ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಪ್ರವಾಸಕ್ಕೆಂದು ತೆರಳಿದಾಗ ಎಷ್ಟೇ ಜಾಗೃತೆ ವಹಿಸಿದರೂ ಅದು ಕಡಿಮೆಯೇ, ಅದರಂತೆ ಕುಮಟಾ ತಾಲೂಕಿನ ಗೋಕರ್ಣ(Gokarna) ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನ ರಕ್ಷಣೆ ಮಾಡಿದ ಘಟನೆ ಇಂದು(ಶನಿವಾರ) ನಡೆದಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 12, 2024 | 3:05 PM

ಉತ್ತರ ಕನ್ನಡ, ಅ.12: ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನ ರಕ್ಷಣೆ ಮಾಡಿದ ಘಟನೆ ಇಂದು(ಶನಿವಾರ) ಕುಮಟಾ ತಾಲೂಕಿನ ಗೋಕರ್ಣ(Gokarna)ದ ಮುಖ್ಯ ಕಡಲತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ರಜೆ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಯುವಕರು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ  ಶಿವಪ್ರಸಾದ್ , ಮೋಹನ್ , ಶಿವಪ್ರಸಾದ್ ಅಂಬಿಗ ಎನ್ನುವವರು ರಕ್ಷಣೆಗೆ ಮಾಡಿದ್ದಾರೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತುಂಬಿ ಹರಿಯುತ್ತಿರುವ ಹಳ್ಳದ ಮಧ್ಯೆ ಸಿಲುಕಿದ ಮಾನಸಿಕ ಅಸ್ವಸ್ಥ

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಕಾಲವಾಡ್ ಗ್ರಾಮದ ತುಂಬಿ ಹರಿಯುತ್ತಿರುವ ಬೆಣ್ಣೆಹಳ್ಳದ ಮಧ್ಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಸಿಲುಕಿದ್ದಾನೆ. ಮೂರು ದಿನಗಳಿಂದ ತುಂಬಿ ಹರಿಯುತ್ತಿರುವ ಬೆಣ್ಣೆಹಳ್ಳದಲ್ಲಿ ಇವತ್ತು ನೀರಿನ ಪ್ರಮಾಣ ಇಳಿಕೆಯಾಗಿತ್ತು. ಈ ವೇಳೆ ಜಮೀನಿನ ಮಧ್ಯೆ ಮಾನಸಿಕ ಅಸ್ವಸ್ಥ ಲಕ್ಷ್ಮಣ ಬಾರಕೇರ್ ಕಾಣಿಸಿಕೊಂಡಿದ್ದಾನೆ. ಕೂಡಲೇ ಸ್ಥಳೀಯರು ನವಲಗುಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ನವಲಗುಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; 40 ಜನರ ರಕ್ಷಣೆ

ಕದ್ದ ಬುಲೆಟ್ ಬೈಕ್ ಅಪಘಾತ, ಕಳ್ಳ ಸಾವು

ತಮಿಳುನಾಡು: ಸಾರಿಗೆ ಬಸ್ ಮತ್ತು ಬುಲೆಟ್ ಬೈಕ್ ನಡುವೆ ಅಪಘಾತ ನಡೆದು, ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದ ಕಳ್ಳ ಸಾವನ್ನಪ್ಪಿರುವ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ಕೆಲವರಪಲ್ಲಿ ಗ್ರಾಮದ ಸಮೀಪ ನಡೆದಿದೆ. ಅಭಿನೇಶ್ ಪಾಡಿಯಂನ್(33) ಮೃತ ಬೈಕ್ ಕಳ್ಳ. ಶೇಖರ್ ರೆಡ್ಡಿ ಎಂಬುವವರ ಬುಲೆಟ್ ಬೈಕ್​ನ್ನು ಹೊಸೂರು ಸಮೀಪ ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ಮೂರು ಮಂದಿ ಬೈಕ್ ಕಳ್ಳರು ಸೇರಿಕೊಂಡು ಕಳ್ಳತನ ಮಾಡಿ ಹೋಗುತ್ತಿದ್ದಾಗ ಅಪಘಾತವಾಗಿದೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರು ಕಳ್ಖರನ್ನ ಹಿಡಿದ ಸ್ಥಳೀಯರು, ನಲ್ಲೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಧ್ಯ ಮೃತದೇಹ ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 12 October 24

ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ