ಉತ್ತರ ಕನ್ನಡ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಕಾರವಾರದ ಜನ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಕಾರವಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಉತ್ತರ ಕನ್ನಡ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಕಾರವಾರದ ಜನ
ಕಾರವಾರದ ಜನರು ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 01, 2022 | 1:02 PM

ಕಾರವಾರ: ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ಚುರುಕಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ಕಾರವಾರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಗರದಲ್ಲಿ ಶೀಘ್ರ ಆಸ್ಪತ್ರೆ ಸ್ಥಾಪಿಸದಿದ್ದರೆ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ತಮ್ಮ ದೇಹದ ರಕ್ತ ತೆಗೆದು ಬರೆದಿರುವ ಪತ್ರದಲ್ಲಿ ‘ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್, ನಮಗೆ ಬೇಕು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಎಂದು ಬರೆದು ಪ್ರಧಾನಿಗೆ ಕಳಿಸಿಕೊಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು (Multi Speciality Hospital for Uttara Kannada District) ಎನ್ನುವ ಮಾತಿಗೆ ಇದೀಗ ಹೊಸ ಬಲ ಬಂದಿದೆ. ಇಷ್ಟು ದಿನ ನಾಲ್ಕು ಜನರು ಒಂದೆಡೆ ಸೇರಿದಾಗಲೆಲ್ಲಾ ಕೇಳಿ ಬರುತ್ತಿದ್ದ ಒತ್ತಾಯ ಇದೀಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಮೊದಲೇ ಘೋಷಿಸಿದ್ದಂತೆ ಅಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನವನ್ನು ಜಿಲ್ಲೆಯ ಜನರು ಆರಂಭಿಸಲಿದ್ದಾರೆ. ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಶುರುಮಾಡಲು ಕಾರವಾರ ನಿವಾಸಿಗಳೂ ಸೇರಿದಂತೆ ಜಿಲ್ಲೆಯ ಜನರು ಮುಂದಾಗಿದ್ದಾರೆ.

ಬಹುದಿನಗಳ ಬೇಡಿಕೆ

ಭೌಗೋಳಿಕವಾಗಿ ಬಹು ವಿಸ್ತಾರವಾಗಿರುವ ಜಿಲ್ಲೆಯಲ್ಲಿ ಒಂದೇ ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇದೇ ಕಾರಣಕ್ಕೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ದೂರದ ಉಡುಪಿ, ಮಂಗಳೂರು, ಹುಬ್ಬಳ್ಳಿ, ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಕಳೆದ ಜುಲೈ 20 ರಂದು ಸಂಭವಿಸಿದ ಆಂಬುಲೆನ್ಸ್ ಅಪಘಾತದಲ್ಲಿ ಹೊನ್ನಾವರದ ನಾಲ್ವರು ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಕೂಗು ಪ್ರಬಲವಾಗಿತ್ತು. ಇದೀಗ ಹೋರಾಟ ಸಂಘಟಿತ ರೂಪ ಪಡೆದುಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಮಲ್ಪಿ ಸ್ಪಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜನರು ಘಟ್ಟದ ಮೇಲಿನ ತಾಲ್ಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ಹಳಿಯಾಳಗಳಿಗೆ ಸೇರಿದಂತೆ ಒಂದು ಆಸ್ಪತ್ರೆ. ಘಟ್ಟದ ಕೆಳಗಿನ ತಾಲ್ಲೂಕುಗಳಾದ ಕುಮಟ, ಹೊನ್ನಾವರ, ಅಂಕೋಲ, ಭಟ್ಕಳ, ಕಾರವಾರ, ಜೋಯಿಡಾಕ್ಕೆ ಸೇರಿದಂತೆ ಮತ್ತೊಂದು ಆಸ್ಪತ್ರೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

Published On - 12:59 pm, Mon, 1 August 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?