ಕಾರವಾರ: ರಾಜ್ಯ ವಿಧಾನ ಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು(Karnataka Assembly Elections 2023) ಪ್ರಣವಾನಂದ ಸ್ವಾಮೀಜಿ(Pranavananda Swamiji) ನಿನ್ನೆ(ಮಾರ್ಚ್ 29) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಹಾಗೂ ಸಿದ್ದರಾಮಯ್ಯರನ್ನು(Siddaramaiah) ಭೇಟಿ ಮಾಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರದಲ್ಲಿ ನಾಮಧಾರಿ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಮಧಾರಿ(ಈಡಿಗ) ಮತದಾರರು ಇದ್ದಾರೆ. ಹೀಗಾಗಿ ನಾಮಧಾರಿ ಸಮುದಾಯದ ಪ್ರಣವಾನಂದ ಸ್ವಾಮಿ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದ ಪ್ರಣವಾನಂದ ಸ್ವಾಮಿ, ಆರ್ವಿ ದೇಶಪಾಂಡೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆರ್ ವಿ ದೇಶಪಾಂಡೆ ರಾಜಕೀಯವಾಗಿ ನಾಮಧಾರಿ(ಈಡಿಗ) ಸಮುದಾಯವನ್ನ ಮುಗಿಸುವ ಕುತಂತ್ರ ಮಾಡುತ್ತಿದ್ದಾರೆ. ದೇಶಪಾಂಡೆ ಹಿಂದುಳಿದ ನಾಮಧಾರಿಗಳನ್ನ ತುಳಿದು ಮೇಲ್ವರ್ಗದವರಿಗೆ ಮಣೆ ಹಾಕುತ್ತಿದ್ದಾರೆ. ಟಿಕೆಟ್ ನೀಡದೆ ಹೋದಲ್ಲಿ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Karnataka Polls: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಗಡಿಪಾರು
ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದೆ ಹೋದರೆ ರಾಜ್ಯದ ಬೇರೆ ಕಡೆಯಲ್ಲಿಯೂ ಇದರ ಪರಿಣಾಮ ಕಾಂಗ್ರೆಸ್ ಎದುರಿಸಬೇಕಿದೆ. ಮೊದಲಿನಿಂದಲ್ಲೂ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ನಾಮಧಾರಿಗಳಿಗೆ ಟಿಕೆಟ್ ನೀಡುತ್ತಾ ಬಂದಿದ್ದಾರೆ. ಈ ವಿಚಾರವಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ಸಿದ್ದರಾಮಯ್ಯ ಅವರನ್ನ ಪ್ರಣವಾನಂದ ಸ್ವಾಮಿ ಭೇಟಿ ಮಾಡಿದ್ದಾರೆ. ಅಲ್ಲದೆ ಕೆಲ ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸಹ ಭೇಟಿ ಮಾಡಿ ಮಾತನಾಡಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:55 pm, Thu, 30 March 23