ ಎನ್ನುವುದನ್ನು ಸ್ಥಳೀಯವಾಗಿ ಪರಿಶೀಲನೆ ನಡೆಸಲು ರಾಜ್ಯ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾರವಾರಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಿದರು.

ಬಂದರು ವಿಸ್ತರಣೆಗೆ ಮಿನುಗಾರರಿಂದ ವಿರೋಧ; ಸ್ಥಳೀಯವಾಗಿ ಮತ್ತೊಮ್ಮೆ ಪರಿಶೀಲನೆಗೆ ಮುಂದಾದ ಪರಿಸರ ಇಲಾಖೆ
ಮೀನುಗಾರರಿಂದ ವಿರೋಧ
TV9 Web
| Updated By: preethi shettigar|

Updated on: Oct 06, 2021 | 8:30 AM

Share

ಉತ್ತರ ಕನ್ನಡ: ವಾಣಿಜ್ಯ ಬಂದರು ವಿಸ್ತರಣೆಯ ಸಾಗರಮಾಲಾ ಯೋಜನೆ ಕಾರವಾರದ ಮೀನುಗಾರರಿಂದ ಸಾಕಷ್ಟು ವಿರೋಧಕ್ಕೆ ಗುರಿಯಾಗಿತ್ತು. ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡುವಂತೆ ಮೀನುಗಾರರು ರಸ್ತೆಗಿಳಿದು ತೀವ್ರ ಹೋರಾಟ ನಡೆಸಿದ್ದರು. ಪರಿಣಾಮ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಪರಿಸರ ಇಲಾಖೆ ಸ್ಥಳೀಯವಾಗಿ ಮತ್ತೊಮ್ಮೆ ಪರಿಶೀಲನೆ ನಡೆಸಲು ಮುಂದಾಗಿದೆ. ಈ ವೇಳೆ ಮೀನುಗಾರರು ಯೋಜನೆಯನ್ನು ವಿರೋಧಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

ರಾಜ್ಯದ ಸರ್ವಋತು ಬಂದರು ಅಂತಲೇ ಪ್ರಸಿದ್ಧಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರನ್ನು ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿತ್ತು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿಯಲ್ಲಿ ಬಂದರು ವಿಸ್ತರಣೆಗೆ ಯೋಜನೆ ಸಿದ್ಧವಾಗಿದ್ದು, ಇದರ ಅಂಗವಾಗಿ ನಗರದ ಟ್ಯಾಗೋರ್ ಕಡಲತೀರದಲ್ಲಿ ಅಲೆತಡೆಗೋಡೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಕಂಪೆನಿ ಮುಂದಾಗಿತ್ತು. ಆದರೆ ಈ ವೇಳೆ ಸ್ಥಳೀಯ ಮೀನುಗಾರರು ಕಡಲತೀರದ ಪರಿಸರಕ್ಕೆ ಹಾನಿಯಾಗುವಂತೆ ಯೋಜನೆ ನಿರ್ಮಿಸಿದ್ದನ್ನು ವಿರೋಧಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. ಬಂದರು ಅಭಿವೃದ್ಧಿ ಕಾಮಗಾರಿಗೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರಕರಣ ಕೋರ್ಟ್ ಮೆಟ್ಟಿಲೇರಿ ಕಾಮಗಾರಿ ಸ್ಥಗಿತಗೊಂಡಿದೆ.

ಈ ನಿಟ್ಟಿನಲ್ಲಿ ಬಂದರು ವಿಸ್ತರಣೆ ಕಾಮಗಾರಿ ಪರಿಸರಕ್ಕೆ ಮಾರಕವಾಗಿ ನಡೆಯುತ್ತಿದೆಯೇ ಎನ್ನುವುದನ್ನು ಸ್ಥಳೀಯವಾಗಿ ಪರಿಶೀಲನೆ ನಡೆಸಲು ರಾಜ್ಯ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾರವಾರಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಿದರು.

ಬಂದರು ನಿರ್ಮಾಣದಿಂದಾಗಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಪರಿಸರ ಮಾಲಿನ್ಯ ಹಾಗೂ ಮೀನುಗಾರಿಕೆಗೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಮೀನುಗಾರರು ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನು ಬಂದರು ವಿಸ್ತರಣೆ ಪೂರ್ವದಲ್ಲಿ ಪರಿಸರಕ್ಕೆ ಹಾನಿಯಾಗಬಹುದಾದ ಅಂಶಗಳ ಕುರಿತು ಸ್ಥಳೀಯವಾಗಿ ಮಾಹಿತಿಗಳನ್ನು ಕಲೆಹಾಕಿದ್ದು, ಮೀನುಗಾರರ ಸಮಸ್ಯೆಗಳ ಕುರಿತು ಗಮನಹರಿಸುವುದಾಗಿ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ ತಿಳಿಸಿದರು.

ಇನ್ನು ಕಾರವಾರದಲ್ಲಿ ಈ ಹಿಂದಿನಿಂದಲೂ ಕದಂಬ ನೌಕಾನೆಲೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಕಡಲತೀರಗಳು ಬಳಕೆಯಾಗಿವೆ. ಇದೀಗ ಬಂದರು ವಿಸ್ತರಣೆಗೆ ನಗರದಲ್ಲಿರುವ ಏಕೈಕ ಕಡಲತೀರದ ಬಹುಪಾಲು ಬಲಿಯಾಗಲಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಗಳಿಂದಾಗಿ ಕಡಲ ಪರಿಸರಕ್ಕೆ ಸಾಕಷ್ಟು ಹಾನಿ ಸಂಭವಿಸಲಿದೆ. ಇದೀಗ ನಗರ ಪ್ರದೇಶದ ಮೀನುಗಾರರಿಗೆ ಮೀನುಗಾರಿಕೆ ನಡೆಸಲು ಒಂದೇ ಕಡಲತೀರವಿದ್ದು ಬಂದರು ವಿಸ್ತರಣೆ ಬಳಿಕ ಮೀನುಗಾರಿಕೆ ನಡೆಸುವುದು ಅಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬಂದರು ವಿಸ್ತರಣೆ ಯೋಜನೆ ಅವೈಜ್ಞಾನಿಕವಾಗಿ ರೂಪಿಸಲಾಗಿದ್ದು, ಯಾವುದೇ ಕಾರಣಕ್ಕೂ ಜಾರಿಗೊಳಿಸದಂತೆ ವಿರೋಧಿಸಿ ಮೀನುಗಾರರು ಪ್ರತಿಭಟಿಸಿದ್ದರು. ಇದೀಗ ಪರಿಸರ ಇಲಾಖೆ ಎದುರು ಸಹ ಮೀನುಗಾರರು ಇದೇ ಸಮಸ್ಯೆ ಕುರಿತು ಪ್ರಸ್ತಾಪಿಸಿದ್ದು, ಕಡಲತೀರಕ್ಕೆ ಉಂಟಾಗುವ ಹಾನಿಯನ್ನು ತಪ್ಪಿಸುವಂತೆ ಜಿಲ್ಲಾ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷ ರಾಜು ತಾಂಡೇಲ ಮನವಿ ಮಾಡಿದ್ದಾರೆ.

ಒಟ್ಟಾರೇ ಬಂದರು ವಿಸ್ತರಣೆ ಹೆಸರಿನಲ್ಲಿ ಪರಿಸರಕ್ಕೆ ಉಂಟಾಗುವ ಹಾನಿಯನ್ನು ತಪ್ಪಿಸುವುದರೊಂದಿಗೆ ಮೀನುಗಾರರಿಗೆ ಮೀನುಗಾರಿಕೆ ನಡೆಸಲು ಅವಕಾಶ ಮಾಡಿಕೊಡಬೇಕು ಎನ್ನುವುದು ಮೀನುಗಾರರ ಬೇಡಿಕೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಮಾಹಿತಿ ಪಡೆದುಕೊಂಡ ಪರಿಸರ ಇಲಾಖೆ ಯಾವ ವರದಿ ನೀಡಲಿದೆ ಎನ್ನುವುದನ್ನು ಕಾದುನೋಡಬೇಕು.

ವರದಿ: ಮಂಜುನಾಥ್ ಪಟಗಾರ್

ಇದನ್ನೂ ಓದಿ

Adani Group: ಕೊಲಂಬೋ ಬಂದರು ಪಶ್ಚಿಮ ಕಂಟೇನರ್​ ಟರ್ಮಿನಲ್ ಅಭಿವೃದ್ಧಿ, ನಿರ್ವಹಣೆಗೆ ಅದಾನಿ ಸಮೂಹದ ಒಪ್ಪಂದ

ಮುಂದುವರಿದ ಮಿಷನ್​ ಸಾಗರ್​; ಜಕಾರ್ತ ಬಂದರು ತಲುಪಿದ ಐಎನ್​ಎಸ್​ ಐರಾವತ್​​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ