ಸಮುದ್ರದಲ್ಲಿ ಮುಳುಗುತ್ತಿದ್ದ ಏಳು ಜನ ಪ್ರವಾಸಿಗರು ಸೇರಿ ಪಿಂಡ ಪ್ರಧಾನಕ್ಕೆ ಆಗಮಿಸಿದ್ದ ಓರ್ವನ ರಕ್ಷಣೆ; ಇಲ್ಲಿದೆ ವಿವರ

ಉತ್ತರಕನ್ನಡ(Uttara Kannada) ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರಕ್ಕೆ ಬಂದಿದ್ದ ಪ್ರವಾಸಿಗರು ಸೇರಿದಂತೆ ಪಿಂಡ ಪ್ರಧಾನಕ್ಕೆ ಆಗಮಿಸಿದ್ದ ಓರ್ವನನ್ನು ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಮುದ್ರದಲ್ಲಿ ಮುಳುಗುತ್ತಿದ್ದ ಏಳು ಜನ ಪ್ರವಾಸಿಗರು ಸೇರಿ ಪಿಂಡ ಪ್ರಧಾನಕ್ಕೆ ಆಗಮಿಸಿದ್ದ ಓರ್ವನ ರಕ್ಷಣೆ; ಇಲ್ಲಿದೆ ವಿವರ
ಗೋಕರ್ಣದಲ್ಲಿ ಪ್ರವಾಸಿಗರ ರಕ್ಷಣೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 10, 2023 | 3:28 PM

ಉತ್ತರ ಕನ್ನಡ, ಅ.10: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ(Uttara Kannada) ಜಿಲ್ಲೆಯ  ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಸದಸ್ಯರಾದ ಪರಶುರಾಮ(44), ರುಕ್ಮಿಣಿ(38), ಧೀರಜ್(14), ಅಕ್ಷರ(14), ಖುಷಿ(13), ದೀಪಿಕಾ(12) ನಂದ ಕಿಶೋರ(10) ಹಾಗೂ ಪಿಂಡ ಪ್ರಧಾನಕ್ಕೆ ಬಂದಿದ್ದ ಹುಬ್ಬಳ್ಳಿಯ ಎಲ್ ವಿ ಪಾಟೀಲ್ (30) ಅವರು ಸಮುದ್ರದಲ್ಲಿ ಮುಳುಗಡೆಯಾಗಿದ್ದರು. ಇದನ್ನು ನೋಡಿದ ಕೂಡಲೇ ಲೈಪ್ ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ ಅಂಬಿಗ, ಲೋಕೇಶ್ ಹರಿಕಾಂತ ಎಂಬುವವರು ಸಮುದ್ರಕ್ಕೀಳಿದು ರಕ್ಷಣೆ ಮಾಡಿದ್ದಾರೆ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನು ಕಳೆದ ಸೆಪ್ಟೆಂಬರ್ 18 ರಂದು ಗೋಕರ್ಣದ  ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿತ್ತು. ಹೌದು, ಬೆಂಗಳೂರಿನಿಂದ ಗೋಕರ್ಣಕ್ಕೆ ಆಗಮಿಸಿದ್ದ ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವವರು ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು.

ಇದನ್ನೂ ಓದಿ:ಮುಳುಗುತ್ತಿದ್ದ ಮಕ್ಕಳನ್ನ ಬಾಹುಬಲಿ ಸಿನಿಮಾದ ಶಿವಗಾಮಿಯಂತೆ ರಕ್ಷಿಸಿ.. ಪ್ರಾಣ ಬಿಟ್ಟ ತಂದೆ..!

ಈ ವೇಳೆ ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳು ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದರು. ಜೊತೆಗೆ ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೂಡ ನೀಡಲಾಗಿತ್ತು. ಇದಾದ ಬಳಿಕ ಗೋಕರ್ಣ ಪೊಲೀಸರು ಸ್ಥಳಕ್ಕೆ  ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Tue, 10 October 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ