AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ರಕ್ತ ತರ್ಪಣ ಕೊಟ್ಟ ವ್ಯಕ್ತಿ!

ನರೇಂದ್ರ ಮೋದಿ ಪ್ರಧಾನಿಯಾಗಲೆಂದು ಈ ಹಿಂದೊಮ್ಮೆ ಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದ ಅರುಣ್ ವರ್ಣೇಕರ್ ಇದೀಗ ಮತ್ತೆ ಬೆರಳು ಕತ್ತರಿಸಿ ಕಾಳಿಗೆ ರಕ್ತ ತರ್ಪಣ ಕೊಟ್ಟಿದ್ದಾರೆ. ಮೋದಿಗಾಗಿ ಗುಡಿಯನ್ನೇ ಮಾಡಿಕೊಂಡಿರುವ ವರ್ಣೇಕರ್, ಕೈ ಬೆರಳು ಕತ್ತರಿಸಿದಾಗ ಸುರಿದ ರಕ್ತದಲ್ಲಿ ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆಯಲ್ಲಿ ಬರೆದಿದ್ದಾರೆ.

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ರಕ್ತ ತರ್ಪಣ ಕೊಟ್ಟ ವ್ಯಕ್ತಿ!
ಅರುಣ್ ವರ್ಣೇಕರ್ ಬೆರಳು ಕತ್ತರಿಸಲು ಸಿದ್ಧವಾಗಿರುವ ಸಂದರ್ಭದ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma|

Updated on:Apr 06, 2024 | 5:14 PM

Share

ಕಾರವಾರ, ಏಪ್ರಿಲ್ 6: ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು ಅರುಣ್ ವರ್ಣೇಕರ್ (Arun S varnekar) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆ ಕೂಡ ಮಾಡುತ್ತಿದ್ದಾರೆ.

ಬೆರಳು ಕತ್ತರಿಸಿಕೊಂಡು ಅರುಣ್​, ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆ ಮೇಲೆ ರಕ್ತದಲ್ಲಿ ರಕ್ತದಲ್ಲಿ ಬರೆದಿದ್ದಾರೆ.

ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, ‘‘ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ’’ ಎಂದು ಬರೆದಿದ್ದಾರೆ. ‘‘ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್ ’ ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್​​ನಲ್ಲಿ ಅರುಣ್ ಬರೆದಿದ್ದಾರೆ.

ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಇಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯಬಾರಿ ಆದ್ದರಿಂದ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಕಾಳಿಗೆ ಅರ್ಪಿಸಿದ್ದಾರೆ.

ಮೋದಿ ಭೇಟಿಯ ಬಯಕೆ ವ್ಯಕ್ತಪಡಿಸಿದ್ದ ಅರುಣ್ ವರ್ಣೇಕರ್

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೂಡ ಮೋದಿ ಗೆಲುವಿಗಾಗಿ ಪ್ರಾರ್ಥಿಸಿ ಅರುಣ್ ವರ್ಣೇಕರ್‌ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕತ್ತಿಯಿಂದ ಬೆರಳು ಕತ್ತರಿಸಿಕೊಂಡಿದ್ದರು. ಬಳಿಕ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. ಜತೆಗೆ ಸಾಯಿ ಬಾಬಾ, ಪ್ರಧಾನಿ ಮೋದಿಯ ಫೋಟೊಗೂ ರಕ್ತದ ತಿಲಕವಿಟ್ಟಿದ್ದರು.

ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಅಂಕೋಲಾಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲು ಪ್ರಯತ್ನಿಸುವುದಾಗಿ ತಿಳಿಸಿದ್ದರು. ಆದರೆ, ಅವರ ಬಯಕೆ ಈಡೇರಿರಲಿಲ್ಲ.

ಇದನ್ನೂ ಓದಿ: ಮೋದಿ ಗೆಲುವಿಗಾಗಿ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದ ಅರುಣ್​ ಈಗ ಏನಂತಾರೆ?

ಇಷ್ಟೇ ಅಲ್ಲದೆ, ಅರುಣ್ ವರ್ಣೇಕರ್ ಎದೆಯ ಮೇಲೆ ಮೋದಿ ಟ್ಯಾಟೂ ಹಾಕಿಸಿಕೊಂಡು ಪ್ರಧಾನಿಯನ್ನು ದೇವರಂತೆ ಆರಾಧಿಸುತ್ತಿದ್ದಾರೆ. ಮೋದಿ ಬಾಬಾ ಎಂದು ಟ್ಯಾಟೋ ಹಾಕಿಸಿ ಅಭಿಮಾನ ಮೆರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Sat, 6 April 24

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ