ನಾಮಧಾರಿಗಳಿಗೆ ಟಿಕೆಟ್ ನೀಡುವಂತೆ ಒತ್ತಾಯ: ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿಯಾದ ಪ್ರಣವಾನಂದ ಸ್ವಾಮೀಜಿ

ದೇಶದಾದ್ಯಂತ ರಾಮನವಮಿ ಸಂಭ್ರಮಕ್ಕೆ ಭಕ್ತರು ಸಜ್ಜಾಗುತ್ತಿದ್ದಾರೆ. ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ದಿನದಂದು ರಾಮನು ಭೂಮಿಯ ಮೇಲೆ ಜನಿಸಿದರು ಎನ್ನಲಾಗುತ್ತೆ. ಹೀಗಾಗಿ ರಾಮ ನವಮಿಯನ್ನು ರಾಮನ ಜನ್ಮದಿನವಾಗಿ ಆಚರಿಸಲಾಗುತ್ತೆ. ಮಾರ್ಚ್ 30ರ ರಾಮನವಮಿಯಂದು ಈ ದೇವಸ್ಥಾನಗಳಿಗೆ ಭೇಟಿ ನೀಡಿ ಮರ್ಯಾದಾ ಪುರುಷ ರಾಮನ ಆಶೀರ್ವಾದ ಪಡೆಯಿರಿ.

ನಾಮಧಾರಿಗಳಿಗೆ ಟಿಕೆಟ್ ನೀಡುವಂತೆ ಒತ್ತಾಯ: ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿಯಾದ ಪ್ರಣವಾನಂದ ಸ್ವಾಮೀಜಿ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿಯಾದ ಪ್ರಣವಾನಂದ ಸ್ವಾಮೀಜಿ
Follow us
ಆಯೇಷಾ ಬಾನು
|

Updated on:Mar 30, 2023 | 2:55 PM

ಕಾರವಾರ: ರಾಜ್ಯ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು(Karnataka Assembly Elections 2023) ಪ್ರಣವಾನಂದ ಸ್ವಾಮೀಜಿ(Pranavananda Swamiji) ನಿನ್ನೆ(ಮಾರ್ಚ್ 29) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಹಾಗೂ ಸಿದ್ದರಾಮಯ್ಯರನ್ನು(Siddaramaiah) ಭೇಟಿ ಮಾಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರದಲ್ಲಿ ನಾಮಧಾರಿ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಮಧಾರಿ(ಈಡಿಗ) ಮತದಾರರು ಇದ್ದಾರೆ. ಹೀಗಾಗಿ ನಾಮಧಾರಿ ಸಮುದಾಯದ ಪ್ರಣವಾನಂದ ಸ್ವಾಮಿ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದ ಪ್ರಣವಾನಂದ ಸ್ವಾಮಿ, ಆರ್​ವಿ ದೇಶಪಾಂಡೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆರ್ ವಿ ದೇಶಪಾಂಡೆ ರಾಜಕೀಯವಾಗಿ ನಾಮಧಾರಿ(ಈಡಿಗ) ಸಮುದಾಯವನ್ನ ಮುಗಿಸುವ ಕುತಂತ್ರ ಮಾಡುತ್ತಿದ್ದಾರೆ. ದೇಶಪಾಂಡೆ ಹಿಂದುಳಿದ ನಾಮಧಾರಿಗಳನ್ನ ತುಳಿದು ಮೇಲ್ವರ್ಗದವರಿಗೆ ಮಣೆ ಹಾಕುತ್ತಿದ್ದಾರೆ‌. ಟಿಕೆಟ್ ನೀಡದೆ ಹೋದಲ್ಲಿ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಬೇಕಾಗುತ್ತದೆ‌ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Polls: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಗಡಿಪಾರು

ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದೆ ಹೋದರೆ ರಾಜ್ಯದ ಬೇರೆ ಕಡೆಯಲ್ಲಿಯೂ ಇದರ ಪರಿಣಾಮ ಕಾಂಗ್ರೆಸ್ ಎದುರಿಸಬೇಕಿದೆ‌. ಮೊದಲಿನಿಂದಲ್ಲೂ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ನಾಮಧಾರಿಗಳಿಗೆ ಟಿಕೆಟ್ ನೀಡುತ್ತಾ ಬಂದಿದ್ದಾರೆ‌. ಈ ವಿಚಾರವಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ಸಿದ್ದರಾಮಯ್ಯ ಅವರನ್ನ ಪ್ರಣವಾನಂದ ಸ್ವಾಮಿ ಭೇಟಿ ಮಾಡಿದ್ದಾರೆ. ಅಲ್ಲದೆ ಕೆಲ ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸಹ ಭೇಟಿ ಮಾಡಿ ಮಾತನಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 30 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ