ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ
ಮಳೆ(Rain) ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯ 5 ತಾಲೂಕಿನ ಶಾಲೆ (School)ಗಳಿಗೆ ನಾಳೆಯೂ ರಜೆ ಘೋಷಿಸಿ ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಇತ್ತ ಕುಮಟಾ ತಾಲೂಕಿನ ಕೋಟೆಗುಡ್ಡ ಗ್ರಾಮದಲ್ಲಿ ನಿರಂತರ ಮಳೆಯಿಂದ ಮನೆಯೊಂದು ನೆಲಸಮವಾಗಿದೆ.
ಉತ್ತರ ಕನ್ನಡ, ಜು.07: ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಮುನಿಸಿಕೊಂಡಿದ್ದಾನೆ. ಈ ಹಿನ್ನಲೆ ಜಿಲ್ಲೆಯ 5 ತಾಲೂಕಿನ ಶಾಲೆ (School)ಗಳಿಗೆ ನಾಳೆಯೂ ರಜೆ ಘೋಷಿಸಿ ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ(Rain) ಆರ್ಭಟ ಮುಂದುವರಿದ ಹಿನ್ನೆಲೆ ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆಯಿಂದ ಮನೆ ನೆಲಸಮ
ಇನ್ನು ನಿರಂತರ ಮಳೆಯಿಂದ ಕುಮಟಾ ತಾಲೂಕಿನ ಕೋಟೆಗುಡ್ಡ ಗ್ರಾಮದಲ್ಲಿ ಮನೆಯೊಂದು ನೆಲಸಮವಾಗಿದೆ. ಕೋಟೆಗುಡ್ಡ ನಿವಾಸಿ ರಘು ಹಮ್ಮು ಮುಕ್ರಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದ್ದು, ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ: ನೀರಿನ ನಡುಗಡ್ಡೆಗಳಾದ ಚೆಂಡಿಯಾ ಗ್ರಾಮದ ಮನೆಗಳು
ಕರ್ನಲ್ ಹಿಲ್ ಬಳಿ ಗುಡ್ಡಕುಸಿದು ರಸ್ತೆ ಮೇಲೆ ಬಿದ್ದಿದ್ದ ಮಣ್ಣು ತೆರವು
ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ನಲ್ ಹಿಲ್ ಬಳಿ ಗುಡ್ಡಕುಸಿದು ರಸ್ತೆ ಮೇಲೆ ಬಿದ್ದಿದ್ದ ಮಣ್ಣನ್ನು ಜಿಲ್ಲಾಡಳಿತ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಗುಡ್ಡ ಕುಸಿತದಿಂದ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸದ್ಯ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇಂದು ಬೆಳಿಗ್ಗೆ ಮಳೆಯಿಂದ ಗುಡ್ಡ ಕುಸಿದು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:57 pm, Sun, 7 July 24