Prabhakar Rane: ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ

Teachers' Day: ಉತ್ತರ ಕನ್ನಡ ಜಿಲ್ಲೆಯ ಕಾರವಾರ- ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ವಿದ್ಯಾ ದಾನ ಮಾಡಿದ್ದ ಮಾಜಿ ಸಚಿವ ಪ್ರಭಾಕರ್ ರಾಣೆ (81) ಅವರು ಶಿಕ್ಷಕರ ದಿನವಾದ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

Prabhakar Rane: ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ
ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಶಿಕ್ಷಣ ಸಚಿವ ಪ್ರಭಾಕರ ರಾಣೆ ನಿಧನ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 05, 2022 | 2:50 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ- ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ವಿದ್ಯಾ ದಾನ ಮಾಡಿದ್ದ ಮಾಜಿ ಸಚಿವ ಪ್ರಭಾಕರ್ ರಾಣೆ (81) ಅವರು (Prabhakar Rane) ಶಿಕ್ಷಕರ ದಿನವಾದ (Teachers’ Day) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ತಿಂಗಳ ಹಿಂದೆ ಅವರು ಜ್ವರದಿಂದ ಬಳಲಿದ್ದು, ಕಾರವಾರದ (Karwar) ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕೊಂಚ ಚೇತರಿಸಿಕೊಂಡು ಮನೆಯಲ್ಲಿ ಹಾಸಿಗೆಯಲ್ಲೇ ಇದ್ದರು. ಆದರೆ ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕಾರವಾರ- ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಣೆ, ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿದ್ದರು. ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರ್ಪಡೆಗೊಂಡು ಸೇವೆ ಸಲ್ಲಿಸಿದ್ದ ಅವರು, ಬಳಿಕ ಅದೇ ಸಂಸ್ಥೆಗೆ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಆರಂಭಿಸಿ, ವಿವಿಧೆಡೆ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದರು.

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ