Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ; ಕಾರವಾರದಲ್ಲಿ ಪುಣೆ ಉದ್ಯಮಿ ಬರ್ಬರ ಕೊಲೆ, ಕಲಬುರಗಿಯಲ್ಲಿ ಪದವಿ ವಿಧ್ಯಾರ್ಥಿಗೆ ಚಾಕು ಇರಿದು ಹತ್ಯೆ

ರಾಜ್ಯದಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಓರ್ವ ಉದ್ಯಮಿ ಹಾಗೂ ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಾತ್ರೆಗೆಂದು ಪುಣೆಯಿಂದ ಕಾರವಾರಕ್ಕೆ ಬಂದು ನೆಲೆಸಿದ್ದ ಉದ್ಯಮಿ ಹಾಗೂ ಆತನ ಪತ್ನಿ ಮೇಲೆ ಇಂದು ಬೆಳಗಿನ ಜಾವ ಊರಿಗೆ ತೆರಳುವಾಗ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮತ್ತೊಂದೆಡೆ ಮಹಾರಾಷ್ಟ್ರದ ಮುಂಬೈನಿಂದ ತಾಯಿಯ ಜೊತೆ ಕಾರವಾರಕ್ಕೆ ಬಂದಿದ್ದ ವಿದ್ಯಾರ್ಥಿಯನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಪ್ರತ್ಯೇಕ ಘಟನೆ; ಕಾರವಾರದಲ್ಲಿ ಪುಣೆ ಉದ್ಯಮಿ ಬರ್ಬರ ಕೊಲೆ, ಕಲಬುರಗಿಯಲ್ಲಿ ಪದವಿ ವಿಧ್ಯಾರ್ಥಿಗೆ ಚಾಕು ಇರಿದು ಹತ್ಯೆ
ಉದ್ಯಮಿಯನ್ನು ಮನೆಯೊಳಗೆ ಕೊಚ್ಚಿ ಕೊಲೆ ಮಾಡಲಾದ ದೃಶ್ಯ ಹಾಗೂ ಕೊಲೆಯಾದ ವಿದ್ಯಾರ್ಥಿ ಸುಮೀತ್‌
Follow us
TV9 Web
| Updated By: ಆಯೇಷಾ ಬಾನು

Updated on: Sep 22, 2024 | 8:45 AM

ಕಾರವಾರ, ಸೆ.22: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ಬರ್ಬರ ಕೊಲೆಯಾಗಿದೆ(Murder). ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು ಪತಿ ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ.

ಮಹಿಳೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ರವಾನೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು ಎಂಬುವುದು ತಿಳಿದುಬಂದಿಲ್ಲ. ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌; ಮಳೆಗಾಲದಲ್ಲಿಯು 32 ಡಿಗ್ರಿ ಬಿಸಿಲು ದಾಖಲು

ಚಾಕುವಿನಿಂದ ಇರಿದು ಪದವಿ ವಿದ್ಯಾರ್ಥಿಯ ಬರ್ಬರ ಕೊಲೆ

ಇನ್ನು ಮತ್ತೊಂದೆಡೆ ಕಲಬುರಗಿ ಹೊರವಲಯದ ನಾಗನಹಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಪದವಿ ವಿದ್ಯಾರ್ಥಿಯ ಬರ್ಬರ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಸುಮೀತ್ ಎಂಬ ಯುವಕ ನಾಲ್ಕೈದು ದಿನಗಳ ಹಿಂದೆಯಷ್ಟೇ ತಾಯಿಯೊಂದಿಗೆ ಊರಿಗೆ ಬಂದಿದ್ದ. ಯುವತಿಯೊಬ್ಬಳ ಜೊತೆ ಸುಮಿತ್‌ ಸೋದರ ಸಚಿನ್ ಸ್ನೇಹ ಹೊಂದಿದ್ದ. ಸಚಿನ್ ಮೇಲಿನ ಕೋಪಕ್ಕೆ ಸುಮಿತ್‌ ಜೊತೆ ಯುವತಿ ಕಡೆಯವರು ಗಲಾಟೆ ಮಾಡಿದ್ದಾರೆ. ಇದೇ ವಿಚಾರಕ್ಕೆ ಸುಮಿತ್‌ ತಾಯಿ ಜೊತೆ ನಾಲ್ಕೈದು ಜನರು ಗಲಾಟೆ ಮಾಡಿದ್ದರು. ಈ ಗಲಾಟೆ ವೇಳೆ ಸುಮೀತ್‌ ಮಲ್ಲಾಬಾದ್(19)ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಯುವತಿಯ ಕುಟುಂಬಸ್ಥರಿಂದ ಸಚಿನ್ ಸೋದರ ಸುಮೀತ್‌ ಹತ್ಯೆ ನಡೆದಿದೆ. ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು