ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ

ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಎಂದು ಸಿದ್ಧಾಪುರದಲ್ಲಿ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್​ರಿಂದ ಈಡಿಗ, ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ: ಪ್ರಣವಾನಂದ ಸ್ವಾಮೀಜಿ ಆರೋಪ
ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 28, 2022 | 10:26 PM

ಉತ್ತರ ಕನ್ನಡ: ಈಡಿಗ ಸಮುದಾಯವನ್ನು ಬಲಿ ಕೊಟ್ಟವರು ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas poojary) ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಎಂದು ಸಿದ್ಧಾಪುರದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ (Pranavananda Swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶಿರಸಿ ತಾಲೂಕಿನ ಸಿದ್ಧಾಪೂರದಲ್ಲಿ ಮಾತನಾಡಿದ ಅವರು ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಇಬರು ಸಚಿವರು ವಿಫಲರಾಗಿದ್ದಾರೆ. ಬಿಜೆಪಿ ಸರಕಾರದ ಯಾವ ಕೊಡುಗೆ ಕೂಡ ಈಡಿಗ ಮತ್ತು ಬಿಲ್ಲವ ಸಮುದಾಯದ ನೀಡಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಲವೆಡೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಿದ್ದೇವೆ ಅಂತಾರೆ. ಆದರೆ, ಈ ವಸತಿ ಶಾಲೆಗಳಲ್ಲಿ ಈಡಿಗ ಸಮುದಾಯ ಮಕ್ಕಳಿಗೆ ರಿಸರ್ವೇಶನ್ ಇಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಕೋಲ: ಉಪ್ಪು ನೀರು ನುಗ್ಗಿ ಬಂಜರು ಭೂಮಿಯಂತಾದ ಫಲವತ್ತಾದ ಹಾರವಾಡ ಗ್ರಾಮದ ಜಮೀನು

ರಾಜ್ಯದಲ್ಲಿರುವ ಈಡಿಗ, ಬಿಲ್ಲವ ಸಮುದಾಯದ ಶಾಸಕರಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಈ ಸಮುದಾಯದ ಯುವಕರು, ಮಹಿಳೆಯರು ಬೀದಿಗೆ ಬರುತ್ತಿದ್ದಾರೆ. ನಮ್ಮ ಸಮುದಾಯದ ರಾಜಕಾರಣಿಗಳಿಂದಲೇ ನಮಗೆ ಅನ್ಯಾಯವಾಗಿದೆ. ನಾರಾಯಣ ಗುರು ನಿಗಮವನ್ನು ಘೋಷಣೆ ಮಾಡುವುದರಲ್ಲಿ ಸಮುದಾಯದ ಶಾಸಕರ ನಿಲುವೇನು? ಎಂದು ಪ್ರಶ್ನಿಸಿದ್ದಾರೆ.

ವರ ಸ್ವಾರ್ಥ ರಾಜಕಾರಣಕ್ಕಾಗಿ ಸಮುದಾಯವನ್ನು ಬಳಸುತ್ತಿದ್ದಾರೆ. ಗೌಡ ಸಮುದಾಯದ ರಾಜಕಾರಣಿಗಳು ಸರಕಾರಕ್ಕೆ ಸೌಲಭ್ಯಕ್ಕಾಗಿ ಒತ್ತಾಯಿಸಿದ್ದಾರೆ. ಈಡಿಗ, ಬಿಲ್ಲವ ಸಮುದಾಯದ ನಾಯಕರಿಗೆ ನಾಚಿಗೆಯಾಗಬೇಕು. 2023ರಲ್ಲಿ ನಡೆಯುವ ಚುನಾವಣೆ ವೇಳೆ ಸಮುದಾಯದ ಮತ‌‌ ನಿಮಗೆ ಬೇಡವೆಂದಲ್ಲಿ ಹೇಳಿಬಿಡಿ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್​ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್​ ಜಪ್ತಿ

ಜನೆವರಿ 6ರಂದು ಮಂಗಳೂರು-ಬೆಂಗಳೂರು ಪಾದಯಾತ್ರೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಡಿಗ, ಬಿಲ್ಲವ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಎಂದು ಒತ್ತಾಯಿಸಿದರು.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:18 pm, Mon, 28 November 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ