ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ವಿದ್ಯಾರ್ಥಿಗಳು(Students) ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ನಗರದಲ್ಲಿ ನಡೆದಿದೆ. ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ(School) ಈ ಅವಗಢ ಸಂಭವಿಸಿದ್ದು, ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದೆ(Injury). ಅಂಕೋಲಾದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ
ಉಪ್ಪಾರಪೇಟೆ ಹೋಟೆಲ್‌ನಲ್ಲಿ ಅಗ್ನಿ ಅವಘಡ ಬೆಂಗಳೂರಿನ ಗಾಂಧಿನಗರದ ಸುಖ್ ಸಾಗರ್ ಹೋಟೆಲ್‌ನಲ್ಲಿ ಮಧ್ಯಾಹ್ನ 2:45 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಹೋಟೆಲ್ ನ ಟರೇಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಹಿನ್ನೆಲೆ ತಪ್ಪಿದ ಭಾರಿ ಅನಾಹುತ ತಪ್ಪಿದೆ. ತಡವಾಗಿದ್ದರೆ ಅಕ್ಕಪಕ್ಕದ ಕಟ್ಟಡಕ್ಕೆ ಬೆಂಕಿ ವ್ಯಾಪಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:
Gurugram Roof Collapse: ಗುರುಗ್ರಾಮದಲ್ಲಿ ಅಪಾರ್ಟ್ಮೆಂಟ್ ಮೇಲ್ಛಾವಣಿ ಕುಸಿತ; ನಾಲ್ವರು ಸಾವು, ಹಲವರು ನಾಪತ್ತೆ
Video: ತನ್ನ ಶಾಲೆಯ ಶಿಕ್ಷಕಿಯನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಅಧಿಕಾರಿ ಬಳಿ ಹಠ ಮಾಡಿದ 2ನೇ ಕ್ಲಾಸ್ ಹುಡುಗ !