ಕಾರವಾರದಲ್ಲಿ ಒಂದೇ ಕಣ್ಣಿನ ಅಪರೂಪದ ಹಾವು ಪತ್ತೆ, ಹಾವು ಒಕ್ಕಣ್ಣು ಆಗಲು ಕಾರಣವೇನು ಗೊತ್ತಾ?

ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಸುಮಾರು 4.5 ಅಡಿಯ ಉದ್ದದ ಒಂದು ಕಣ್ಣಿನ ಹಾವು ಕಾಣಿಸಿಕೊಂಡಿದೆ.

ಕಾರವಾರದಲ್ಲಿ ಒಂದೇ ಕಣ್ಣಿನ ಅಪರೂಪದ ಹಾವು ಪತ್ತೆ, ಹಾವು ಒಕ್ಕಣ್ಣು ಆಗಲು ಕಾರಣವೇನು ಗೊತ್ತಾ?
ಒಂದೇ ಕಣ್ಣಿನ ಅಪರೂಪದ ಹಾವು ಪತ್ತೆ
Follow us
TV9 Web
| Updated By: ಆಯೇಷಾ ಬಾನು

Updated on:Feb 22, 2023 | 2:57 PM

ಕಾರವಾರ: ಅತಿ ವಿರಳ ಒಕ್ಕಣ್ಣಿನ (ಒಂದೇ ಕಣ್ಣು) ನಾಗರಹಾವು ತಾಲೂಕಿನ ಕದ್ರಾದಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಸುಮಾರು 4.5 ಅಡಿಯ ಉದ್ದದ ಹಾವೊಂದು ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿದ್ದಾರೆ . ತಕ್ಷಣ ಸ್ಥಳಕ್ಕೆ ತೆರಳಿದ ಅವರು, ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ವಲಯ ಅರಣ್ಯ ಅಧಿಕಾರಿ ಲೋಕೇಶ್ ಪಾಟಣನಕರ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ.

ಚೌಗ್ಲೆಯವರ ಮನೆ ಹತ್ತಿರ ರಕ್ಷಿಸಿದ್ದ ನಾಗರ ಹಾವಿಗೆ ಒಂದು ಕಣ್ಣು ಇರಲಿಲ್ಲ. ಈ ಒಕ್ಕಣ್ಣಿನ ನಾಗಿಣಿ ಒಂದು ಕಣ್ಣಿನ ಸಂಪೂರ್ಣ ದಷ್ಟಿ ಕಳೆದುಕೊಂಡಿದೆ. ಈ ರೀತಿ ಒಕ್ಕಣ್ಣಿನ ನಾಗರ ಸಾಮಾನ್ಯವಾಗಿ ಕಾಣ ಸಿಗುವುದು ತೀರಾ ವಿರಳ. ಈ ನಾಗರ ಹಾವಿಗೆ ಕಣ್ಣಿನ ಗುಳಿ ಮಾತ್ರವಿದ್ದು, ಕಣ್ಣುಗುಡ್ಡೆ ಇರುವುದಿಲ್ಲ. ಕೆಲವು ಸಂದರ್ಭದಲ್ಲಿ ಹಾವುಗಳು ಮುಂಗುಸಿ ಜೊತೆ ಕಾದಾಡುವ ಸಂದರ್ಭದಲ್ಲಿ ಕಣ್ಣನ್ನು ಕಳೆದುಕೊಳ್ಳವ ಸಾಧ್ಯತೆ ಇರುತ್ತದೆ. ಇನ್ನೂ ಕೆಲವು ಸಂದರ್ಭದಲ್ಲಿ ಇಲಿಗಳು ಕಚ್ಚುವುದರಿಂದಲೂ ಹೀಗೆ ಆಗಿರುವ ಸಾಧ್ಯತೆ ಇರುತ್ತದೆ ಎಂದು ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್.ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಅಮಾವಾಸ್ಯೆ ಕತ್ತಲಲ್ಲಿ ಮಲಗಲು ಜಮೀನಿಗೆ ಹೋಗ್ತಿದ್ದ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದರು, ಕಾರಣ ಏನು?

ಇನ್ನು ಅತಿ ವಿರಳವಾಗಿ ಅನುವಂಶೀಯವಾಗಿ ಹಠಾತ್ ಬದಲಾವಣೆಯಿಂದಾಗಿಯೂ ಇಂತಹ ವಿದ್ಯಾಮಾನಗಳಿಗೆ ಕಾರಣವಾಗುತ್ತದೆ. ಒಂದು ಕಣ್ಣಿನ ದೃಷ್ಠಿ ಕುಂಠಿತಗೊಂಡರೆ ಹಾವುಗಳ ಜೀವನಕ್ರಮದ ಮೇಲೇನೂ ಪರಿಣಾಮ ಬೀರುವುದಿಲ್ಲ. ಅವು ನಿಸರ್ಗದಲ್ಲಿ ಸಹಜ ಜೀವನವನ್ನು ನಡೆಸುವ ಸಾಮರ್ಥ್ಯವನ್ನು ಹೊಂದಿವೆ. ಇದು ನಾಗರ ಹಾವುಗಳ ಮಿಲನ ಋತುವಾಗಿರುವುದರಿಂದ ನಾಗರ ಹಾವುಗಳು ಹೆಚ್ಚು ಚಟುವಟಿಕೆಯಿಂದ ಇರುತ್ತವೆ. ಒಂದು ಹೆಣ್ಣು ನಾಗರ ಹಾವು ಇದ್ದ ಜಾಗದ ಆಸುಪಾಸಿನಲ್ಲಿ ಎರಡು ನಾಗರ ಹಾವುಗಳಿರುವ ಸಾಧ್ಯತೆ ಕೂಡಾ ಇರುತ್ತದೆ ಎನ್ನುತ್ತಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 2:57 pm, Wed, 22 February 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ