AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಅಮಾನವೀಯ ಘಟನೆ: ಮಾಂಸಕ್ಕಾಗಿ ಗರ್ಭಧರಿಸಿದ್ದ ಗೋವನ್ನು ಕೊಂದು ಭ್ರೂಣ ಬಿಸಾಡಿ ಹೋದ ರಾಕ್ಷಸರು!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವಿನ (cow) ತಲೆ ಕಡಿದು ದುರುಳರು ಮಾಂಸ ಸಾಗಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದ್ರೆ, ಈ ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗರ್ಭಧರಿಸಿದ್ದ ಗೋವಿನ ಮಾಂಸ ಕದ್ದು ಹೊಟ್ಟೆಯಲ್ಲಿದ್ದ ಕರುವಿನ ಬ್ರೂಣವನ್ನು ಎಸೆದು ವಿಕೃತಿ ಮೆರೆದಿದ್ದಾರೆ.

ಭಟ್ಕಳದಲ್ಲಿ ಅಮಾನವೀಯ ಘಟನೆ: ಮಾಂಸಕ್ಕಾಗಿ ಗರ್ಭಧರಿಸಿದ್ದ ಗೋವನ್ನು ಕೊಂದು ಭ್ರೂಣ ಬಿಸಾಡಿ ಹೋದ ರಾಕ್ಷಸರು!
Crime
ಸೂರಜ್​, ಮಹಾವೀರ್​ ಉತ್ತರೆ
| Updated By: ರಮೇಶ್ ಬಿ. ಜವಳಗೇರಾ|

Updated on: Apr 18, 2025 | 2:24 PM

Share

ಕಾರವಾರ, (ಏಪ್ರಿಲ್ 18):  ಕರ್ನಾಟಕದಲ್ಲಿ (Karnataka) ಮತ್ತೊಂದು  ಅಮಾನವೀಯ ಘಟನೆ ನಡೆದಿದೆ.  ಗರ್ಭಧರಿಸಿದ್ದ ಗೋವನ್ನು (Pregnant Cow )ಹತ್ಯೆಗೈದು ಮಾಂಸ ಸಾಗಾಟ ಮಾಡಿರುವ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ (Bhatkal) ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ. ಮಾಂಸಕ್ಕಾಗಿ ಗರ್ಭಧರಿಸಿದ್ದ ಗೋವನ್ನು ವಧೆ ಮಾಡಿ ಹೊಟ್ಟೆಯಲ್ಲಿದ್ದ ಕರುವಿನ ಬ್ರೂಣ ಹಾಗೂ ಅಂಗಾಂಗ ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಖದೀಮರ ವಿಕೃತಿ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹೊನ್ನಾವರದಲ್ಲಿ ಇಂತದ್ದೇ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಘಟನೆ ನಡೆದಿದೆ.

ಇದನ್ನೂ ಓದಿ: ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ: ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಹಸುವಿನ ತಲೆ ಕಡಿದು ಬಳಿಕ ಅದರ ದೇಹವನ್ನು ಕೊಂಡೊಯ್ದಿದ್ದರು. ಜನವರಿ 18) ಮನೆಯಿಂದ ಮೇಯಲು ಹೋಗಿದ್ದ ಹಸು ರಾತ್ರಿಯಾದರೂ ಸಹ ವಾಪಸ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಜನವರಿ 19 ಬೆಳಿಗ್ಗೆ ಮಾಲೀಕ ಕೃಷ್ಣ ಆಚಾರಿ ಅವರು ಹಸುವಿಗಾಗಿ ಹುಡಕಾಟ ನಡೆಸಿದ್ದಾರೆ. ಆ ವೇಳೆ ಹಸುವಿನ ರಕ್ತ, ಕಾಲು ಹಾಗೂ ರುಂಡ ಪತ್ತೆಯಾಗಿದೆ. ಇದನ್ನು ನೋಡಿ ಹಸುವಿನ ಮಾಲೀಕ ಕೃಷ್ಣ ಆಚಾರಿ ಬೆಚ್ಚಿಬಿದ್ದಿದ್ದರು.

ಇದನ್ನೂ ಓದಿ
Image
ಗೋ ಕಳ್ಳತನ ಮಾಡೋರನ್ನು ಸರ್ಕಲಲ್ಲಿ ನಿಲ್ಲಿಸಿ ಗುಂಡಿಕ್ಕಬೇಕು: ಮಂಕಾಳ ವೈದ್ಯ
Image
ಗರ್ಭ ಧರಿಸಿದ್ದ ಹಸು ಕಡಿದ ಕೇಸ್: ಗೋಹಂತಕರ ಸುಳಿವು ಕೊಟ್ಟವರಿಗೆ ಬಹುಮಾನ
Image
ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ: ಮಾರಕಾಸ್ತ್ರದಿಂದ ಬಾಲ ತುಂಡರಿಸಿ ಪರಾರಿ
Image
ಹಸುಗಳ ಕೆಚ್ಚಲು ಕೊಯ್ದ ಆರೋಪಿ ಮನಸ್ಥಿತಿ ಕಂಡು ಪೊಲೀಸರೇ ಶಾಕ್..!

ದುರುಳರು ಹಸುವಿ‌ನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹವನ್ನು ಮಾತ್ರ ತೆಗೆದುಕೊಂಡು ಹೋಗಿದ್ದರು. ಭಕ್ಷಣೆಗಾಗಿ ಹಸುವಿನ ದೇಹವನ್ನು ಮಾತ್ರ ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು. ಕಾಡು ಪ್ರಾಣಿ ದಾಳಿ ಮಾಡಿದ್ರೆ ಹಸುವಿನ ದೇಹದ ಭಾಗಗಳು ಪ್ರತ್ಯೇಕವಾಗಿ ತುಂಡು ತುಂಡಾಗಿ ಬಿಳುವುದಿಲ್ಲ. ಇದು ಮಾಂಸ ಭಕ್ಷಣೆಗೆಂದೇ ಮಾಡಿದ ಹೇಯ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದರು. ಬಳಿಕ ಅದು ಪೊಲೀಸ್ ತನಿಖೆಯಲ್ಲಿ ಖದೀಮರ ಕೃತ್ಯ ಬಯಲಾಗಿತ್ತು.

ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಗಂಭೀರವಾಗಿ ಪರಿಗಣಿಸಿದ್ದ ಉತ್ತರ ಕನ್ನಡ ಜಿಲ್ಲಾ ಪೊಲೀಸ್​, ಮೊದಲಿಗೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದರು. ಇನ್ನುಳಿದ ಇಬ್ಬರು ಆರೋಪಿಗಳಿಗೆ ಶೋಧ ನಡೆಸಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಸುಳಿವು ಕೊಟ್ಟವರಿಗೆ 50,000 ರೂ. ಬಹುಮಾನ ನೀಡುವುದಾಗಿ ಉತ್ತರ ಕನ್ನಡ ಎಸ್​ಪಿ ಘೋಷಿಸಿದ್ದರು.

ಇನ್ನು ಗೋವು ಮತ್ತು ಜಾನುವಾರುಗಳ ಕಳವು, ಹತ್ಯೆ, ಕ್ರೌರ್ಯಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಗೋ ಕಳವು, ಹತ್ಯೆ ಮಾಡುವವರನ್ನು ರಸ್ತೆಯಲ್ಲಿ ಸರ್ಕಲ್​​ನಲ್ಲಿ ನಿಲ್ಲಿಸಿ ಸಾರ್ವಜನಿಕವಾಗಿ ಗುಂಡಿಕ್ಕಬೇಕು ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ