ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ

|

Updated on: Jan 22, 2025 | 3:22 PM

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ಇಂದು ಮುಂಜಾಣೆ ಭೀಕರ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಲಾರಿ ಪಲ್ಟಿಯಾಗಿ 10 ಜನ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.

ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ
Prime Minister Modi
Follow us on

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರದ ಬಳಿ ಇಂದು ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು

ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಯಲ್ಲಾಪುರದ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡದ ಯಲ್ಲಾಪುರದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಈ ಘಟನೆಯಿಂದ ಬಹಳ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು ಹಾಗೂ ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಅಪಘಾತದಲ್ಲಿ ಮೃತರ ಕುಟುಂಬದವರಿಗೆ 3 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ: ಸಿಎಂ ಘೋಷಣೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಯಲ್ಲಾಪುರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಹಾವೇರಿಯಿಂದ ಕುಮಟಾದ ಕಡೆ ವ್ಯಾಪಾರಕ್ಕೆ ಹೋಗುತ್ತಿದ್ದ ತರಕಾರಿ, ಹಣ್ಣುಗಳಿದ್ದ ಲಾರಿ ಇಂದು ಮುಂಜಾನೆ ಯಲ್ಲಾಫುರದ ಗುಳ್ಳಾಪುರ ಬಳಿ ಪಲ್ಟಿಯಾಗಿತ್ತು. ಇದರಿಂದ ಲಾರಿಯಲ್ಲಿದ್ದವರು ಕೆಳಗೆ ಬಿದ್ದು, ಲಾರಿಯಡಿ ಸಿಲುಕಿ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಅವರೆಲ್ಲರೂ ತಮ್ಮ ತರಕಾರಿಗಳ ವ್ಯಾಪಾರಕ್ಕೆಂದು ಲಾರಿಯಲ್ಲಿ ಹೋಗುತ್ತಿದ್ದರು. ಮೃತರಾದ 10 ಜನರೂ ಹಾವೇರಿಯ ಸವಣೂರಿನವರು ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ