ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ; ಕಾಂತಾರ ಸಿನಿಮಾ ನಂತರ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು

ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಕಾಡುಹಂದಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ಚಂಡಿಯಾ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಈ ಕಾಡು ಹಂದಿಗೆ, ಕಾಂತಾರ ಸಿನಿಮಾದ ನಂತರ ಪಂಜುರ್ಲಿ ದೈವದ ಸ್ಥಾನ ಕೊಟ್ಟು ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು.

ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ; ಕಾಂತಾರ ಸಿನಿಮಾ ನಂತರ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು
ಕಾರವಾರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 9:45 AM

ಉತ್ತರ ಕನ್ನಡ, ಆ.6: ಜಿಲ್ಲೆಯ ಕಾರವಾರ(Karwar)ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಕಾಡುಹಂದಿ(Pig)ಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ಚಂಡಿಯಾ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಈ ಕಾಡು ಹಂದಿಗೆ, ಕಾಂತಾರ ಸಿನಿಮಾದ ನಂತರ ಪಂಜುರ್ಲಿ ದೈವದ ಸ್ಥಾನ ಕೊಟ್ಟು ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು. ಅದರಂತೆ ಊರಿನಲ್ಲಿ ಜನ ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿಯನ್ನ ಗಳಿಸಿದ್ದ ಕಾಡು ಹಂದಿಯನ್ನ, ನಿನ್ನೆ(ಆ.5) ರಾತ್ರಿ ಯಾರೋ ದುಷ್ಕರ್ಮಿಗಳು ಬಾಂಬ್​ ಇಟ್ಟು ಹತ್ಯೆ ಮಾಡಿದ್ದಾರೆ. ಈ ಕುರಿತು ಕಾರವಾರ ಅರಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವು ಕಡಿತದಿಂದ ಹೈಸ್ಕೂಲ್​ನ ಡಿ ದರ್ಜೆ ಸಿಬ್ಬಂದಿ ಸಾವು

ಉತ್ತರ ಕನ್ನಡ: ಹಾವು ಕಡಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೈಸ್ಕೂಲ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ ಘಟನೆ ಕಾರವಾರದಲ್ಲಿ ನಡೆದಿದೆ. ತಾಲ್ಲೂಕಿನ ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಡಿ ದರ್ಜೆ ನೌಕರಳಾಗಿದ್ದ ಆನಂದಿ ಕಾಣಕೋಣಕರ(46) ಮೃತ ದುರ್ದೈವಿಯಾಗಿದ್ದಾರೆ. ಅಗಸ್ಟ್ 1 ರಂದು ಸಂಜೆ ವೇಳೆಗೆ ಶಾಲೆಯ ಜನರೇಟರ್ ಕೊಠಡಿಯ ಬಳಿ ತೆರಳಿದ್ದ ವೇಳೆ ಹಾವು ಕಚ್ಚಿತ್ತು. ಬಳಿಕ ಅವರನ್ನು ಕಾರವಾರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿದ್ದ ಮಹಿಳೆ ನಿನ್ನೆ(ಆ.6)ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌‌.

ಇದನ್ನೂ ಓದಿ:ಪ್ರತ್ಯೇಕ ಘಟನೆ: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ, ಕಾರವಾರದಲ್ಲಿ ವಿದ್ಯುತ್​ ಪ್ರವಹಿಸಿ ಎಂಟು ತಿಂಗಳ​ ಮಗು ಸಾವು

ತೆಂಗಿನ ಮರದಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

ಆನೇಕಲ್: ತೆಂಗಿನ ಮರ ಏರಿದ್ದ ಯುವಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ನ ಪಾಳ್ಯದಲ್ಲಿ ನಡೆದಿದೆ. ಮುನಿರಾಜು (25) ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇತ, ನಾಲ್ವರು ಸ್ನೇಹಿತರ ಜೊತೆಗೂಡಿ  ಜಮೀನಿನೊಂದರಲ್ಲಿನ ತೆಂಗಿನ ಕಾಯಿ ತೆಗೆಯಲು ಹೋಗಿದ್ದ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕುತ್ತಿಗೆ, ಬೆನ್ನು, ಕಾಲು ಮುರಿದು ಹೋಗಿ ಸಾವನ್ನಪ್ಪಿದ್ದಾನೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ