AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಬಾಂಬ್ ಸ್ಫೋಟ: ಭಟ್ಕಳದ ಅಬ್ದುಲ್ ಕಬೀರ್​ ಖಾದೀರ್​ಗೆ ಎಟಿಎಸ್​ ನೋಟಿಸ್​

ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಪುಣೆ ಬಾಂಬ್ ಸ್ಫೋಟ: ಭಟ್ಕಳದ ಅಬ್ದುಲ್ ಕಬೀರ್​ ಖಾದೀರ್​ಗೆ ಎಟಿಎಸ್​ ನೋಟಿಸ್​
ಎಟಿಎಸ್​
ವಿವೇಕ ಬಿರಾದಾರ
|

Updated on: Jun 22, 2024 | 7:52 AM

Share

ಬೆಂಗಳೂರು, ಜೂನ್​ 22: 2008ರ ಮಹಾರಾಷ್ಟ್ರದ (Maharashtra) ಪುಣೆ ಬಾಂಬ್ ಸ್ಫೋಟ (Pune Bomb Blast) ಪ್ರಕರಣದ ಆರೋಪಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ (ATS) ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ್​​​ದಲ್ಲಿ (Bhatkala) ಜಾಲಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಹಶೀಲ್ದಾರ್​ ಕಚೇರಿ, ಪುರಸಭೆಗೆ ನೋಟಿಸ್​ ಅಂಟಿಸಿದೆ.

ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ

2008ರಲ್ಲಿ ಪುಣೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಬೀರ್‌ ಖಾದೀರ್‌ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ್ ಕಳೆದ ಹಲವು ವರ್ಷಗಳಿಂದ ತಲೆಮರೆಸಿ ಕೊಂಡಿದ್ದು, ಈತ ಆಗಾಗ ಭಟ್ಕಳಕ್ಕೆ ಬಂದು ಹೋಗುತ್ತಿದ್ದ ವಿಚಾರ ಎಟಿಎಸ್​ಗೆ ತಿಳಿದೆ.

ಹೀಗಾಗಿ ಮುಂಬೈ ಎಟಿಎಸ್ ತಂಡ ಈತನಿಗಾಗಿ ಜೂ.10ರಂದು ಭಟ್ಕಳಕ್ಕೆ ಆಗಮಿಸಿ ಮನೆ, ಭಟ್ಕಳ ತಹಸೀಲ್ದಾ‌ರ್ ಕಚೇರಿ ಹಾಗೂ ಪುರಸಭೆಯ ನೋಟಿಸ್‌ ಬೋರ್ಡಿಗೆ ಜೂ.21ರಂದು ಪುಣೆ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಇರುವ ನೋಟಿಸ್ ಅಂಟಿಸಿ ತೆರಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​